ಸಂತೋಷ್ ಲಾಡ್
ರಾಜಕೀಯ
11 ವರ್ಷ ವಿಶ್ವಗುರು ನೋಡಿ ಸಾಕಾಗಿದೆ, ಅವರನ್ನು ಕೆಳಗಿಳಿಸಿ: ಸಚಿವ ಸಂತೋಷ್ ಲಾಡ್ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದು ಹೇಳಿದರು.
ಬೆಳಗಾವಿ: 11 ವರ್ಷ ವಿಶ್ವಗುರು ನೋಡಿದ್ದೇವೆ. ಅವರನ್ನು ಕೆಳಗಿಳಿಸಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಿದರೂ ನಮ್ಮ ಅಭ್ಯಂತರವಿಲ್ಲ' ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸೋಮವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಂಕಟ ಇದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದು ಹೇಳಿದರು.
ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