ನಾವೇನು ಸನ್ಯಾಸತ್ವ ಸ್ವೀಕರಿಸಿದ್ದೇವೆಯೇ? ಡಿ.ಕೆ ಸುರೇಶ್ ಸಂಸ್ಕೃತಿ ಎಲ್ಲರಿಗೂ ಗೊತ್ತು: HD ಕುಮಾರಸ್ವಾಮಿ

ಅವರ ಹೇಳಿಕೆ ಏನೇ ಇರಲಿ. ಅವರು ಹೇಳಿದಂತೆ ಆಗುತ್ತದೆಯೇ? ನಾವು ಸನ್ಯಾಸತ್ವ ಸ್ವೀಕಾರ ಮಾಡಿದ್ದೀವಾ? ನಾವು ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕು ಅದನ್ನು ಮಾಡುತ್ತೇವೆ.
Union Minister HD Kumaraswamy
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Updated on

ಪಾಂಡವಪುರ: ನಾವೇನು ಸನ್ಯಾಸ ಸ್ವೀಕಾರ ಮಾಡಿದ್ದೇವೆಯೇ? ನಾವು ಹೋರಾಟ ಮಾಡುತ್ತೇವೆ, ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕು ಅದನ್ನು ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಶ್ರೀರಂಗಪಟ್ಟಣ – ಪಾಂಡವಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಚನ್ನಪಟ್ಟಣವನ್ನು ಜೆಡಿಎಸ್ ಬಿಟ್ಟುಬಿಟ್ಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು. ಅವರ ಹೇಳಿಕೆ ಏನೇ ಇರಲಿ. ಅವರು ಹೇಳಿದಂತೆ ಆಗುತ್ತದೆಯೇ? ನಾವು ಸನ್ಯಾಸತ್ವ ಸ್ವೀಕಾರ ಮಾಡಿದ್ದೀವಾ? ನಾವು ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕು ಅದನ್ನು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

ಡಿಕೆ ಸುರೇಶ್‌ ಸಂಸ್ಕೃತಿಯ ಬಗ್ಗೆ ನಾನು ಮಾತನಾಡಲ್ಲ. ಅವರು ಏನೇ ಚರ್ಚೆ ಮಾಡಿದರೂ ನನಗೆ ಸಂಬಂಧ ಇಲ್ಲ. ಜನರು ಬಹುನಿರೀಕ್ಷೆ ಇಟ್ಟು ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ಗೆ 136 ಸೀಟ್‌ಗಳನ್ನು ಕೊಟ್ಟಿರೋದು ನಿಜ. ಈ ಕಾಂಗ್ರೆಸ್ ರಾಜ್ಯದಲ್ಲಿ ಯಾವ ರೀತಿ ಕೆಲಸ ಮಾಡ್ತಾ ಇದೆ ಎನ್ನುವುದನ್ನು ಜನ ನೋಡುತ್ತಿದ್ದಾರೆ. ದಿನವೂ ಒಂದೊಂದು ಅಕ್ರಮಗಳು ಬೆಳಕಿಗೆ ಬರುತ್ತಿವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ನನಗೆ ಮಣ್ಣಿನ ಮೇಲೆ ಆಸೆಯೇ ಇಲ್ಲ ಎಂದು ಪದೇ ಪದೆ ಹೇಳುತ್ತಾರೆ. ಒಂದು ಕಡೆ ಅವರು ಹಾಗೆ ಹೇಳುತ್ತಿದ್ದರೆ ಇನ್ನೊಂದು ಕಡೆ ಒಂದೊಂದೇ ವಿಕೆಟ್ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಏನು ಬೇಕಾದರೂ ಆಗಬಹುದು ಎನ್ನುವಂತೆ ಇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನಗೆ ಐದು ವರ್ಷದ ಪೂರ್ಣ ಬಹುಮತದ ಸರ್ಕಾರ ಜನರು ನೀಡಬಹುದು ಎಂದು ವಿಶ್ವಾಸ ಹೊಂದಿದ್ದೇನೆ. ನಾನು ವಿಶ್ವಾಸ ಇಟ್ಟುಕೊಳ್ಳಲು ಅವರ ಪರ್ಮಿಷನ್ ತಗೋ ಬೇಕಾ? 5 ವರ್ಷದ ಸರ್ಕಾರ ಬಂದರೆ ನನ್ನದೇ ಆದ ಅಭಿವೃದ್ಧಿ ಪರಿಕಲ್ಪನೆಗಳು ಇವೆ. ಜನರ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಾಕಿಕೊಂಡಿದ್ದೇನೆ.

Union Minister HD Kumaraswamy
ಎಚ್‌ಡಿ ಕುಮಾರಸ್ವಾಮಿ ಮಟ್ಟ ಹಾಕುವುದು ಅಸಾಧ್ಯ: ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com