
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ -ಪುನಾರಚನೆ ಸಹಿತ ಪ್ರಮುಖ ವಿಷಯಗಳ ಬಗ್ಗೆ ನೀಡುತ್ತಿದ್ದ ಬಹಿರಂಗ ಹೇಳಿಕೆಗೆ ಕಾಂಗ್ರೆಸ್ ಸ್ಪಷ್ಟ ಎಚ್ಚರಿಕೆ ಕೊಟ್ಟು ತಡೆ ಹಾಕಿದ ಅನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವಿವಾರ ಪ್ರತ್ಯೇಕ ಸಭೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ನ ಆದೇಶಕ್ಕೆ ಮಣಿಯುವ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ಅಂದರೆ ಅವರು ತಮ್ಮ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಬದ್ಧರಾಗಿರುವುದಾಗಿ ಸೂಕ್ಷ್ಮವಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಿವಕುಮಾರ್ ಹೊಂದಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಹಕ್ಕು ಮಂಡಿಸಿದ್ದರು. ಇದಾದ ನಂತರ ವಾರಗಳ ಕಾಲ ನಡೆದ ಶ್ಯಾಡೋ ಬಾಕ್ಸಿಂಗ್ ನಂತರ ಡಿಸಿಎಂ ಡಿಕೆ ಶಿವಕುಮಾರ್ ಮತ್ತಿ ಸಿಎಂ ಸಿದ್ದರಾಮಯ್ಯ ಇಬ್ಬರು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆಮಾಚಿದ್ದಾರೆ.
ಮುಖ್ಯಮಂತ್ರಿಯಾಗುವ ಕನಸನ್ನು ಪೋಷಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಸಿದ್ದರಾಮಯ್ಯ ಪಾಳಯದಲ್ಲಿರುವ ಇತರ ಸಚಿವರಿಗೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಖಡಕ್ ಸಂದೇಶ ನೀಡಿದ್ದಾರೆ. ಪಕ್ಷ ಮತ್ತು ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಸಾರ್ವಜನಿಕ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕೇಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿಯಾಗಬೇಕೆಂದು ಘೋಷಣೆಗಳನ್ನು ಕೂಗುತ್ತಿರುವ ಅಭಿಮಾನಿಗಳ ಕುರಿತು ಮಾತನಾಡಿದ ಪರಮೇಶ್ವರ, ರಾಜಕೀಯ ಪ್ರಶ್ನೆಗಳಿಗೆ ಉತ್ತರಿಸಲು ತಾನು ಹಿಂಜರಿಯುವುದಿಲ್ಲ ಎಂದು ತುಮಕೂರಿನಲ್ಲಿ ಭಾನುವಾರ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಖರ್ಗೆ ಅವರೊಂದಿಗೆ ಶಿವಕುಮಾರ್ ನಿರಾಳತವಾಗಿದ್ದರು. ಅವರು ಖುಷಿಯ ಮೂಡ್‌ನಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ದೊಡ್ಡ ನಗುವಿನ ಸೂಚನೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ,ಖರ್ಗೆ ಈ ಕಚೇರಿಯನ್ನು ನಿರ್ಮಿಸಿದರು. ಅವರು ಎರಡು ನಿಮಿಷಗಳ ಕಾಲ ಅಲ್ಲಿ ಇದ್ದು ನೆಮ್ಮದಿಯಾಗಿ ಕಾಫಿ ಕುಡಿಯಬಾರದೇ? ಎಂದು ಮರು ಪ್ರಶ್ನಿಸಿದರು.
ನಿಮ್ಮ ಕುಟುಂಬವು ಏನು ಚರ್ಚಿಸುತ್ತದೆ ಎಂಬುದನ್ನು ನೀವು ಬಹಿರಂಗಪಡಿಸುತ್ತೀರಾ? ಅದೇ ರೀತಿ ಕಾಂಗ್ರೆಸ್ ಒಂದೇ ಕುಟುಂಬ. ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಸಾಗರ ಅಣೆಕಟ್ಟಿನಲ್ಲಿ (ಗುರುವಾರ) ನಡೆದ 'ಬಾಗಿನ' ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ನಮ್ಮ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರು (ಸಿದ್ದರಾಮಯ್ಯ) ಮಾಧ್ಯಮಗಳ ಮುಂದೆ ಎಲ್ಲವನ್ನೂ ಸ್ಪಷ್ಟಪಡಿಸಿದ್ದಾರೆ. " ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದಾರೆ ಎಂದು ಪರೋಕ್ಷವಾಗಿ ಸುಳಿವು ನೀಡಿದರು.
ಅಕ್ಟೋಬರ್ 2025 ರಲ್ಲಿ ಮುಖ್ಯಮಂತ್ರಿಗಳು ತಮ್ಮ 30 ತಿಂಗಳ ಮುಖ್ಯಮಂತ್ರಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಸರ್ಕಾರದಲ್ಲಿ ಬದಲಾವಣೆಯಾಗಲಿದೆ ಎಂದು ಸಚಿವಾಲಯದೊಳಗಿನ ಸಿದ್ದರಾಮಯ್ಯ ಅವರ ಅನುಯಾಯಿಗಳು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಸಿದ್ದರಾಮಯ್ಯ ಹೈಕಮಾಂಡ್‌ನ ಆದೇಶವನ್ನು ಪಾಲಿಸಲು ಸಿದ್ಧರಾಗಿರುವುದರಿಂದ, ಸಚಿವರು ಸಹ ಉನ್ನತ ಹುದ್ದೆಗೆ ಹಕ್ಕು ಸಾಧಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ" ಎಂದು ಕಾಂಗ್ರೆಸ್ ನಾಯಕರೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.
Advertisement