ಅನುದಾನ ಕೊಡಬೇಕಾಗುತ್ತದೆ ಎಂದು 9 ವಿವಿಗಳ ಬಂದ್ ಮಾಡುತ್ತಿರುವುದು ಸರ್ಕಾರದ ಅವಿವೇಕಿತನ: BJP

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಹಣಕಾಸಿನ ಕೊರತೆ ಹೆಸರಿನಲ್ಲಿ 9 ವಿವಿಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದ್ದು, ಇದು ಅವಿವೇಕದ್ದು. ಕೂಡಲೇ ಎಚ್ಚೆತ್ತುಕೊಂಡು ಈ ನಿರ್ಧಾರ ಕೈಬಿಡಬೇಕು. ಇಲ್ಲದೇ ಇದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಬೇಕಾಗುತ್ತದೆ.
Vijayendra, CM Siddaramaiah Casual images
ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹಣಕಾಸಿನ ನೆಪವೊಡ್ಡಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಅವಿವೇಕಿತನದ ಪರಮಾವಧಿಯಿಂದ ಕೂಡಿದೆ. ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿವಿಗಳನ್ನು ಮುಚ್ಚಲು ನಾವು ಬಿಡುವುದಿಲ್ಲ, ಈ ಬಗ್ಗೆ ಬಿಜೆಪಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸುತ್ತೇವೆಂದು ಬಿಜೆಪಿ ಎಚ್ಚರಿಕೆ ನೀಡಿದೆ.

ವಿವಿಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶುಕ್ರವಾರ ನಗರದ ಎಫ್'ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಎಂಎಲ್‌ಸಿ ಸಿ.ಟಿ. ರವಿ, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ನಿವೃತ್ತ ಉಪಕುಲಪತಿಗಳು, ವಿವಿಧ ವಿಶ್ವವಿದ್ಯಾಲಯಗಳ ಕೌನ್ಸಿಲ್ ಸದಸ್ಯರು ಮತ್ತು ಎಬಿವಿಪಿ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ವಿವಿಗಳನ್ನು ಮುಚ್ಚುವ ಸರ್ಕಾರದ ನಿರ್ಧಾರವನ್ನು ಒಮ್ಮದಿಂದ ವಿರೋಧಿಸಿದರು.

ವಿಜಯೇಂದ್ರ ಅವರು ಮಾತನಾಡಿ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಹಣಕಾಸಿನ ಕೊರತೆ ಹೆಸರಿನಲ್ಲಿ 9 ವಿವಿಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದ್ದು, ಇದು ಅವಿವೇಕದ್ದು. ಕೂಡಲೇ ಎಚ್ಚೆತ್ತುಕೊಂಡು ಈ ನಿರ್ಧಾರ ಕೈಬಿಡಬೇಕು. ಇಲ್ಲದೇ ಇದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಾಜಿ ಸಚಿವ ಅರವಿಂದ ಲಿಂಬಾವಳಿಯವರು ಮಾತನಾಡಿ, ಸರ್ಕಾರ ಈ ನಿರ್ಧಾರ ನಾಚಿಕೆಗೇಡು. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರೇಶಿಸಬೇಕು. ಜನರ ಮೇಲೆ ಹೆಚ್ಚಿನ ತೆರಿಗೆ ಹೊರಿಸಿ ಗ್ಯಾರಂಟಿಗಳು ನಿಲ್ಲದಂತೆ ನೋಡಿಕೊಳ್ಳುತ್ತಿರುವ ಸರ್ಕಾರ, ಹಿಂದುಳಿದ ಪ್ರದೇಶಗಳ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸ್ಥಾಪಿಸಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚತೆ ಸಿಎಸ್ಆರ್ ಅನುದಾನ, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

Vijayendra, CM Siddaramaiah Casual images
ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚಲು ತೀರ್ಮಾನ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ಇದೇ ವೇಳೆ ವಿವಿಗಳ ಬಂದ್ ವಿಚಾರ ಮೇಲ್ವಿಚಾರಣೆ ಮಾಡಲು ರಚಿಸಲಾಗಿರುವ ಉಪಸಮಿತಿ ಬಗ್ಗೆ ಪ್ರಶ್ನೆ ಎತ್ತಿದ ಅವರು, ಸಮಿತಿಯಲ್ಲಿ ಶೈಕ್ಷಣಿಕ ತಜ್ಞರ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ರಾಷ್ಟ್ರೀಯ ಜ್ಞಾನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ, ಉಪ ಸಮಿತಿಯು ವಿವಿಗಳ ಬಂದ್ ಗೆ ಸೂಚಿಸಿದೆ. ಆದರೆ, ಕಳಪೆ ಗುಣಮಟ್ಟದ ಖಾಸಗಿ ವಿಶ್ವವಿದ್ಯಾಲಯಗಳ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ವಿಕೇಂದ್ರೀಕರಣದ ನಂತರ ವಿವಿಗಳಲ್ಲಿ ಒಟ್ಟು ದಾಖಲಾತಿ ಅನುಪಾತ ಹೆಚ್ಚಾಗಿದೆ. ಇದೀಗ ವಿವಿಗಳ ಬಂದ್ ಮಾಡುವುದರಿಂದ ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ ಲಾಭವಾಗಲಿದೆ. ಇದೀಗ ಬಂದ್ ಮಾಡಲು ಮುಂದಾಗಿರುವ ವಿವಿಗಳು ಚಾಮರಾಜನಗರ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿದ್ದು, ಇಲ್ಲಿರುವ ಜನರಿಗೆ ಈಗಾಗಲೇ ಶಿಕ್ಷಣ ವ್ಯವಸ್ಥೆಗಳಿಲ್ಲ. ಇದೀಗ ವಿವಿಗಳ ಬಂದ್ ಮಾಡುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಹೀಗಾಗಿ ಸರ್ಕಾರ ವಿವಿಗಳ ಬಂದ್ ಮಾಡುವ ಬದಲು, ಜಿಲ್ಲೆಗಳಲ್ಲಿ ಶಿಕ್ಷಣವನ್ನು ಸುಧಾರಿಸುವತ್ತ ಗಮನಹರಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com