ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಶಿವರಾಜ್ ಸಿಂಗ್ ಸೃಷ್ಟಿಸಿದ ತಳಮಳ!

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಸಚಿವ ಹಾಗೂ ರಾಜ್ಯ ಬಿಜೆಪಿ ಆಂತರಿಕ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ನೀಡಿರುವ ಹೇಳಿಕೆ ಬಿ.ವೈ. ವಿಜಯೇಂದ್ರ ಬಣದಲ್ಲಿ ತಳಮಳ ಸೃಷ್ಟಿಸಿದೆ.
Shivraj Singh Chouhan
ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
Updated on

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಸಂಘರ್ಷ ಮುಂದುವರೆದಿರುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಎತ್ತಂಗಡಿಗೆ ಹೈಕಮಾಂಡ್ ಸಿದ್ಧತೆ ನಡೆಸಿದೆ.

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಸಚಿವ ಹಾಗೂ ರಾಜ್ಯ ಬಿಜೆಪಿ ಆಂತರಿಕ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ನೀಡಿರುವ ಹೇಳಿಕೆ ಬಿ.ವೈ. ವಿಜಯೇಂದ್ರ ಬಣದಲ್ಲಿ ತಳಮಳ ಸೃಷ್ಟಿಸಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದರು.

ರಾಜ್ಯ ಘಟಕದ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಚರ್ಚಿಸಿಯೇ ಆಯ್ಕೆ ಮಾಡುತ್ತೇವೆ. ಬೂತ್ ಸಮಿತಿ ಅಧ್ಯಕ್ಷದಿಂದ ರಾಜ್ಯ ಘಟಕದವರೆಗೂ ಚುನಾವಣೆ ನಡೆಯಲಿದೆ ಎಂದರು.

ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಶಾಸಕರಾದ ಬಸನಗೌಡ ಪಾಟೀಲ ಯಾತ್ನಾಳ್, ರಮೇಶ್ ಜಾರಕಿಹೊಳಿ ತಂಡ ಪಟ್ಟು ಹಿಡಿದಿದ್ದು, ಅಧ್ಯಕ್ಷನಾಗಿ ನಾನೇ ಮುಂದುವರೆಯುವೆ ಎಂದು ವಿಜಯೇಂದ್ರ ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಶಿವರಾಜ್ ಸಿಂಗ್ ಚೌಹಾಣ್ ನೀಡಿರುವ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

Shivraj Singh Chouhan
ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಇಂದು ಸಂಜೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. PESIT ಕಾಲೇಜಿನಲ್ಲಿ ಕೃಷಿ ಸ್ಟಾರ್ಟ್ ಅಪ್ ನ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com