
ಬೆಂಗಳೂರು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅತ್ಯಾಕರ್ಷಕ ಗೆಲುವು ಕರ್ನಾಟಕದ ರಾಜಕೀಯದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಣ ರಾಜಕೀಯವನ್ನು ತಣ್ಣಗಾಗಿಸಲು ದೆಹಲಿ ಫಲಿತಾಂಶ ಸಹಾಯ ಮಾಡುವ ಸಾಧ್ಯತೆಯಿದೆ.
ಇದರ ಜೊತೆ ಜೊತೆಗೆ ರಾಜ್ಯ ಕಾಂಗ್ರೆಸ್ ಪಾಲಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಹ ಹೇಳಲಾಗುತ್ತಿದೆ. ಕಲ್ಯಾಣ ಯೋಜನೆಗಳು, ವಿಶೇಷವಾಗಿ ಖಾತರಿಗಳು, ಆಡಳಿತ ವಿರೋಧಿ ಹಾಗೂ ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುವುದಿಲ್ಲ ಎಂಬ ಸಂದೇಶವನ್ನು ಫಲಿತಾಂಶಗಳು ರವಾನಿಸಿವೆ. ಖಾತರಿ ಯೋಜನೆಗಳನ್ನು ಎಎಪಿ ತನ್ನ ಟ್ರಂಪ್ ಕಾರ್ಡ್ ಗಳನ್ನಾಗಿ ಬಳಸಿಕೊಂಡಿತ್ತು.
ಪಕ್ಷದಲ್ಲಿನ ಗುಂಪುಗಾರಿಕೆಯಿಂದ ಬೇಸತ್ತಿರುವ ಬಿಜೆಪಿ ಕಾರ್ಯಕರ್ತರಿಗೆ ಈ ಗೆಲುವು ನೈತಿಕ ಸ್ಥೈರ್ಯ ತುಂಬಬೇಕು. ಈಗ, ಹೈಕಮಾಂಡ್ ಸೂಚನೆಗಳನ್ನು ಅನುಸರಿಸುವಂತೆ ಭಿನ್ನ ಬಣಗಳಿಗೆ ಸೂಚಿಸಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದ ಸಮಸ್ಯೆಯನ್ನು ಫೆಬ್ರವರಿ 20 ರೊಳಗೆ ಪರಿಹರಿಸಲಾಗುವುದು ಎಂದು ಹೇಳಿದ್ದರೂ, ಫೆಬ್ರವರಿ 15 ರೊಳಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮೂಲಗಳು ತಿಳಿಸಿವೆ.
ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದಾಗ ಹಿನ್ನಡೆಯಾಗಿದ್ದರಿಂದ ಕೇಂದ್ರ ನಾಯಕತ್ವವು ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ರಾಜ್ಯ ಘಟಕದಲ್ಲಿ ತೀವ್ರ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿಲ್ಲ.
ದೆಹಲಿ ಚುನಾವಣಾ ಫಲಿತಾಂಶದ ನಂತರ, ಭಿನ್ನಮತೀಯರು ಮತ್ತು 'ತಟಸ್ಥ' ನಾಯಕರು ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸುವವರಿಗೆ ದಿಲ್ಲಿ ಚುನಾವಣಾ ಫಲಿತಾಂಶ ಗಲಿಬಿಲಿಯಾಗಲಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಹೇಳಿದ್ದಾರೆ. ಕರ್ನಾಟಕದಲ್ಲಿ ಪಕ್ಷವು ಸೋತ ನಂತರ, ಅನೇಕರು ಅದನ್ನು ಲಘುವಾಗಿ ಪರಿಗಣಿಸಿದರು ಮತ್ತು ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಈಗ ಮಹಾರಾಷ್ಟ್ರ, ಹರ್ಯಾಣ ಮತ್ತು ದೆಹಲಿಯಲ್ಲಿ ಪಕ್ಷದ ಬ್ಯಾಕ್ ಟು ಬ್ಯಾಕ್ ಯಶಸ್ಸಿನ ನಂತರ, ಅವರು ತಮ್ಮ ಅಭ್ಯಾಸವನ್ನು ಮುಂದುವರಿಸಲು ಕಷ್ಟಪಡುತ್ತಾರೆ ಎಂದು ಅವರು ತಿಳಿಸಿದ್ದಾರೆ. ಈಗ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರ ಮುಂದುವರಿಕೆಯ ದೃಢೀಕರಣ ಮಾತ್ರ ಬಾಕಿ ಉಳಿದಿದೆ. 23 ಸಾಂಸ್ಥಿಕ ಜಿಲ್ಲೆಗಳ ಅಧ್ಯಕ್ಷರನ್ನು ಘೋಷಿಸಲಾಗಿದೆ ಎಂದು ಮಾಜಿ ಎಂಎಲ್‌ಸಿ ಮತ್ತು ಹಿರಿಯ ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಮನೆ ಗೃಹ ಪ್ರವೇಶದ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಂಡಾಯ ತಂಡವು ಯೋಜಿಸಿರುವ ಸಭೆ ನಡೆಯುವ ಸಾಧ್ಯತೆ ಕಡಿಮೆ. ಯಾವುದೇ ಸಭೆ ನಡೆಯುವುದಿಲ್ಲ ನಡೆದಿಲ್ಲ ಎಂದು ಸೋಮಣ್ಣ ಸ್ಪಷ್ಟಪಡಿಸಿದರು. ಶನಿವಾರ ದಾವಣಗೆರೆಯಲ್ಲಿ ಮಾತನಾಡಿದ ಅವರು, ''ರಾಜ್ಯದ 19 ಎನ್‌ಡಿಎ ಸಂಸದರನ್ನು ಗೃಹಪ್ರವೇಶಕ್ಕೆ ಆಹ್ವಾನಿಸಿದ್ದೇನೆ. ತಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂಬ ಊಹಾಪೋಹವನ್ನು ಅವರು ಅಲ್ಲಗಳೆದರು.
ದೆಹಲಿ ಚುನಾವಣಾ ಫಲಿತಾಂಶ ಇತರೆ ರಾಜ್ಯಗಳ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇತರ ವಿಷಯಗಳ ಬಗ್ಗೆ ಚರ್ಚಿಸಿ ಮೈತ್ರಿ ಮಾಡಿಕೊಳ್ಳಲಾಗುವುದು. ವಿಧಾನಸಭಾ ಚುನಾವಣೆಯು ಸ್ಥಳೀಯ ಸಮಸ್ಯೆಗಳ ಮೇಲೆ ಅವಲಂಬಿತವಾಗಿದೆ. ಮೈತ್ರಿ ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ವಿವರಿಸಿದ್ದಾರೆ.
Advertisement