
ಬೆಳಗಾವಿ: ಸಾರ್ವಜನಿಕ ವೇದಿಕೆಯಲ್ಲಿ ಪಕ್ಷದ ವಿಷಯದ ಬಗ್ಗೆ ಮಾತನಾಡದಂತೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಯಾರು ಈ ವದಂತಿ ಹಬ್ಬಿಸುತ್ತಿದ್ದಾರೆ' ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಪ್ರಶ್ನಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವ ಸಚಿವರಿಗೂ, ಈ ಎಲ್ಲಾ ವದಂತಿಗಳನ್ನು ಯಾರು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾವುದೇ ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದಿದ್ದಾರೆ.
ಈ ವದಂತಿಗಳನ್ನೆಲ್ಲ ಯಾರು ಹಬ್ಬಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ, ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಇಲ್ಲೇಕೆ ಬರುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ವಿಚಾರ ಸೇರಿದಂತೆ, ಸಿಎಂ ಸೀಟಿನ ಬಗ್ಗೆ ಮಾತಾಡುತ್ತಿದ್ದ ಸಚಿವರಿಗೆ ನೋಟಿಸ್ ನೀಡುವ ವದಂತಿಗೆ ತೆರೆ ಎಳೆದಿದ್ದಾರೆ.
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಮಾತ್ರ ಅಪಮಾನ ಮಾಡಿಲ್ಲ. ಅಂಬೇಡ್ಕರ್ ತತ್ವಗಳನ್ನು ನಂಬುವವರ ಅಪಹಾಸ್ಯ ಮಾಡಿದ್ದಾರೆ. ಇದನ್ನು ವಿರೋಧಿಸಿ ಬೆಳಗಾವಿಯಲ್ಲಿ ಜ.21ರಂದು 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ, ಜ.27ರಂದು ಅಂಬೇಡ್ಕರ್ ಜನ್ಮಸ್ಥಳವಿರುವ ಮಧ್ಯಪ್ರದೇಶದಲ್ಲಿ ಸಮಾವೇಶ ಮಾಡಲಿದ್ದೇವೆ' ಎಂದು ಹೇಳಿದರು.
Advertisement