ಸರಣಿ ಬೆಲೆ ಏರಿಕೆ ಮಧ್ಯೆ ಬಿಸಿಬಿಸಿ ರಾಜಕೀಯ: ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಶಾಕ್!

ಈಗಿರುವ ವ್ಯವಸ್ಥೆಗೆ ಧಕ್ಕೆಯಾಗದಂತೆ ಪೂರ್ಣ ಐದು ವರ್ಷಗಳ ಅವಧಿಗೆ ಸಿಎಂ ಮತ್ತು ಡಿಸಿಎಂ ನಡುವಿನ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ, ಇದು ರಾಜಕೀಯ ವಲಯದಲ್ಲಿ ಆಗಾಗ್ಗೆ ಚರ್ಚೆಗೆ ಬರುತ್ತಿದೆ.
CM Siddaramaiah and DCM D K Shivakumar
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭಕ್ಕೇ ರಾಜ್ಯದ ಜನತೆಗೆ ಶಾಕ್ ನೀಡಿದೆ. ಹೊಸ ವರ್ಷದ ಮೊದಲ ದಿನವೇ ಬಸ್ ದರ ಏರಿಕೆ ಮಾಡಿದೆ. ಸಹಜವಾಗಿ ಇದು ಆಡಳಿತ ಮತ್ತು ವಿಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಲೋಕೋಪಯೋಗಿ ಇಲಾಖೆ (PWD) ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ನಡೆದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮತ್ತು ಶಾಸಕರು ಭಾಗವಹಿಸಿದ್ದು ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಊಹಾಪೋಹಗಳಿಗೆ ಮತ್ತೊಮ್ಮೆ ಪುಷ್ಠಿ ನೀಡಿದೆ. ಹೀಗೆ ಸೇರಿದ್ದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದ ಸತೀಶ್ ಜಾರಕಿಹೊಳಿ, ಈ ಹಿಂದೆ ತಾವು ನಡೆಸಿದ ಔತಣಕೂಟದಂತೆಯೇ ಇದು ಎಂದು ಹೇಳಿದ್ದಾರೆ. ಸರ್ಕಾರದ ಪ್ರತಿಷ್ಠೆಯನ್ನು ಹೆಚ್ಚಿಸುವುದು, ಆಡಳಿತವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ಮತ್ತು ರಾಜ್ಯದಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದನ್ನು ಖಾತ್ರಿಪಡಿಸುವ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಪಕ್ಷದಲ್ಲಿ ಅನೇಕರು ಔತಣಕೂಟದಲ್ಲಿ ಭಾಗವಹಿಸದಿರುವುದು ಹೆಚ್ಚು ಸುದ್ದಿಯಾಗಿದೆ. ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಟರ್ಕಿಯಲ್ಲಿ ಕುಟುಂಬ ಸಮೇತ ವಿಹಾರ ಮಾಡುತ್ತಿರುವ ಸಮಯದಲ್ಲಿ ಸಿಎಂ ತಮ್ಮ ಕೆಲವು ಸಚಿವರ ಜತೆ ನಡೆದ ಔತಣಕೂಟ ರಾಜಕೀಯ ತಂತ್ರಗಾರಿಕೆಯಂತೆ ಕಂಡು ಬರುತ್ತಿದ್ದು, ಇದು ಅವರ ರಾಜಕೀಯ ಕುತಂತ್ರದ ಭಾಗವಾಗಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಈಗಿರುವ ವ್ಯವಸ್ಥೆಗೆ ಧಕ್ಕೆಯಾಗದಂತೆ ಪೂರ್ಣ ಐದು ವರ್ಷಗಳ ಅವಧಿಗೆ ಸಿಎಂ ಮತ್ತು ಡಿಸಿಎಂ ನಡುವಿನ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ, ಇದು ರಾಜಕೀಯ ವಲಯದಲ್ಲಿ ಆಗಾಗ್ಗೆ ಚರ್ಚೆಗೆ ಬರುತ್ತಿದೆ. 2025ರ ಅಂತ್ಯಕ್ಕೆ ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ಪೂರೈಸಲಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಮತ್ತು ಡಿಸಿಎಂ ನಡುವಿನ ಭಿನ್ನಾಭಿಪ್ರಾಯಗಳು ಮುನ್ನೆಲೆಗೆ ಬಂದವು ಎಂದು ವರದಿಯಾಗಿದೆ. ಸಿಎಂ ಆಗುವ ಮಹತ್ವಾಕಾಂಕ್ಷೆಯ ಡಿ ಕೆ ಶಿವಕುಮಾರ್ ಆಸೆಗೆ ಲಗಾಮು ಹಾಕಲು ಸಿಎಂ ಪಾಳಯ ರಣತಂತ್ರ ರೂಪಿಸುತ್ತಿದೆ ಎಂದು ಹೇಳಲಾಗುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದ ನಂತರ, ಆಗ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಇತ್ತು.

