
ಬೆಳಗಾವಿ: ಈಗಿನ ಕಾಂಗ್ರೆಸ್ ಅಡಳಿತಾವಧಿಯಲ್ಲೇ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆಂದು ಮ ಗುರೂಜಿ ಅವರು ಶುಕ್ರವಾರ ಭವಿಷ್ಯ ನುಡಿದಿದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು. ಪ್ರಸ್ತುತ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಡಿಕೆ ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ. ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಬಹಳ ಕೆಲಸ ಮಾಡಿದ್ದಾರೆ. ನಾಟಕ ಮಾಡದ ರಾಜಕಾರಣಿ ಅವರು, ಅವರು ಸಿಎಂ ಆದರೆ ಖುಷಿ ಪಡುತ್ತೇವೆ. ಅವರು ಸಿಎಂ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.
ಅಜ್ಜಯ್ಯ ನ ಮೇಲೆ ನಿಷ್ಠೆ, ಧರ್ಮದ ಮೇಲೆ ಶ್ರದ್ಧೆ ಡಿಕೆ ಶಿವಕುಮಾರ್ ಇದೆ. ಗುರುಗಳ ಅನುಗ್ರಹದಿಂದ ಇದೇ ಸರಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್ ಸಿಎಂ ಸೀಟಲ್ಲಿ ಕೂರುತ್ತಾರೆ ಎಂದು ಭವಿಷ್ಯ ನುಡಿದರು.
ನಾನು ಡಿಕೆ.ಶಿವಕುಮಾರ್ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಅವರ ಕಠಿಣ ಪರಿಶ್ರಮಕ್ಕೆ ಸಲ್ಲಬೇಕಾದ ಅರ್ಹತೆ ಸಿಗಬೇಕು. ಅವರ ಪ್ರಯತ್ನ ಮತ್ತು ಕಠಿಣ ಪರಿಶ್ರಮಕ್ಕೆ ದೇವರು ಅವರನ್ನು ಆಶೀರ್ವದಿಸಲಿ. "ವೈಕುಂಠ ಏಕಾದಶಿಯ ಸಂದರ್ಭದಲ್ಲಿ ನಾನು ಶಿವಕುಮಾರ್‌ಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ತಿಳಿಸಿದರು.
ಇದೇ ವೇಳೆ ಶಿವಕುಮಾರ್ ಅವರ ನಾಯಕತ್ವದ ಗುಣಗಳನ್ನು ಶ್ಲಾಘಿಸಿದ ಅವರು, ಡಿಕೆಶಿ ಅವರು ಗಾಂಧಿ ತತ್ವಗಳನ್ನು ಅನುಸರಿಸುತ್ತಿದ್ದಾರೆ. ಯಾವಾಗಲೂ ಎಲ್ಲ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆಂದು ಹೇಳಿದರು.
Advertisement