ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ ವಿಜಯೇಂದ್ರ

ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ.
BY Vijayendra
ಬಿ.ವೈ. ವಿಜಯೇಂದ್ರ
Updated on

ಮೈಸೂರು: ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರದ 11 ವರ್ಷಗಳ ಆಡಳಿತವನ್ನು ಗುರುತಿಸಲು ನಡೆದ ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವವರೆಗೆ ತಾನು ವಿಶ್ರಮಿಸುವುದಿಲ್ಲ ಎಂದು ಘೋಷಿಸಿದ ಅವರು, ಕೇಂದ್ರದೊಂದಿಗೆ ಸಮನ್ವಯದಿಂದ ಡಬಲ್ ಎಂಜಿನ್ ಸರ್ಕಾರವಾಗಿ ಕೆಲಸ ಮಾಡುವುದಾಗಿ ಹೇಳಿದರು.

ಹಳೇ ಮೈಸೂರು ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳುವ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದರು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.

ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸ್ಪರ್ಧೆಯಿಂದ ಹೊರಬಂದಿದ್ದಾರೆ ಎಂದು ಸುಳಿವು ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದೆ ಎಂದು ಅವರು ಹೇಳಿದರು. ರಣದೀಪ್ ಸಿಂಗ್ ಸುರ್ಜೇವಾಲ (ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ) ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸುವ ಮೂಲಕ ನಾಯಕತ್ವ ಬದಲಾವಣೆಗೆ ಅಡಿಪಾಯ ಹಾಕಿದ್ದಾರೆ ಎಂದು ಅವರು ಹೇಳಿದರು. "ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಂಚಾಲಕರನ್ನಾಗಿ ನೇಮಿಸಿ ಅವರನ್ನು ನವದೆಹಲಿಗೆ ಸ್ಥಳಾಂತರಿಸಿದೆ.

BY Vijayendra
ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ: ತಾತ್ಕಾಲಿಕ ವಿರಾಮವೋ ಅಥವಾ ಅಂತ್ಯವೋ?

ಸಿದ್ದರಾಮಯ್ಯ ಅವರ ಸ್ಥಾನವನ್ನು ಬದಲಾಯಿಸಲಾಗುವುದು ಎಂದು ನನಗೆ ವಿಶ್ವಾಸವಿದೆ. ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮುಂದಿನ ಎರಡು ತಿಂಗಳಲ್ಲಿ ರಾಜೀನಾಮೆ ನೀಡಬೇಕಾಗುತ್ತದೆ" ಎಂದು ಅವರು ಹೇಳಿದರು.

ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಕಳಪೆ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಜನರು ಸರ್ಕಾರವನ್ನು ಶಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು. "ಯಾರು ಸಿಎಂ ಆಗುತ್ತಾರೆ ಎಂಬುದರ ಬಗ್ಗೆ ನಮಗೆ ಚಿಂತೆ ಇಲ್ಲ, ಆದರೆ ಜನರ ಆಕಾಂಕ್ಷೆಗಳನ್ನು ಪೂರೈಸುವ ಹೊಸ ಸರ್ಕಾರವನ್ನು ನಾವು ಬಯಸುತ್ತೇವೆ" ಎಂದು ಅವರು ಹೇಳಿದರು.

ಶಿವಮೊಗ್ಗದಲ್ಲಿ ಧಾರ್ಮಿಕ ವಿಗ್ರಹಗಳ ಧ್ವಂಸವನ್ನು ಖಂಡಿಸಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕೀಯವು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದರು. ಹಿಂದೂ ಕಾರ್ಯಕರ್ತ ಪ್ರವೀಣ್ ಶೆಟ್ಟಿ ಅವರ ಕೊಲೆ, ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ದಾಳಿ ಮತ್ತು ಶಿವಮೊಗ್ಗ ಘಟನೆಗೆ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ರಕ್ಷಣೆಯೇ ಕಾರಣ ಎಂದು ಅವರು ಆರೋಪಿಸಿದರು.

BY Vijayendra
ಮೇಕೆದಾಟು ಯೋಜನೆ: ತಾಕತ್ತಿದ್ದರೆ ತಮಿಳುನಾಡು ಸರ್ಕಾರವನ್ನು ಒಪ್ಪಿಸಿ, ಮೋದಿಯಿಂದ ಐದೇ ನಿಮಿಷದಲ್ಲಿ ಒಪ್ಪಿಗೆ ಕೊಡಿಸುವೆ; ಕಾಂಗ್ರೆಸ್'ಗೆ HDK ಸವಾಲು

ಉತ್ತಮ ರಸ್ತೆಗಳನ್ನು ಪಡೆಯಲು ಉಚಿತ ಗ್ಯಾರಂಟಿ ಯೋಜನೆಗಳು ಮತ್ತು ಅನ್ನಭಾಗ್ಯ ಅಕ್ಕಿಯನ್ನು ತ್ಯಜಿಸುವಂತೆ ಹೇಳಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರನ್ನು ಟೀಕಿಸಿದ ವಿಜಯೇಂದ್ರ ಜನರ ಗಮನವನ್ನು ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಕಾಂತರಾಜ್ ಆಯೋಗದ ವರದಿಯನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಜಾತಿ ಜನಗಣತಿಗೆ 167 ಕೋಟಿ ರೂ. ಖರ್ಚು ಮಾಡಿದ ನಂತರ, ಸರ್ಕಾರವು ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಅದನ್ನು ಕೈಬಿಟ್ಟಿದೆ ಮತ್ತು ಹೊಸ ಸಮೀಕ್ಷೆಯನ್ನು ನಡೆಸುತ್ತಿದೆ ಎಂದು ಅವರು ಹೇಳಿದರು. ಮೇಕೆದಾಟು ಯೋಜನೆಯ ಬಗ್ಗೆ ಬಿಜೆಪಿಯ ನಿಲುವಿನ ಕುರಿತು, ತಮಿಳುನಾಡು ಸರ್ಕಾರ ಒಪ್ಪಿಕೊಂಡರೆ ಕೇಂದ್ರವು ಅದನ್ನು ಅನುಮೋದಿಸುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com