
ಬೆಂಗಳೂರು: ಪಕ್ಷ ಮತ್ತು ಸರ್ಕಾರದಲ್ಲಿನ ಬದಲಾವಣೆಯ ಬಗ್ಗೆ ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕರಿಗೆ, ವಿಶೇಷವಾಗಿ ಸಚಿವರಿಗೆ ಆದೇಶ ನೀಡಿದ್ದರೂ ಕೂಡ, ಮುಂದಿನ ಮುಖ್ಯಮಂತ್ರಿಯನ್ನು ಯಾರು ಆಯ್ಕೆ ಮಾಡುತ್ತಾರೆ, ಅದು ಪಕ್ಷದ ಹೈಕಮಾಂಡೇ ಅಥವಾ ಶಾಸಕರೇ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಜೋರಾಗಿದೆ.
ರಾಜ್ಯದಲ್ಲಿ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುತ್ತಿರುವುದರಿಂದ ಈ ಚರ್ಚೆ ಪ್ರಸ್ತುತವಾಗಿದೆ. ಶಾಸಕರ ಅಭಿಪ್ರಾಯವೇ ಪಕ್ಷದಲ್ಲಿ ಹೆಚ್ಚು ಮುಖ್ಯ ಎಂದು ಸಿದ್ದರಾಮಯ್ಯ ಅವರ ಬೆಂಬಲಿಗರು ಹೇಳಿಕೊಂಡರೆ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಡಿ ಕೆ ಶಿವಕುಮಾರ್ ಬೆಂಬಲಿಗರು ಪ್ರತಿಪಾದಿಸುತ್ತಿದ್ದಾರೆ.
ಈ ಮಧ್ಯೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ಕೆಲವು ಸಮಯದ ಹಿಂದೆ ದುಬೈ ಪ್ರವಾಸವನ್ನು ಮುಂದೂಡಿದ್ದ 15 ಶಾಸಕರು ಈಗ ಮತ್ತೊಮ್ಮೆ ಪ್ರವಾಸ ಹೋಗಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ಪರಿಗಣಿಸುವಂತೆ ಹೈಕಮಾಂಡ್‌ಗೆ ಸಂದೇಶ ಕಳುಹಿಸುವ ತಂತ್ರ ಇದಾಗಿರಬಹುದು ಎಂದು ಮೂಲವೊಂದು ತಿಳಿಸಿದೆ.
ಡಿ ಕೆ ಶಿವಕುಮಾರ್ ಬೆಂಬಲಿಗ ಮತ್ತು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು, ಮುಂದಿನ ಸಿಎಂ ನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿಕೆ ಕೊಟ್ಟಿದ್ದರಿಂದ ಸಿಎಂ ಆಯ್ಕೆ ಬಗ್ಗೆ ಚರ್ಚೆ ಆರಂಭವಾಯಿತು. ಸಿದ್ದರಾಮಯ್ಯ ಅವರ ಅನುಯಾಯಿಯಾಗಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಕ್ಷದ ಶಾಸಕರು ಸಿಎಂ ಹುದ್ದೆಯನ್ನು ನಿರ್ಧರಿಸುತ್ತಾರೆ ಎಂದು ತಿರುಗೇಟು ನೀಡುವ ಪ್ರತಿಕ್ರಿಯೆ ಕೊಟ್ಟರು.
ಇದಕ್ಕೆ ನಿನ್ನೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಾಮಾನ್ಯವಾಗಿ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ ಮತ್ತು ವಿವಿಧ ಅಂಶಗಳನ್ನು ಪರಿಶೀಲಿಸಿದ ನಂತರ ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದು ಹೇಳಿದರು. ಇದು ಶಾಸಕರಿಗೂ ಅನ್ವಯಿಸುತ್ತದೆ, ಶೀಘ್ರದಲ್ಲೇ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.
ಪಕ್ಷದ ನಾಯಕರು, ಶಾಸಕರು ಹೇಳಿಕೆಗಳನ್ನು ನೀಡಬಾರದು ಎಂಬ ಪಕ್ಷದ ಹೈಕಮಾಂಡ್ ಸೂಚನೆಯು ಸಚಿವರು ಮತ್ತು ಶಾಸಕರಿಬ್ಬರಿಗೂ ಅನ್ವಯಿಸುತ್ತದೆ. ಹೈಕಮಾಂಡ್ ಮೊದಲು ಶಾಸಕರ ಅಭಿಪ್ರಾಯವನ್ನು ತೆಗೆದುಕೊಂಡು ಬಹುಮತದ ಅಭಿಪ್ರಾಯದಂತೆ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಬಹುದು. ಇತರ ಅಂಶಗಳನ್ನು ಪರಿಶೀಲಿಸಿ ಸಿಎಂನ್ನು ಘೋಷಿಸಬಹುದು ಎಂದರು.
Advertisement