'ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಬರುವುದು ಕೇವಲ 20 ಸೀಟು; ಅಧಿಕಾರಕ್ಕಾಗಿ ರಣಹದ್ದುಗಳಂತೆ ನಾಯಕರ ಕಚ್ಚಾಟ'

ಕಾಂಗ್ರೆಸ್‍ನಲ್ಲಿ ನಾಲ್ಕು ಗುಂಪಾಗಿ ಅಧಿಕಾರಕ್ಕಾಗಿ ರಣಹದ್ದುಗಳ ರೀತಿ ಕಚ್ಚಾಡುತ್ತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಡಾ.ಜಿ.ಪರಮೇಶ್ವರ್ ಅಥವಾ ಕೆ.ಎಚ್.ಮುನಿಯಪ್ಪ ಅವರನ್ನು ಮಾಡಬೇಕು.
Govinda Karajola
ಗೋವಿಂದ ಕಾರಜೋಳ
Updated on

ಬೆಳಗಾವಿ: ಕರ್ನಾಟಕದಲ್ಲಿ ಈ ಬಾರಿ ದಲಿತ ಮುಖ್ಯಮಂತ್ರಿ ಮಾಡಲು ಅವಕಾಶವಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಯಾರನ್ನಾದರೂ ಮಾಡಲಿ, ದಲಿತ ಮುಖ್ಯಮಂತ್ರಿ ಮಾಡುತ್ತೇವೆಂದು ಘೋಷಣೆ ಮಾಡಲಿ ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ನಾಲ್ಕು ಗುಂಪಾಗಿ ಅಧಿಕಾರಕ್ಕಾಗಿ ರಣಹದ್ದುಗಳ ರೀತಿ ಕಚ್ಚಾಡುತ್ತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಡಾ.ಜಿ.ಪರಮೇಶ್ವರ್ ಅಥವಾ ಕೆ.ಎಚ್.ಮುನಿಯಪ್ಪ ಅವರನ್ನು ಮಾಡಬೇಕು, ಇಲ್ಲವಾದರೆ ಮಲ್ಲಿಕಾರ್ಜುನ ಖರ್ಗೆ ಅವರೇ ದಲಿತ ಸಿಎಂ ಆಗಲಿ ಎಂದರು.

ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಕಾರಜೋಳ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷ ಆಯ್ತು. ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡ್ತಿಲ್ಲ. ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಯಾವ ಗ್ಯಾರಂಟಿಯೂ ಸ್ಮಾರ್ಟ್ ಇಲ್ಲ, ಬೋಗಸ್ ಹೇಳಿ ವೋಟ್ ಹಾಕಿಸಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಜನರಿಗೆ ಮೋಸ ಮಾಡುತ್ತಿದ್ದಾರೆ. ಕಳೆದ ಬಾರಿ ಬಜೆಟ್ ಮಂಡನೆ ಮಾಡಿದ್ದರ ಪೈಕಿ ಒಂದೂವರೆ ಲಕ್ಷ ಕೋಟಿ ಹಣ ಬಾಕಿ ಇದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಆರೋಪಿಸಿದರು.

Govinda Karajola
ನನಗೆ ಕೊಂಬು ಇಲ್ಲ, ನಾನೊಬ್ಬ ಕಾರ್ಯಕರ್ತನಷ್ಟೇ: ರಾಜಣ್ಣ 'ಶಿಶುಪಾಲ' ಹೇಳಿಕೆಗೆ ಸಂಸದ ಜಿ.ಸಿ ಚಂದ್ರಶೇಖರ್ ಪ್ರತಿಕ್ರಿಯೆ

ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ.

ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅತಿ ಹೆಚ್ಚು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದಿದ್ದಾರೆ. ಇದೇನಾ ಇವರು ನುಡಿದಂತೆ ನಡೆದಿದ್ದು? ನಾಡಿನ ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಳಜಿಯಿಲ್ಲ. ಅಭಿವೃದ್ಧಿ ಸಂಪೂರ್ಣವಾಗಿ ಶೂನ್ಯವಾಗಿದೆ. ನಾಡಿನ ಜನ ಸಂಕಷ್ಟದಲ್ಲಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೂಡಲೇ ಇವರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಬೇಕು ಎಂದು ಹರಿಹಾಯ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com