'ಇಷ್ಟು ದಿನ ಸೈಲೆಂಟ್‌ ಆಗಿದ್ದೆ, ಇನ್ಮುಂದೆ ಸುಮ್ಮನೆ ಇರಲ್ಲ': 'Mass Leader'ಗೆ ಶ್ರೀರಾಮುಲು ಸವಾಲು!

ದೆಹಲಿಗೆ ಅಪಾಯಿಂಟ್‌ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ. ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್‌ಗೆ ಹೇಳಿ ಬರುತ್ತೇನೆ.
Sriramulu
ಮಾಜಿ ಸಚಿವ ಶ್ರೀರಾಮುಲು
Updated on

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಆಂತರಿಕ ಕಲಹ ಮುಂದುವರೆದಿರುವಂತೆಯೇ ರಾಜ್ಯದ ಮಾಸ್ ಲೀಡರ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಶ್ರೀರಾಮುಲು, 'ಇಷ್ಟು ದಿನ ಸೈಲೆಂಟ್‌ ಆಗಿದ್ದೆ, ಇನ್ಮುಂದೆ ಸುಮ್ಮನೆ ಇರಲ್ಲ.. ದೆಹಲಿಗೆ ಅಪಾಯಿಂಟ್‌ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ.

ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್‌ಗೆ ಹೇಳಿ ಬರುತ್ತೇನೆ. ಅಲ್ಲದೆ ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ. ಆದರೆ, ಇನ್ನು ಮುಂದೆ ಸುಮ್ಮನೆ ಇರೋದಿಲ್ಲ.. ಎಂದಿದ್ದಾರೆ.

ಬಿಜೆಪಿ ಬಿಡೋದಿಲ್ಲ

ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ. ಆದರೆ ಬಡವರು, ಶ್ರಮಿಕರು, ರೈತರ ಪರ ಇರುವ ಕಾರ್ಯಕರ್ತರ ಜತೆ ಇರುತ್ತೇನೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಯಾರ ಮುಲಾಜಿಲ್ಲದೇ ಮಾತನಾಡುತ್ತೇನೆ

ಇನ್ನು ಮುಂದೆ ನಾನು ಯಾರ ಮುಲಾಜೂ ಇಲ್ಲದೆ ಮಾತನಾಡು ತ್ತೇನೆ. ಈ ಬಾರಿ ನಮ್ಮಂಥವರನ್ನು ಅವಮಾನ ಮಾಡಿದರೆ ಸುಮ್ಮ ನಿರಲ್ಲ, ಬೀದಿಗೆ ಇಳಿದು ಮಾತನಾಡುತ್ತೇನೆ. ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಒಂದು ವೇಳೆ, ನಾನು ಹೋಗಬೇಕು ಅಂದುಕೊಂಡರೆ ನನ್ನನ್ನು ತಡೆಯೋಕೆ ಆಗುತ್ತಾ? ಜೈಲಿನಲ್ಲಿ ಇಡೋಕ್ಕೆ ಆಗುತ್ತಾ? ಈಗಿನ ಕಾಲದಲ್ಲಿ ಯಾರು, ಯಾರ ಮಾತನ್ನೂ ಕೇಳೋಲ್ಲ ಎಂದರು.

Sriramulu
ಬಿಜೆಪಿ ಆಂತರಿಕ ಕಿತ್ತಾಟ: ವಿಜಯೇಂದ್ರ ವಿರೋಧಿ ಬಣ ದೆಹಲಿ ಭೇಟಿ; ವರಿಷ್ಠರೊಂದಿಗೆ ಮಾತುಕತೆ!

ವಿಜಯೇಂದ್ರ ಇದ್ದರೂ ಭಿನ್ನಾಭಿಪ್ರಾಯಗಳಿವೆ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಕಾರ್ಯ ನಿರ್ವಹಿಸುತ್ತಿದ್ದರೂ ಭಿನ್ನಾಭಿಪ್ರಾಯಗಳಿವೆ. ಈ ಕುರಿತು ರಾಷ್ಟ್ರೀಯ ನಾಯಕರು ಕೂರಿಸಿ ಮಾತನಾಡುವ ಕೆಲಸ ಮಾಡಬೇಕು. ವಿಜಯಪುರ ಭಾಗದ ಜನ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು, ಬೆಳಗಾವಿ ಭಾಗದ ಜನ ರಮೇಶ್ ಜಾರಕಿಹೊಳಿ ಅವರನ್ನು, ಉತ್ತರ ಕನ್ನಡ ಭಾಗದ ಜನ ಅನಂತಕುಮಾರ್‌ ಅವರನ್ನು, ಹೈದರಾಬಾದ್ ಕರ್ನಾಟಕ ಭಾಗದ ಜನ ಶ್ರೀರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಏನೇ ಆಗಲಿ, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com