ಡಿ.ಕೆ ಶಿವಕುಮಾರ್ ಚಿತ್ತ ಸ್ಥಳೀಯ ಚುನಾವಣೆಯತ್ತ: ಸಿಎಂ ಹುದ್ದೆ ಪ್ರಬಲ ಆಕಾಂಕ್ಷಿಗೆ ಈಗ ಸಂಘಟನೆ ಸಾಮರ್ಥ್ಯ ತೋರಿಸುವ ತವಕ!
ಬೆಂಗಳೂರು: 2028 ಕರ್ನಾಟಕ ರಾಜಕೀಯದಲ್ಲಿ ಬಹಳ ಮಹತ್ವದ ವರ್ಷ, ಪ್ರಸ್ತುತ ಇರುವ ಸರ್ಕಾರದ ಅವಧಿ ಮುಕ್ತಾಯವಾಗಿ ವಿಧಾನಸಭೆ ಚುನಾವಣೆ ನಡೆಯುವ ವರ್ಷ. ಕಾಂಗ್ರೆಸ್ ನ ಟ್ರಬಲ್ ಶೂಟರ್, ಗಾಂಧಿ ಕುಟುಂಬದ ನಿಷ್ಠಾವಂತ ಎಂದು ಕರೆಸಿಕೊಳ್ಳುವ ಡಿ ಕೆ ಶಿವಕುಮಾರ್, 2028 ರಲ್ಲಿ ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಕೊಟ್ಟರೂ ಮುನ್ನಡೆಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಹೊತ್ತಿರುವ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸುವ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಸಂಘಟನಾ ಸಾಮರ್ಥ್ಯವನ್ನು ಸಾಬೀತುಪಡಿಸಲು ಉತ್ಸುಕರಾಗಿದ್ದಾರೆ. ಅವರ ಹೇಳಿಕೆಯನ್ನು ರಾಜಕೀಯ ವಲಯಗಳಲ್ಲಿ ಮುಖ್ಯಮಂತ್ರಿಯಾಗಿ ಪಕ್ಷವನ್ನು ಮುನ್ನಡೆಸುವ ಅವರ ಆಕಾಂಕ್ಷೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಮೊನ್ನೆ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾದ ಅವರು, 2028 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ತಂತ್ರಗಳ ಕುರಿತು ಚರ್ಚಿಸಿದರು. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲು ವೇಣುಗೋಪಾಲ್ ಅವರನ್ನು ಕೇಳಿದ್ದೀರಾ ಎಂದು ಕೇಳಿದಾಗ, ಇಲ್ಲ, ಮಾಧ್ಯಮಗಳಲ್ಲಿ ಬರುತ್ತಿರುವುದೆಲ್ಲಾ ಕಟ್ಟುಕಥೆ ಎಂದು ಹೇಳಿದರು.
2023 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಾಗ, ಶಿವಕುಮಾರ್, ಸಿದ್ದರಾಮಯ್ಯ, ವೇಣುಗೋಪಾಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಐದು ವರ್ಷಗಳ ಅವಧಿಯಲ್ಲಿ ಸಿಎಂ ಹುದ್ದೆಯನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಮಾನವಾಗಿ ಹಂಚಿಕೊಳ್ಳುವ ಬಗ್ಗೆ ಒಪ್ಪಂದ ಉಂಟಾಗಿತ್ತು ಎಂದು ಹೇಳಲಾಗುತ್ತಿದೆ.
ಈಗ, ಸಿದ್ದರಾಮಯ್ಯ ಅವರು ಏಳು ವರ್ಷ (2013-18ರ ಅವಧಿ ಸೇರಿದಂತೆ) 238 ದಿನಗಳ ಮುಖ್ಯಮಂತ್ರಿ ಹುದ್ದೆಯನ್ನು ಪೂರ್ಣಗೊಳಿಸಿದ ನಂತರ, ರಾಜ್ಯದಲ್ಲಿ ಅತಿ ದೀರ್ಘಾವಧಿಯವರೆಗೆ ಮುಖ್ಯಮಂತ್ರಿ ಎಂಬ ದಿವಂಗತ ದೇವರಾಜ್ ಅರಸ್ ಅವರ ದಾಖಲೆಯನ್ನು ಮುಂದಿನ ವರ್ಷ 2026 ರ ಜನವರಿಯಲ್ಲಿ ಮುರಿಯಲಿದ್ದಾರೆ.
