ದೆಹಲಿ ಚುನಾವಣೆ ಗೆಲುವು: BJP ಕಛೇರಿಯಲ್ಲಿ ಸಂಭ್ರಮಾಚರಣೆ; ಕೇಜ್ರಿವಾಲ್‌ ಮುಖವಾಡ ಕಳಚಿದೆ ಎಂದ ವಿಜಯೇಂದ್ರ

ರಾಜ್ಯ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.
ರಾಜ್ಯದಲ್ಲಿ ಸಂಭ್ರಮಾಚರಣೆ ಮಾಡುತ್ತಿರುವ ಬಿಜೆಪಿ ನಾಯಕರು.
ರಾಜ್ಯದಲ್ಲಿ ಸಂಭ್ರಮಾಚರಣೆ ಮಾಡುತ್ತಿರುವ ಬಿಜೆಪಿ ನಾಯಕರು.
Updated on

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಮತಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಈಗಾಗಲೇ ಬಹುಮತಕ್ಕಿಂತ ಹೆಚ್ಚಿನ ಸಂಖ್ಯೆಯ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಈ ಬೆಳವಣಿಗೆ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗುವಂತೆ ಮಾಡಿದೆ.

ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಸಲಾಗುತ್ತಿದ್ದು, ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಸಂಭ್ರಮಾಚರಣೆ ವೇಳೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, 27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿಯಲ್ಲಿ ಅಭೂತಪೂರ್ವ ಗೆಲುವು ದೊರೆತಿದೆ. ದೆಹಲಿಯ ಪಕ್ಷದ ಎಲ್ಲಾ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕಿಡಿಕಾರಿರುವ ಅವರು, ಭ್ರಷ್ಟ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಮುಖವಾಡ ಕಳಚಿದೆ. ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com