ಬಿಜೆಪಿ ಮತ್ತು ಜೆಡಿಎಸ್‌ ತಪ್ಪುಗಳನ್ನು ತೋರಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಪರಮೇಶ್ವರ್

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿ ಅನಾವಶ್ಯಕ ಗೊಂದಲ ಉಂಟುಮಾಡುತ್ತಿದೆ ಎಂದರು.
Dr G Parameshwara
ಡಾ ಜಿ ಪರಮೇಶ್ವರ್
Updated on

ಬೆಂಗಳೂರು: ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಬಿಜೆಪಿ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ. ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಮತ್ತು ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಹೀಗಾಗಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದರು.

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿ ಅನಾವಶ್ಯಕ ಗೊಂದಲ ಉಂಟುಮಾಡುತ್ತಿದೆ ಎಂದರು. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಈ ಮಟ್ಟಕ್ಕೆ ಇಳಿಯಬಾರದು. ಈ ಹಿಂದೆ ನಾವೂ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದೇವೆ. ಸರ್ಕಾರ ನಡೆಸುವಾಗ ನಾವೆಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದೇವೆ.

ಪ್ರಿಯಾಂಕ್ ಖರ್ಗೆ ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಯಾವುದೇ ಪೂರಕ ಸಾಕ್ಷ್ಯಗಳಿದ್ದರೆ ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

Dr G Parameshwara
ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ತೀವ್ರ; Video

ಆರೋಪಿ ರಾಜು ಕಪನೂರನನ್ನು ಪೊಲೀಸರು ಇನ್ನೂ ಬಂಧಿಸದಿರುವ ಕುರಿತು ಕೇಳಿದ ಪ್ರಶ್ನೆಗೆ, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ತನಿಖೆಯಿಂದ ಸತ್ಯಾಂಶ ಹೊರಬೀಳಲಿದೆ. ಹಣಕಾಸು ವ್ಯವಹಾರ ನಡೆದಿದೆಯೇ ಅಥವಾ ಇತರೆ ವಿಷಯಗಳು ವಿಚಾರಣೆಯಿಂದ ಗೊತ್ತಾಗಲಿದೆ ಎಂದರು. ರಾಜ್ಯ ಸರ್ಕಾರ ಈಗಾಗಲೇ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

ನಾವು ವರದಿಗಾಗಿ ಕಾಯಬೇಕಾಗಿದೆ. ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳಬಹುದು. ವಿರೋಧ ಪಕ್ಷಗಳು ಆರೋಪ ಮಾಡುವುದು ಸಹಜ. ಅದು ಸರಿಯೋ ತಪ್ಪೋ ವರದಿಯಿಂದ ತಿಳಿಯಲಿದೆ,’’ ಎಂದರು. ಸಿಐಡಿ ವರದಿ ಬಂದ ನಂತರವಷ್ಟೇ ಹಣದ ಅವ್ಯವಹಾರ ನಡೆದಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಪರಮೇಶ್ವರ ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com