

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 'ಸಿಎಂ ಕುರ್ಚಿ ಗುದ್ದಾಟ' ಜೋರಾಗಿರುವಂತೆಯೇ, ಸಿದ್ದು ಅತ್ಯಾಪ್ತ ಕೆ.ಎನ್. ರಾಜಣ್ಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಈ ಚರ್ಚೆ ಶುರುವಾದ ಆರಂಭದಿಂದಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ಬ್ಯಾಟ್ ಬೀಸುತ್ತಿರುವ ರಾಜಣ್ಣ, ಇದಕ್ಕಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಇತ್ತೀಚಿಗೆ ದಲಿತ ಸಿಎಂ ಪರ ಧ್ವನಿ ಎತ್ತಿದ್ದ ರಾಜಣ್ಣ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಈಗ ಇದ್ದಕ್ಕಿದ್ದಂತೆ ಡಿಕೆ ಶಿವಕುಮಾರ್ ಅವರನ್ನು
ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಭೇಟಿಯಾಗಿದ್ದು, ಉಭಯ ನಾಯಕರ ನಡುವಿನ ಚರ್ಚೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚಿಗೆ ಬೆಳಗಾವಿ ಅಧಿವೇಶನದಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ನಿಂದ ಸಾಲ ನೀಡಿಕೆಗಾಗಿ ಹಂಚಿಕೆಯಾದ ಅನುದಾನದಲ್ಲಿ ತಾರತಮ್ಯ ಆಗಿದ್ದು, ಮಧುಗಿರಿಗೆ ಹೆಚ್ಚು ಸಿಕ್ಕಿದೆ. ಕುಣಿಗಲ್ ಗೆ ಕಡಿಮೆ ಸಿಕ್ಕಿದೆ ಎಂದು ಡಿಕೆ ಶಿವಕುಮಾರ್ ಸಂಬಂಧಿಯೂ ಆಗಿರುವ ಶಾಸಕ ಡಾ. ರಂಗನಾಥ್ ಅಸಮಾಧಾನ ಹೊರಹಾಕಿದ್ದರು.
ಇನ್ನೂ ನಾಯಕತ್ವ ಬದಲಾವಣೆ ಕುರಿತು ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೆ, ಒಪ್ಪಂದ ಆಗಿದೆ ಎಂದು ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ. ಈಎಲ್ಲಾ ಬೆಳವಣಿಗೆಗಳ ನಡುವೆ ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
Advertisement