
ಬೆಂಗಳೂರು: ಅಧಿಕಾರ ಹಂಚಿಕೆ ಕುರಿತಂತೆ ತೀವ್ರ ಚರ್ಚೆಗಳು ನಡುತ್ತಿರುವ ಮಧ್ಯೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧಿಕಾರ ತ್ಯಾಗ ಮಾಡಿದಂತೆ, ನಾವು ಅದೇ ಹಾದಿಯಲ್ಲಿ ಸಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು ಅವರ ಮಾತಿನಲ್ಲಿ ವೈರಾಗ್ಯದ ಛಾಯೆ ಕಂಡುಬಂದಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿಎಂ ಸಿದ್ದರಾಮಯ್ಯ ತ್ಯಾಗದ ಮಾತನ್ನು ಆಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿ ನೇತೃತ್ವದಲ್ಲಿ ಅನೇಕ ಕಾಂಗ್ರೆಸ್ಸಿಗರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ನಮ್ಮಲ್ಲೂ ಕೂಡ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಲಿದಾನಗಳನ್ನು ಮಾಡಿದ್ದಾರೆ, ಅವರಿಗಿಂತ ನಾವು ದೊಡ್ಡವರಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ನಾವು ಅನಿವಾರ್ಯ ಪರಿಸ್ಥಿತಿ ಬಂದರೆ ತ್ಯಾಗ ಮಾಡಬೇಕಾಗುತ್ತದೆ ಎಂಬ ಅರ್ಥದಲ್ಲಿ ಸಿಎಂ ಮಾತನಾಡಿದ್ದಾರೆ.
ತ್ಯಾಗಕ್ಕೆ ಸಿದ್ದ ಎಂಬ ಸಂದೇಶದ ಮೂಲಕ ಸಿಎಂ ಸಿದ್ದರಾಮಯ್ಯ ವಿರೋಧಿ ಬಣಕ್ಕೂ ಸಂದೇಶವನ್ನು ರವಾನೆ ಮಾಡಿದ್ದಾರಾ ಎಂಬ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಮತ್ತೊಂದೆಡೆ ಕಾರ್ಯಕರ್ತರ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ತ್ಯಾಗದ ಮಾತನ್ನಾಡಿದ್ದರು. ಅವರು ಕೂಡಾ ಕಾಂಗ್ರೆಸ್ ನಾಯಕರ ಉದಾಹರಣೆಯನ್ನು ನೀಡಿ, ಕೆಲವರು ಸಚಿವ ಸ್ಥಾನ ತ್ಯಾಗ ಮಾಡಬೇಕಾಗಿ ಬರಬಹುದು ಎಂದು ಪರೋಕ್ಷವಾಗಿ ಸೂಚನೆ ನೀಡಿದ್ದರು.
Advertisement