

ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ನಾವು ಸಹೋದರರಿದ್ದಂತೆ ಎಂದು ಹೇಳಿದ್ದರೂ ಕಾಂಗ್ರೆಸ್ ನಲ್ಲಿ ಕುರ್ಚಿ ಕದನ ವಿರಾಮ ಮಾತ್ರ ಮೇಲಿಂದ ಮೇಲೆ ಉಲ್ಲಂಘನೆ ಆಗುತ್ತಲೇ ಇದೆ.
ಡಿಕೆ ಶಿವಕುಮಾರ್ ಅವರ ಆಪ್ತ ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಒಂದು ಹೆಜ್ಜೆ ಮುಂದೆ ಹೋಗಿ, ಜನವರಿ 6 ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಬಳಿಕ ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ತಮ್ಮ ಬೆಂಬಲಿಗ ಶಾಸಕನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಇಕ್ಬಾಲ್ ಹುಸೇನ್ ಮಾತನ್ನು ಯಾರೂ ನಂಬಬೇಡಿ, ಅವನಿಗೆ ಮಾತಾಡೋ ಚಟ ಇದೆ. ಅವನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿಡಿಮಿಡಿಗೊಂಡರು.
ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್ ಅವರು, ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ರಂದು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯನ್ನು ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು. ಡಿಕೆಶಿಗೆ ಅವಕಾಶ ಸಿಗಬೇಕು. ಇದಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜನವರಿ 6ರಂದು ಸಿಎಂ ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಿದ್ದರು.
Advertisement