
ಬೆಂಗಳೂರು: ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಹಾಗೂ ಡಿಕೆ ಶಿವಕುಮಾರ್ ಬಳಗದಲ್ಲಿ ಗುರುತಿಸಿಕೊಂಡಿರುವ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ.
ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ನಾಯಕರ ಸಭೆಗೂ ಮುನ್ನ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಚರ್ಚೆ ವಿಚಾರವಾಗಿ ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ ಎಂದರು.
ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಸಿಎಂ ಆಗಬೇಕಲ್ವಾ. ಬೇರೆ ಬೇರೆಯವರೂ ಇದ್ದಾರೆ. ಆದರೆ ಅಂತಿಮವಾಗಿ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.
ಒಕ್ಕಲಿಗರ ಸಂಘದಿಂದ ಡಿಕೆಶಿ ಸಿಎಂ ಮಾಡಲು ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೊ ಹೇಳಿದ್ರು ಅಂದ ಮಾತ್ರಕ್ಕೆ ಹೇಳಿದವರನ್ನೆಲ್ಲಾ ಸಿಎಂ ಮಾಡೋದಕ್ಕೆ ಆಗಲ್ಲ. ಅವರು ಜಾತಿ ಅಭಿಮಾನದಿಂದ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಮಾಡ್ತಾರೆ ಎಂದರು.
Advertisement