
ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಕಂಡ ಅಭ್ಯರ್ಥಿಗಳು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಈ ಸಭೆ ನಡೆದಿದ್ದು, ಆಯಾ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಕೆಲವು ನಿರ್ಧಾರಗಳಿಗೆ ಒಪ್ಪಿಗೆ ನೀಡದಿರುವ ಕುರಿತು ಚರ್ಚೆ ನಡೆಸಿದರು.
ಜನವರಿ 30 ರಂದು ನಡೆಯಲಿರುವ ಮುಂದಿನ ಸಂಪುಟ ಸಭೆಗೆ ಮುನ್ನ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.
ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳಿಗೆ ಹೋಲಿಸಿದರೆ ನಮಗೆ ಪ್ರಾಮುಖ್ಯತೆಯನ್ನು ನೀಡಲಾಗುತ್ತಿಲ್ಲ. ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಪರಾಜಿತ ಅಭ್ಯರ್ಥಿಗಳಿಗಿಂತ ದುಪ್ಪಟ್ಟು ಮತ ಪಡೆದರೂ ನಮ್ಮನ್ನು ಕಡೆಗಣಿಸಲಾಗುತ್ತಿದೆ. ನಮ್ಮ ಲೆಟರ್‌ಹೆಡ್‌ಗಳನ್ನು ಪರಿಗಣಿಸಲಾಗುತ್ತಿಲ್ಲ, ಆದರೆ, ವಿಧಾನಸಭಾ ಚುನಾವಣಾ ಅಭ್ಯರ್ಥಿಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಂಸದರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಪಕ್ಷದ ಸಂಘಟನೆ ವಿಚಾರದಲ್ಲೂ ನಮ್ಮನ್ನು ಪರಿಗಣಿಸುತ್ತಿಲ್ಲ. ನಿಗಮ-ಮಂಡಳಿ ನೇಮಕಾತಿ ಸೇರಿದಂತೆ ಯಾವುದೇ ಹುದ್ದೆ ಅಥವಾ ಯಾವುದೇ ಸ್ಥಾನಮಾನವನ್ನು ಕೇಳುತ್ತಿಲ್ಲ. ಆದರೆ, ಪಕ್ಷದ ವಿಚಾರದಲ್ಲಿ ನಮಗೆ ಆದ್ಯತೆ ಬೇಕು. ಈ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಅವರ ಗಮನಕ್ಕೂ ತರುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಹೇಳಿದ್ದಾರೆ.
ಯಾರೇ ಸೋತರೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ಸ್ಥಳೀಯ ಮತ್ತು ರಾಜ್ಯ ಚುನಾವಣೆಗಳಲ್ಲಿ ನಮ್ಮ ಪಾತ್ರವೇನು ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ. ಪಕ್ಷದ ಬೆಳವಣಿಗೆಯ ದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ. ಅವರ ನಿರ್ದೇಶನದಂತೆ ನಾವು ಕೆಲಸ ಮಾಡಲಿದ್ದೇವೆಂದು ತಿಳಿಸಿದ್ದಾರೆ.
ಇದೇ ವೇಳೆ ಸರ್ಕಾರ ನಮ್ಮದು, ನಾವು ಜನರೊಂದಿಗೆ ಇರಬೇಕು ಮತ್ತು ಎಲ್ಲರನ್ನೂ ಜೊತೆಗೆ ಕರೆದೊಯ್ಯಬೇಕು ಎಂದು ಡಿಕೆ.ಸುರೇಶ್ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳಾದ ಮೃಣಾಲ್ ಹೆಬ್ಬಾಳ್ಕರ್, ಸಂಯುಕ್ತಾ ಪಾಟೀಲ್, ಸ್ಟಾರ್ ಚಂದ್ರು, ಎಸ್.ಪಿ.ಮುದ್ದಹನುಮೇಗೌಡ, ಪ್ರೊ.ರಾಜೇಗೌಡ, ಮನ್ಸೂರ್ ಅಲಿಖಾನ್, ಕೆ.ಜಯಪ್ರಕಾಶ್ ಹೆಗಡೆ, ರಾಜು ಆಲಗೂರು ಸೇರಿದಂತೆ ಇನ್ನಿತರರು
Advertisement