ರಾಜ್ಯ ರಾಜಕೀಯದಲ್ಲಿ 'ಸಂ'ಕ್ರಾಂತಿ ಸುಗ್ಗಿ: ಮೂರು ಪಕ್ಷದ ಸಾರಥಿಗಳ ಬದಲಾವಣೆಗೆ ಚಿಂತನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಸಂಕ್ಷಿಪ್ತ ರೂಪವಾಗಿರುವ ಅಹಿಂದ ಸಮುದಾಯವನ್ನು ಪ್ರತಿನಿಧಿಸುವುದರಿಂದ, ಸದ್ಯಕ್ಕೆ ಸತೀಶ್ ಅವರನ್ನು ಈ ಸ್ಥಾನಕ್ಕೆ ಹೈಕಮಾಂಡ್ ಪರಿಗಣಿಸುವ ಸಾಧ್ಯತೆಯಿಲ್ಲ.
Dk Shivakumar, Kumaraswamy and vijayendra
ಡಿ.ಕೆ ಶಿವಕುಮಾರ್, ಕುಮಾರಸ್ವಾಮಿ ಮತ್ತು ವಿಜಯೇಂದ್ರ
Updated on

ಬೆಂಗಳೂರು: ಈ ವರ್ಷ ಬಿಬಿಎಂಪಿ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಹೊರತುಪಡಿಸಿ ಯಾವುದೇ ದೊಡ್ಡ ಚುನಾವಣೆಗಳಿಲ್ಲದಿದ್ದರೂ, ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಕತೆ ನಡೆಯುತ್ತಿದೆ.

ಒಬ್ಬರಿಗೆ ಒಂದೇ ಹುದ್ದೆ ಎಂಬ ಪಕ್ಷದ ನೀತಿಗೆ ಬದ್ಧವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬದಲಿಸಲು ಹೈಕಮಾಂಡ್ ಚಿಂತನೆ ನಡೆಸುತ್ತಿರುವುದರಿಂದ ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ಲಾಬಿ ತೀವ್ರವಾಗಿದೆ. ವೀರಶೈವ ಲಿಂಗಾಯತರಾದ ಎಂ.ಬಿ.ಪಾಟೀಲ್ ಮತ್ತು ಈಶ್ವರ ಖಂಡ್ರೆ ಹಾಗ ಎಸ್‌ಟಿ ನಾಯಕ ಸಮುದಾಯದ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಹೆಸರುಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಸಂಕ್ಷಿಪ್ತ ರೂಪವಾಗಿರುವ ಅಹಿಂದ ಸಮುದಾಯವನ್ನು ಪ್ರತಿನಿಧಿಸುವುದರಿಂದ, ಸದ್ಯಕ್ಕೆ ಸತೀಶ್ ಅವರನ್ನು ಈ ಸ್ಥಾನಕ್ಕೆ ಹೈಕಮಾಂಡ್ ಪರಿಗಣಿಸುವ ಸಾಧ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಖಂಡ್ರೆ ಅವರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ.

ಬಿಜೆಪಿಯಲ್ಲಿ ಈಗಷ್ಟೇ ಒಂದು ವರ್ಷ ಪೂರೈಸಿರುವ ಬಿವೈ ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿದ್ದು, ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ತಂತ್ರ ನಡೆಯುತ್ತಿದೆ. ಕೇಂದ್ರ ಆರೋಗ್ಯ ಸಚಿವರೂ ಆಗಿರುವ ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಬದಲಾಯಿಸುವ ಸಾಧ್ಯತೆ ಇರುವುದರಿಂದ ರಾಜ್ಯ ನಾಯಕತ್ವದಲ್ಲಿಯೂ ಬದಲಾವಣೆಯಾಗಲಿ ಎಂದು ಯತ್ನಾಳ್ ಮತ್ತವರ ತಂಡ ಬಯಸಿದೆ.

