ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ- ಪರಮೇಶ್ವರ್ ಭೇಟಿ: ತೀವ್ರ ಕುತೂಹಲ ಮೂಡಿಸಿದ 45 ನಿಮಿಷಗಳ ಚರ್ಚೆ

ಔತಣಕೂಟದ ನೆಪದಲ್ಲಿ ಸಭೆ ಸೇರುವ ಸಚಿವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದರು. ಆ ನಂತರ ಖರ್ಗೆ- ಪರಮೇಶ್ವರ ಭೇಟಿ ನಡೆದಿರಲಿಲ್ಲ.
Mallikarjun Kharge
ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಗೃಹ ಸಚಿವ ಜಿ. ಪರಮೇಶ್ವರ ಸುಮಾರು 45 ನಿಮಿಷ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸದಾಶಿವನಗರದಲ್ಲಿರುವ ಖರ್ಗೆಯವರ ನಿವಾಸದಲ್ಲಿ ಉಭಯ ನಾಯಕರು ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪರಮೇಶ್ವರ ಅವರು ತಮ್ಮ‌ ನಿವಾಸದಲ್ಲಿ ಸಮುದಾಯದ ಸಚಿವರು, ಶಾಸಕರು ಮತ್ತು ಮುಖಂಡರಿಗೆ ಇತ್ತೀಚೆಗೆ ಆಯೋಜಿಸಲು ಉದ್ದೇಶಿಸಿದ್ದ ಔತಣಕೂಟಕ್ಕೆ ಕಾಂಗ್ರೆಸ್ ಹೈಕಮಾಂಡ್ ತಡೆ ಒಡ್ಡಿತ್ತು. ಔತಣಕೂಟದ ನೆಪದಲ್ಲಿ ಸಭೆ ಸೇರುವ ಸಚಿವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದರು. ಆ ನಂತರ ಖರ್ಗೆ- ಪರಮೇಶ್ವರ ಭೇಟಿ ನಡೆದಿಲ್ಲ.

ದೆಹಲಿ ಫ‌ಲಿತಾಂಶದ ಮರುದಿನವೇ ಅಂದರೆ ರವಿವಾರ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಭೇಟಿಯಾದ ಡಾ. ಪರಮೇಶ್ವರ್‌, ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ “ಬದಲಾವಣೆ’ ಮಾತುಗಳ ಕುರಿತು ಮಾತುಕತೆ ನಡೆಸಿದರು. ಈ ವೇಳೆ ಅಧಿಕಾರ ಹಂಚಿಕೆ ಬಗ್ಗೆ ಕೇಳಿಬರುತ್ತಿರುವ ಮಾತುಗಳು ಮತ್ತು ಅದಕ್ಕೆ ಗೃಹ ಸಚಿವರು ನೀಡಿದ ಪ್ರತಿಕ್ರಿಯೆಗಳೂ ಪ್ರಸ್ತಾಪವಾಗಿವೆ ಎನ್ನಲಾಗಿದೆ.

Mallikarjun Kharge
ಆಡಳಿತ ವಿರೋಧಿ ಅಲೆ ಸೃಷ್ಟಿಸಿದೆವು, ಆದರೆ ಜನಾದೇಶ ಬರಲಿಲ್ಲ: ದೆಹಲಿ ಫಲಿತಾಂಶದ ಬಗ್ಗೆ ಖರ್ಗೆ

ತಾವು ದಲಿತ ಮುಖಂಡರ “ಡಿನ್ನರ್‌ ಸಭೆ’ ಕರೆದಿದ್ದು, ಮರುದಿನವೇ ಅದಕ್ಕೆ ಹೈಕಮಾಂಡ್‌ ಬ್ರೇಕ್‌ ಹಾಕಿರುವ ಬಗ್ಗೆ ಸಮುದಾಯಗಳಲ್ಲಿ ಉಂಟಾದ ಅಸಮಾಧಾನಗಳ ವಿವರಣೆ ನೀಡಿದರು. ಮುಂಬರುವ ದಿನಗಳಲ್ಲಿ ದಲಿತ ಸಮಾವೇಶ ಏರ್ಪಡಿಸುವ ಅವಶ್ಯಕತೆ ಇದೆ. ಈ ಮೂಲಕ ಸಮಸ್ಯೆಗಳನ್ನು ಚರ್ಚಿಸಲು ಅನುಕೂಲ ಆಗಲಿದೆ. ಹಾಗಾಗಿ, ಇದಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದಾದ್ಯಂತ ಪರಿಶಿಷ್ಟ ಜಾತಿ, ಪಂಗಡದ ಸಮಾವೇಶವನ್ನು ಆಯೋಜಿಸಲು ಸಚಿವರಾದ ಕೆ.ಎನ್. ರಾಜಣ್ಣ, ಸತೀಶ ಜಾರಕಿಹೊಳಿ, ಜಿ. ಪರಮೇಶ್ವರ ಯೋಜನೆ ಹಾಕಿಕೊಂಡಿದ್ದಾರೆ. ಈ ಬಗ್ಗೆಯೂ ಪರಮೇಶ್ವರ ಅವರು ಖರ್ಗೆ ಜೊತೆ ಮಾತುಕತೆ ನಡೆಸಿದರು ಎಂದೂ ಮೂಲಗಳು ತಿಳಿಸಿವೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ಜತೆ ಒಂದೇ ಕಾರಿನಲ್ಲಿ ಖರ್ಗೆಯವರ ನಿವಾಸಕ್ಕೆ ಪರಮೇಶ್ವರ ಬಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com