ನಿಗಮ ಮಂಡಳಿಗಳಿಗೆ ಅನುದಾನ ಕೊರತೆ: ಬಿಜೆಪಿ ಆರೋಪ 'ರಾಜಕೀಯ ಪ್ರೇರಿತ'- ಸಿಎಂ ಸಿದ್ದರಾಮಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿನ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on: 

ಬೆಂಗಳೂರು: ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿನ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ರಾಜ್ಯದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೇರುವಂತೆ ಆಶಿಸಿ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಪೂಜೆ ಪುರಸ್ಕಾರ ಸಲ್ಲಿಸುತ್ತಿದ್ದು ಚರ್ಚೆಗೆ ಗ್ರಾಸವಾಗುತ್ತಿದೆ.

ದಾವೋಸ್ ವರ್ಲ್ಡ್ ಎಕನಾಮಿಕ್ ಫೋರಮ್ ವಾರ್ಷಿಕ ಸಭೆಗೆ ಗೈರಾಗಿರುವ ಕುರಿತು ಉತ್ತರಿಸಿದ ಅವರು, ಬಜೆಟ್ ತಯಾರಿ ಮಾಡುವ ಸಲುವಾಗಿ ಅಲ್ಲಿಗೆ ಹೋಗಿಲ್ಲ. 2024ರಲ್ಲೂ ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಗಳಿಗಾಗಿ ಮೀಸಲಾಗಿದ್ದ ಹಣವನ್ನು ದುರುಪಯೋಗಿಸಿಕೊಂಡು ಪರಿಶಿಷ್ಟರನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬಂದಾಗಿನಿಂದಲೂ ಈ ಸಮುದಾಯಗಳ ನೋವು, ಸಂಕಷ್ಟ, ದುಃಖ- ದುಮ್ಮಾನಗಳನ್ನು ತೋಡಿಕೊಳ್ಳಲು ಆಗದ ಪರಿಸ್ಥಿತಿಗೂ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುರುವಾರ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರ ಈವರೆಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರ ನೇಮಕ ಮಾಡುವ ಕಾಳಜಿ ಪ್ರದರ್ಶಿಸದೆ ಆಯೋಗವು ನಿಷ್ಕ್ರೀಯಗೊಳ್ಳುವಂತೆ ಮಾಡಿದೆ. ಆಯೋಗಗಳ ಅಧ್ಯಕ್ಷರ ನೇಮಕ ನೆನೆಗುದಿಗೆ ಬಿದ್ದಿರುವುದನ್ನು ಪ್ರಶ್ನಿಸಿ ಸದ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಘನ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದಿದ್ದಾರೆ.

ಅಂಬೇಡ್ಕರ್ ಬಗ್ಗೆ ಹಾಗೂ ಸಂವಿಧಾನದ ಕಾಳಜಿ ಕುರಿತು ಬೊಗಳೆ ಬಿಡುವ ಕಾಂಗ್ರೆಸ್ ಸರ್ಕಾರ ಸಂವಿಧಾನದ ಹೆಸರಿನಲ್ಲಿ ಉತ್ಸವಗಳನ್ನು ಮಾಡುತ್ತಿದೆಯೇ ಹೊರತು ಅದರ ಮೂಲ ಆಶಯವನ್ನು ಗಾಳಿಗೆ ತೂರುತ್ತಿದೆ. ಶೋಷಿತರ ದನಿಯಾಗಿ ಪರಿಶಿಷ್ಟ ಸಮುದಾಯಗಳ ರಕ್ಷಣೆಗೆ ಹಾಗೂ ಪರಿಶಿಷ್ಟ ಕಲ್ಯಾಣದ ಕುರಿತು ವರದಿ ನೀಡಬೇಕಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಈ ಸರ್ಕಾರ ಬಂದಾಗಿನಿಂದಲೂ ನಿಂತ ನಿರಂತಾಗಿರುವುದು ಅತ್ಯಂತ ದುರ್ದೈವದ ಸಂಗತಿ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ
ಸೋನಿಯಾ ಗಾಂಧಿಯಂತೆ ತ್ಯಾಗ ಮಾಡಲು ಸಾಧ್ಯವೇ?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಯಾರಿಗೆ?

ಪರಿಶಿಷ್ಟರ ಬಗ್ಗೆ ಮೊಸಳೆಗಣ್ಣೀರು ಸುರಿಸುವ ಸರ್ಕಾರದ ಅಸಲಿ ಮುಖವಾಡ ಈಗ ಬಯಲಾಗಿದೆ. ಪರಿಶಿಷ್ಟರ ಆಯೋಗಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲದಿರುವ ವಿಷಯ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿಯವರೆಗೂ ತಲುಪಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ನ್ಯಾಯಾಲಯದಿಂದಲೇ ಈ ಸರ್ಕಾರಕ್ಕೆ ಚಾಟಿ ಏಟು ಬೀಳದ ಹೊರತು ಪರಿಶಿಷ್ಟರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ ಎಂಬುದು ಇದೀಗ ಸಾಬೀತಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com