ಔಟ್ ಡೇಟೆಡ್ ವಸ್ತುವಿಗೆ ಮಾರುಕಟ್ಟೆಯಲ್ಲಿ ಬೆಲೆ ಇರಲ್ಲ; ಹೆಸರಿಟ್ಟುಕೊಂಡ ಮಾತ್ರಕ್ಕೆ ನರಿ ಸಿಂಹವಾಗಲ್ಲ: ಪ್ರತಾಪ್ ಸಿಂಹ ವಿರುದ್ಧ ಖರ್ಗೆ ವಾಗ್ದಾಳಿ

ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ?
Prathap simha and Priyank kharge
ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ
Updated on: 

ಬೆಂಗಳೂರು: ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ ಎಂದು ಪ್ರತಾಪ್ ಸಿಂಹ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ. ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ ಎಂದು ತಿರುಗೇಟು ನೀಡಿದ್ದಾರೆ.

ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ? ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ. ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ಹೇಳಿದ್ದಾರೆ.

Prathap simha and Priyank kharge
Watch | ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂದಿದೆ: ಪ್ರತಾಪ್ ಸಿಂಹ ವಾಗ್ದಾಳಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com