CM Siddaramaiah and DCM D K Shivakumar
ಸ್ವಾಮಿ ಡಿ.ಕೆ ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿನ್ನರ್ ಮೀಟಿಂಗ್ ಗೆ ಅಶೋಕ್ ಟಾಂಗ್!

ಕಾಂಗ್ರೆಸ್‌ನ ಆಂತರಿಕ ರಾಜಕೀಯ ಪ್ರಾದೇಶಿಕ ಪಕ್ಷ ಜೆಡಿಎಸ್ ಮೇಲೆ ಪ್ರಭಾವ ಬೀರುತ್ತಿದೆ. ತಮ್ಮ ಪಕ್ಷದ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಮಾಡುತ್ತಿರುವ ಷಡ್ಯಂತ್ರದ ಬಗ್ಗೆ ನನಗೆ ತಿಳಿದಿದೆ, ಆದರೆ ಅದರಲ್ಲಿ ಕಾಂಗ್ರೆಸ್ ಯಶಸ್ವಿಯಾಗುವುದಿಲ್ಲ ಎಂದು ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಾ ಬಂದಿದ್ದಾರೆ. ಪ್ರಾದೇಶಿಕ ಪಕ್ಷದ ಶಾಸಕರನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ತಮ್ಮ ಸ್ಥಾನವನ್ನು ಬಲಪಡಿಸಲು ಉತ್ಸುಕರಾಗಿರುವುದರಿಂದ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸದಲ್ಲಿ ಇರಿಸಿಕೊಳ್ಳಬೇಕಾಗಿದೆ.

ರಾಜಕೀಯ ಪಕ್ಷಗಳ ಜಂಜಾಟದ ನಡುವೆ ಸರಣಿ ಬೆಲೆ ಏರಿಕೆ ಭಾರವನ್ನು ಜನರು ಹೊರಬೇಕಾಗುತ್ತದೆ. ರಾಜ್ಯ ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ - ತನ್ನ ಖಾತರಿ ಯೋಜನೆಗಳು ಬೆಲೆ ಏರಿಕೆ ಮತ್ತು ಹಣದುಬ್ಬರದ ಹೊರೆಯನ್ನು ಕಡಿಮೆ ಮಾಡಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರವು ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸಿದೆ.

CM Siddaramaiah and DCM D K Shivakumar
ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಲಿತ ಮುಖಂಡರ ಡಿನ್ನರ್ ಮೀಟಿಂಗ್: ರಾಜ್ಯ ರಾಜಕೀಯದಲ್ಲಿ ಸಂಚಲನ

ಡೀಸೆಲ್ ಮತ್ತು ಸಂಬಳದ ಮೇಲಿನ ವೆಚ್ಚಗಳು ಹೆಚ್ಚಿವೆ ಎಂಬ ಕಾರಣಕ್ಕಾಗಿ ಸರ್ಕಾರವು ಅದನ್ನು ಸಮರ್ಥಿಸುತ್ತದೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನಿರ್ಧಾರವನ್ನು ಸಮರ್ಥಿಸಲು ಹಿಂದಿನ ಸರ್ಕಾರಗಳ ಅವಧಿಯಲ್ಲಿ ಪ್ರಯಾಣ ದರ ಏರಿಕೆಯನ್ನು ಉಲ್ಲೇಖಿಸಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆಯ ಹಂಗಾಮ ಕಂಡುಬರುತ್ತಿದೆ. ಬಸ್ ಪ್ರಯಾಣ ದರದ ನಂತರ ಬೆಂಗಳೂರು ಮೆಟ್ರೋ ರೈಲು ದರ, ಹಾಲಿನ ದರ, ನೀರಿನ ದರ ಏರಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ.

ಮುಂದಿನ ಕೆಲವೇ ವಾರಗಳಲ್ಲಿ ತಮ್ಮ 16ನೇ ಬಜೆಟ್ ಮಂಡಿಸಲಿರುವ ಸಿಎಂ, ಆದಾಯದ ಸ್ಪಷ್ಟ ಚಿತ್ರಣವನ್ನು ಹೊಂದಿರುವುದು ಮತ್ತು ಬಜೆಟ್‌ನಲ್ಲಿ ಯಾವುದೇ ಕಠಿಣ ಕ್ರಮಗಳನ್ನು ಘೋಷಿಸದಿರುವುದು ಉತ್ತಮ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com