
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸತ್ತದೆ ಎಂದು ಸೋಮವಾರ ಹೇಳಿದ್ದಾರೆ.
ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಪರ್ಯಾಯ ಮುಖ್ಯಮಂತ್ರಿ" ಅಥವಾ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.
ಇಂದು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಅದನ್ನು ಹೈಕಮಾಂಡ್ ನಿರ್ಧರಿಸಬೇಕು" ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ.
ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗವು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಬಿಂಬಿಸಲು ಪದೇ ಪದೇ ಪ್ರಯತ್ನಗಳು ನಡೆಸುತ್ತಿದೆ.
Advertisement