ಡಿ.ಕೆ ಶಿವಕುಮಾರ್ ನಿವಾಸಕ್ಕೆ ಎಂಬಿ ಪಾಟೀಲ್ ದಿಢೀರ್ ಭೇಟಿ! ಹೇಳಿದ್ದೇನು?

ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.
DCM DK Shivakumar and MB Patil
ಡಿಕೆ ಶಿವಕುಮಾರ್, ಎಂಬಿ ಪಾಟೀಲ್
Updated on

ಬೆಂಗಳೂರು: ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿನ ಅಸಮಾಧಾನ, ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂಬಂಧ ಎದಿದ್ದ ವದಂತಿಗಳನ್ನು ಸ್ವಲ್ಪ ಮಟ್ಟಿಗೆ ತಣ್ಣಾಗಾಗಿಸುವಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯನವರನ್ನು ಬದಲಿಸಿ ಆ ಸ್ಥಾನಕ್ಕೇರಲು ಪ್ರಯತ್ನಿಸುತ್ತಿದ್ದ ಡಿ.ಕೆ.ಶಿವಕುಮಾರ್ ಸದ್ಯಕ್ಕೆ ತಮ್ಮ ಪಟ್ಟಿನಿಂದ ಹಿಂದೆ ಸರಿದಿದ್ದಾರೆ. ಸಿಎಂ ಬದಲಾವಣೆಯ ಚರ್ಚೆಗೆ ಸದ್ಯಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಹೈಕಮಾಂಡ್ ಕಳುಹಿಸಿದ್ದ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಂಧಾನ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯನವರನ್ನು ಬದಲಿಸುವ ಯಾವುದೇ ಯೋಜನೆ ಇಲ್ಲ" ಎಂದು ಸುರ್ಜೇವಾಲಾ ಹೇಳುವ ಮೂಲಕ ಸಿಎಂ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಡಿಕೆಶಿ ಈಗ ಸಿಎಂ ಕನಸನ್ನು ಕೈ ಚೆಲ್ಲಿದಂತೆ ಕಾಣುತ್ತಿದೆ. ಈ ಮಧ್ಯೆ ಭಾರಿ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ದಿಢೀರನೆ ಗುರುವಾರ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾದದ್ದು ತೀವ್ರ ಕುತೂಹಲ ಮೂಡಿಸಿತು.

ಡಿಕೆ ಶಿವಕುಮಾರ್ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ಡಿಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನ, ಭಿನ್ನಮತ ಇಲ್ಲ ಎಂದು ಸ್ಪಷ್ಪಪಡಿಸಿದರು.

ರಣದೀಪ್ ಸುರ್ಜೇವಾಲ ಅವರು ಪಕ್ಷದ ಶಾಸಕರೊಂದಿಗೆ ಚರ್ಚಿಸಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ವಿಜಯಪುರದಲ್ಲಿ ನಿಗದಿಪಡಿಸಿರುವ ಮುಂದಿನ ಸಚಿವ ಸಂಪುಟ ಸಭೆ ಸಿದ್ಧತೆ ಕುರಿತು ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿಯಲ್ಲಿ ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.

DCM DK Shivakumar and MB Patil
ಅಖಾಡದಲ್ಲಿ ಒಂಟಿಯಾದ್ರಾ 'ಬಂಡೆ': ಮುಖ್ಯಮಂತ್ರಿ ಕುರ್ಚಿ ಆಸೆ ಬಿಟ್ಟಿದ್ದೇಕೆ ಡಿಕೆಶಿ?; ಸಿದ್ದರಾಮಯ್ಯ CM ಆಗಿ ಮುಂದುವರಿಯಲು ಸಹಾಯಕವಾಗಿವೆ ಈ ಅಂಶಗಳು!

ರೈತರಿಗೆ ಸೂಕ್ತ ಪರಿಹಾರ ಸಿಗಬೇಕು: ದೇವನಹಳ್ಳಿ ಬಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ 10 ಗ್ರಾಮಗಳ ವ್ಯಾಪ್ತಿಗೆ ಸೇರಿರುವ 1,282 ಎಕರೆ ಭೂಮಿ ಅಗತ್ಯವಿದೆ. ಆದರೆ, ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಡುತ್ತಿದ್ದಾರೆ. ಈ ಸಂಬಂಧ ಜುಲೈ 4ರ ಶುಕ್ರವಾರ ಸಿಎಂ ಜೊತೆ ಸಭೆ ಏರ್ಪಡಿಸಲಾಗಿದೆ. ಕೈಗಾರಿಕೆಗಳಿಗೆ ಜಮೀನು ಬೇಕಾಗುತ್ತದೆ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ ಕೊಡಲಾಗುವುದು ಎಂದು ಪಾಟೀಲ ಇದೇ ಸಂದರ್ಭದಲ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com