ಹೈಕಮಾಂಡ್ ಸೂತ್ರ
ಅಧಿಕಾರದ ಸುಗಮ ವರ್ಗಾವಣೆಗೆ ಪಕ್ಷದ ಹೈಕಮಾಂಡ್ ಒಂದು ಸೂತ್ರವನ್ನು ರೂಪಿಸುತ್ತಿದೆ. ಆ ಸೂತ್ರದ ಪ್ರಕಾರ, ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಕ್ಕರೆ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ದಲಿತ ಕೋಟಾದಡಿಯಲ್ಲಿ ಡಿಸಿಎಂ ಹುದ್ದೆಗೆ ಪರಿಗಣಿಸಲಾಗುತ್ತದೆ ಮತ್ತು ಸಿದ್ದರಾಮಯ್ಯ ಅವರ ಮಗ ಮತ್ತು ಎಂಎಲ್‌ಸಿ ಕುರುಬ ಜನಾಂಗದ ಡಾ. ಯತೀಂದ್ರ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವೀರಶೈವ-ಲಿಂಗಾಯತ ಸಮುದಾಯದ ನಾಯಕನಿಗೆ ಸಿಗಲಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳುತ್ತಾರೆ.
ಮುಂದಿನ ಚುನಾವಣೆ ತಮ್ಮ ನೇತೃತ್ವದಲ್ಲಿ ನಡೆಯಲಿದೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ಪಕ್ಷವು 1990 ರ ದಶಕದಿಂದಲೂ ನನ್ನನ್ನು ಸಚಿವನನ್ನಾಗಿ ಬೆಳೆಸಿದೆ. ಅವರು ನನ್ನನ್ನು ಐದು ವರ್ಷಗಳ ಕಾಲ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರು. ಈಗ ಅವರು ನನಗೆ ಡಿಸಿಎಂ ಹುದ್ದೆಯನ್ನು ನೀಡಿದ್ದಾರೆ. ಇಷ್ಟೆಲ್ಲಾ ಆದ ನಂತರ, ನಾನು ಕಾಂಗ್ರೆಸ್‌ಗಾಗಿ ಕೆಲಸ ಮಾಡದಿದ್ದರೆ, ನನ್ನ ನಾಯಕತ್ವವನ್ನು ಹೇಗೆ ಸಮರ್ಥಿಸಿಕೊಳ್ಳಬಹುದು? ಕಾಂಗ್ರೆಸ್ ನನಗೆ ಮನೆಯಲ್ಲಿ ಕುಳಿತುಕೊಳ್ಳಲು ಅಷ್ಟೊಂದು ಅಧಿಕಾರ ನೀಡಿದೆಯೇ? ನಾನು ಯಾವುದೇ ಹುದ್ದೆಯನ್ನು ಹೊಂದಿದ್ದರೂ, ನಾನು ಪಕ್ಷವನ್ನು ಮುನ್ನಡೆಸುತ್ತೇನೆ ಎಂದರು.
ಪಕ್ಷವು ಅವರನ್ನು ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ದೆಹಲಿ, ಅಸ್ಸಾಂ, ಬಿಹಾರ ಮತ್ತು ಹಿಮಾಚಲ ಪ್ರದೇಶಗಳಿಗೆ ಚುನಾವಣೆಗೆ ಪ್ರಚಾರ ಮಾಡಲು ಕರೆಸಿಕೊಳ್ಳುವ ಮೂಲಕ ಅವರು ಅಖಿಲ ಭಾರತ ಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
"2013 ರಲ್ಲಿ, ನಾನು ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೆ. ಕಳೆದ ಚುನಾವಣೆಯಲ್ಲಿ, ನಾನು ಪಕ್ಷದ ಅಧ್ಯಕ್ಷನಾಗಿದ್ದೆ. ಈಗ ನಾನು ಡಿಸಿಎಂ. ನಾನು ನನ್ನ ಸಾಮರ್ಥ್ಯ ಮತ್ತು ಅನುಭವವನ್ನು ಬಳಸಬೇಕು. ಸಿದ್ದರಾಮಯ್ಯ ಕೂಡ ಪಕ್ಷವನ್ನು ಮುನ್ನಡೆಸುತ್ತಾರೆ. ಎರಡು ಅವಧಿಗೆ ವಿರೋಧ ಪಕ್ಷದ ನಾಯಕ ಮತ್ತು ಎರಡು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ನಾವು ಸಾಮೂಹಿಕ ನಾಯಕತ್ವದಲ್ಲಿ ಮುಂದುವರಿಯುತ್ತೇವೆ ಎಂದರು,
ಮುಂದಿನ ಚುನಾವಣೆಯವರೆಗೂ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮುಂದುವರಿಸುತ್ತೀರಾ ಎಂಬ ಪ್ರಶ್ನೆಗೆ ನಮ್ಮ ಪಕ್ಷ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದೆ. ನಾನು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ, ಪಕ್ಷದ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