ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚಲು ತೀರ್ಮಾನ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ನೋಡುತ್ತಿದೆ.
Prallad Joshi
ಪ್ರಹ್ಲಾದ್ ಜೋಶಿ
Updated on

ಹುಬ್ಬಳ್ಳಿ: ಪದವೀಧರರಿಗೆ ಯುವ ನಿಧಿ ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಅದೇ ಪದವೀಧರರನ್ನು ರೂಪಿಸುವ ವಿಶ್ವವಿದ್ಯಾಲಯಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು 10 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ಅವನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿಯಿಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಶಿಕ್ಷಣ ಸರ್ವರ ಮೂಲಭೂತ ಹಕ್ಕು. ಆದರೆ, ರಾಜ್ಯ ಸರ್ಕಾರ ಇದನ್ನು ಕಸಿದುಕೊಳ್ಳುತ್ತಿದೆ. ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ನೋಡುತ್ತಿದೆ. ಇದರಿಂದಾಗಿ ಶಿಕ್ಷಣದ ಮೂಲಭೂತ ಹಕ್ಕಿಗೆ ಕೊಡಲಿ ಪೆಟ್ಟು ಬೀಳುತ್ತಿದೆ, ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಗಳನ್ನೂ ಆದಾಯದ ಮೂಲ ಮತ್ತು ಒಂದು ಸರಕನ್ನಾಗಿ ನೋಡುತ್ತಿರುವುದು ಖಂಡನೀಯ. ವಿವಿಗಳು ಆರ್ಥಿಕ ಮತ್ತು ಅಗತ್ಯ ಭೂಮಿಯ ಕೊರತೆ ಎದುರಿಸುತ್ತಿವೆ ಎಂಬ ಕುಂಟು ನೆಪವೊಡ್ಡುವ ಈ ಸರ್ಕಾರವೇ ಮೊದಲು ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಟೀಕಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸುವ ಮೊದಲು, ತಮ್ಮದೇ ಸರ್ಕಾರ ಮತ್ತು ಇಲಾಖೆಗಳ ಆರ್ಥಿಕ ಸ್ಥಿತಿಯನ್ನು ನಿರ್ಣಯಿಸಬೇಕು ಎಂದು ಸಲಹೆ ನೀಡಿದರು.

Prallad Joshi
ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ- ಡಿ.ಕೆ ಶಿವಕುಮಾರ್

ಇದಲ್ಲದೆ, ಸರ್ಕಾರ ಕರ್ನಾಟಕ ಕರಾವಳಿ ಭದ್ರತೆಗೆ ಬೇಕಿರುವ ಅಗತ್ಯ ಇಂಧನವನ್ನು ಕಡಿತಗೊಳಿಸಿಸಲು ಆದೇಶಿಸಿದೆ. ಕರಾವಳಿ ಭದ್ರತೆಯ ವಿಚಾರದಲ್ಲಿ ಇಂಧನ ಕಡಿತಗೊಳಿಸಿರುವದು ಇವರ ಆಡಳಿತ ವೈಫಲ್ಯದ ನಿದರ್ಶನ ಎಂದು ಕಿಡಿಕಾರಿದರು,

ಚುನಾವಣೆ ವೇಳೆ ಜನರಿಗೆ ಅವೈಜ್ಞಾನಿಕ ರೀತಿಯ ಭರವಸೆಗಳನ್ನು ನೀಡಿ ಇತ್ತ ಅವನ್ನೂ ನೀಡಲಾಗದೆ, ಜನರಿಗೆ ಬೆಲೆ ಏರಿಕೆ ಬರೆ ಎಳೆದು ಹಿಂಸೆ ಮಾಡುತ್ತಿದೆ. ಆಡಳಿತದಲ್ಲಿ ಭ್ರಷ್ಟಾಚಾರದ ಪರಾಕಾಷ್ಟೆ ಮೀರಿದೆ ಎಂದು ಆರೋಪಿಸಿದರು.

ವ್ಯಾಪಕ ಭ್ರಷ್ಟಾಚಾರ, ನಾನಾ ಹಗರಣಗಳು, ಅವೈಜ್ಞಾನಿಕ ರೀತಿಯ ಘೋಷಣೆಗಳಿಂದಾಗಿ ರಾಜ್ಯವನ್ನು ಆರ್ಥಿಕವಾಗಿ ಮಾತ್ರವಲ್ಲದೆ, ಬೌದ್ಧಿಕವಾಗಿಯೂ ದಿವಾಳಿತನದತ್ತ ಕೊಂಡೊಯ್ಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com