ಆದರೆ ಪಕ್ಷದ ಹೈಕಮಾಂಡ್ ಕರ್ನಾಟಕದಲ್ಲಿ ಅಪಾಯವನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಮತ್ತು ಅಂತಹ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಂಪರ್ಕಿಸಲು ಬಯಸುತ್ತದೆ. ಇದರ ಜೊತೆಗೆ ವಿಜಯೇಂದ್ರ ಯಡಿಯೂರಪ್ಪ ಅವರ ಪುತ್ರ. ಅಂತಹ ಪರಿಸ್ಥಿತಿ ಒದಗಿ ಬಂದರೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬಹುದು ಎಂದು ಹೇಳಲಾಗುತ್ತಿದೆ.

Dk Shivakumar, Kumaraswamy and vijayendra
ಅಮಿತ್ ಶಾ ಭೇಟಿಯಾದ ವಿಜಯೇಂದ್ರ: ರಾಜ್ಯ ರಾಜಕೀಯದ ಬಗ್ಗೆ ಚರ್ಚೆ, ಭಿನ್ನಮತೀಯರ ಕಡಿವಾಣಕ್ಕೆ ಮನವಿ

ಬೊಮ್ಮಾಯಿ ಇತ್ತೀಚೆಗಷ್ಟೇ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು, ಆದರೆ ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ತಿಳಿದಿಲ್ಲ. ಯಡಿಯೂರಪ್ಪ ಅವರನ್ನು ‘ಅಸಮಾಧಾನದಿಂದ’ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ, ಅವರ ಸ್ಥಾನಕ್ಕೆ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿತ್ತು. ಯತ್ನಾಳ್ ವೀರಶೈವ ಲಿಂಗಾಯತರಾಗಿದ್ದರೂ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮಿಲ್ಲ. ತಂದೆಯ ಇಮೇಜ್ ಸಹಾಯದಿಂದ ವಿಜಯೇಂದ್ರ ಆ ಸ್ಥಾನವನ್ನು ಪಡೆದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರವನ್ನು ಅವರು ಜಾಣ್ಮೆಯಿಂದ ನಿಭಾಯಿಸಿದ್ದಾರೆ’ ಎಂದು ರವಿ ಅವರ ಹುಟ್ಟೂರಾದ ಚಿಕ್ಕಮಗಳೂರಿನ ರಾಜಕೀಯ ವಿಶ್ಲೇಷಕ ಎಂ.ಎಸ್.ಕಿರಣ್ ಅಭಿಪ್ರಾಯಪಟ್ಟರು.

ಏತನ್ಮಧ್ಯೆ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಜೆಡಿಎಸ್ ಬಯಸಿದೆ ಮತ್ತು ಅವರಿಗೆ ಅವರ ತಾತ ಮತ್ತು ಪಕ್ಷದ ಸರ್ವೋಚ್ಛ ನಾಯಕ ಎಚ್‌ಡಿ ದೇವೇಗೌಡರ ಆಶೀರ್ವಾದವೂ ಇದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆದ್ದಿದ್ದರೆ ಇಷ್ಟೊತ್ತಿಗೆ ಅವರಿಗೆ ಸ್ಥಾನ ಸಿಗುತ್ತಿತ್ತು ಎಂದು ಪಕ್ಷದ ಒಳಗಿನವರು ಅಭಿಪ್ರಾಯ ಪಟ್ಟಿದ್ದಾರೆ. ಬ್ಯುಸಿ ಶೆಡ್ಯೂಲ್ ಹೊಂದಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಂಘಟನೆಗಾಗಿ ಸಮಯ ಮೀಸಲಿಡಲು ಸಾಧ್ಯವಾಗಿಲ್ಲ. ನಿಖಿಲ್ ಬದಲಿಗೆ ಗುರ್ಮಿಟ್ಕಲ್ ಶಾಸಕ, ವೀರಶೈವ ಲಿಂಗಾಯತ ಶರಣಗೌಡ ಕಂದಕೂರು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com