ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ: ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, ಕೆಪಿಸಿಸಿ, ಹಾಗೂ ಸಿಎಲ್‌ಪಿ ಸಭೆ ಸೇರಿದಂತೆ ಪಕ್ಷದ ಸರಣಿ ಸಭೆಗಳು ನಡೆಯುತ್ತಿವೆ. ಸಭೆಗೆ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, ಕೆಪಿಸಿಸಿ, ಹಾಗೂ ಸಿಎಲ್‌ಪಿ ಸಭೆ ಸೇರಿದಂತೆ ಪಕ್ಷದ ಸರಣಿ ಸಭೆಗಳು ನಡೆಯುತ್ತಿವೆ. ಸಭೆಗೆ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಬಿಜೆಪಿ ತನ್ನ ಆಂತರಿಕ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಒಗ್ಗಟ್ಟಾಗಿದೆ. ಸಿದ್ದರಾಮಯ್ಯ ಸಿಎಂ. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೂ ಅದನ್ನು ಪಕ್ಷದ ನಾಯಕತ್ವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುತ್ತಾರೆಂದು ಹೇಳಿದರು,

CM Siddaramaiah
ಅಂತರ್ಜಾತಿ ವಿವಾಹಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಒಬ್ಬರನ್ನೊಬ್ಬರು ಮುಗಿಸುವ ಹಾದಿಯಲ್ಲಿರುವ ಬಿಜೆಪಿಗೆ ಪ್ರಶ್ನೆಗಳನ್ನು ಕೇಳುವ ಬದಲು, ಪ್ರತಿ ಕನ್ನಡಿಗ ಕುಟುಂಬಕ್ಕೆ ಒಟ್ಟು 58,000 ಕೋಟಿ ರೂಪಾಯಿಗಳ ನೇರ ಲಾಭ ವರ್ಗಾವಣೆಯನ್ನು ದೃಢವಾಗಿ ಕಾರ್ಯಗತಗೊಳಿಸುತ್ತಿರುವ ಒಗ್ಗಟ್ಟಿನ ಸರ್ಕಾರಕ್ಕೆ ಮಾಧ್ಯಮಗಳು ಪ್ರಶ್ನೆ ಕೇಳುತ್ತಿವೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಭರವಸೆ ಈಡೇರಿಸುವಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ.

ತಮ್ಮ ವೈಫಲ್ಯಗಳ ಮರೆಮಾಚಲು ಬಿಜೆಪಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಕಥೆಗಳನ್ನು ಕಟ್ಟುತ್ತಿದೆ. ಬಿಜೆಪಿ ನಾಯಕರು ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ಮೇಲೆ ದಾಳಿ ಮಾಡುತ್ತಿಲ್ಲ, ಕರ್ನಾಟಕದ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯವರ ಈ ಷಡ್ಯಂತ್ರವನ್ನು ನಾಶಪಡಿಸುತ್ತೇವೆಂದು ತಿಳಿಸಿದರು.

ಸಚಿವ ಪ್ರಿಯಾಂಕ್ ಖರ್ಗೆಯವರು ಮಾತನಾಡಿಸ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಮಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಪಿಸಿಸಿ ಅಧ್ಯಕ್ಷರು ಇದ್ದಾರೆ. ಪ್ರತಿಯೊಬ್ಬರಿಗೂ ನಿರ್ದಿಷ್ಟ ಪಾತ್ರವಿದೆ ಮತ್ತು ಎಲ್ಲರೂ ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ಹೇಳಿದರು.

ರಾಜ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಒಬ್ಬ ಮುಖ್ಯಮಂತ್ರಿ ಇದ್ದಾರೆ, ಮತ್ತೊಬ್ಬ ಮುಖ್ಯಮಂತ್ರಿಯನ್ನು ಹೊಂದಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್'ಗ ಚೆನ್ನಾಗಿ ತಿಳಿದಿರುತ್ತದೆ. ಜನರು ಸದಾಕಾಲ ನನಗಾಗಿ ಪ್ರಾರ್ಥಿಸುತ್ತಾರೆ. ಇದರಲ್ಲಿ ಹೊಸದೇನೂ ಇಲ್ಲ... ನಾನು ಮುಖ್ಯಮಂತ್ರಿ ಸ್ಪರ್ಧಿಯಲ್ಲ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com