
ಬೆಂಗಳೂರು; ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಸದ್ಯಕ್ಕೆ ನಿಲ್ಲುವಂತೆ ಕಾಣಿಸುತ್ತಿಲ್ಲ. ಭಿನ್ನಾಭಿಪ್ರಾಯ ವಿಚಾರ ಈಗಾಗಲೇ ಹೈಕಮಾಂಡ್ ಅಂಗಳ ತಲುಪಿದ್ದು, ಎಲ್ಲವೂ ಸರಿಹೋಗಲಿದೆ ಎನ್ನುತ್ತಿರುವಂತೆ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಅವರ ತಂಡ ಭೇಟಿ ನವದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದೆ.
ನವದೆಹಲಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ ಬಣ, ರಾಜ್ಯ ಬಿಜೆಪಿ ಭಿನ್ನಮತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಭಿನ್ನಮತ ವಿಚಾರದ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಮಾತಾಡುವಂತೆ ಮನವಿ ಮಾಡಿದ್ದಾರೆ. ಆದರೆ, ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಹೆಚ್‌ಡಿ ಕುಮಾರಸ್ವಾಮಿ ನಿರಾಕರಿಸಿದ್ದಾರೆಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿಯ ಆಂತರಿಕ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.
ಆದರೆ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಕುರಿತು ವಿಜಯೇಂದ್ರ ಅವರನ್ನು ಭೇಟಿ ಮಾಡಲು ಅಥವಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲು ಸಹಾಯ ಮಾಡಬಹುದೆಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಸಲಹೆ ನೀಡಬೇಕಿದ್ದರೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಬಳಿ ಹೇಳೋಣ. ಇಲ್ಲವೇ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸೋಣ. ಆದರೆ ಆಂತರಿಕ ಜಗಳದ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆಂದು ಮೂಲಗಳಉ ತಿಳಿಸಿವೆ.
Advertisement