ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!

ಈಗ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಸಹ ಸರ್ಕಾರದ ಬಳಿ ದುಡ್ಡಿಲ್ಲ ಎಂಬುದು ವರದಿಯಾಗಿದೆ. ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಯಾರಾದರೂ ದಾನಿಗಳು ಸಿಗುತ್ತಾರಾ ಎಂದು ಚಾತಕಪಕ್ಷಿ ರೀತಿ ಹುಡುಕುತ್ತಿದೆ.
BJP tweet
ಬಿಜೆಪಿ ಟ್ವೀಟ್
Updated on

ಬೆಂಗಳೂರು: ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದು ಸಹ ಅಷ್ಟೇ ಸತ್ಯ. ಲಾಟರಿ ಸಿಎಂ ಸಿದ್ದರಾಮಯ್ಯ ಮೇಜು ಕುಟ್ಟಿ ತಮ್ಮ ಸರ್ಕಾರ ದಿವಾಳಿಯಾಗಿಲ್ಲ ಎಂದು ಬಡಾಯಿ ಕೊಚ್ಚಿಕೊಂಡರೂ, ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾತ್ರ ಶ್ವೇತ ಪತ್ರ ಹೊರಡಿಸಲು ಮಾತ್ರ ಅವರು ತಯಾರಿಲ್ಲ ಎಂದು ಬಿಜೆಪಿ ಟೀಕಿಸಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಕೊಡಲು ದಾನಿಗಳಿಗಾಗಿ ಸರ್ಕಾರ ಶೋಧ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗೀ ವಾಗ್ದಾಳಿ ನಡೆಸಿದೆ.

ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದು ಸಹ ಅಷ್ಟೇ ಸತ್ಯ. ಲಾಟರಿ ಸಿಎಂ ಸಿದ್ದರಾಮಯ್ಯ ಅವರು ಮೇಜು ಕುಟ್ಟಿ ತಮ್ಮ ಸರ್ಕಾರ ದಿವಾಳಿಯಾಗಿಲ್ಲ ಎಂದು ಬಡಾಯಿ ಕೊಚ್ಚಿಕೊಂಡರೂ, ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾತ್ರ ಶ್ವೇತ ಪತ್ರ ಹೊರಡಿಸಲು ಮಾತ್ರ ಅವರು ತಯಾರಿಲ್ಲ.

ಈಗ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಸಹ ಸರ್ಕಾರದ ಬಳಿ ದುಡ್ಡಿಲ್ಲ ಎಂಬುದು ವರದಿಯಾಗಿದೆ. ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಯಾರಾದರೂ ದಾನಿಗಳು ಸಿಗುತ್ತಾರಾ ಎಂದು ಚಾತಕಪಕ್ಷಿ ರೀತಿ ಹುಡುಕುತ್ತಿದೆ. ಇದನ್ನು ಗಮನಿಸಿದರೆ ಸಾಕು ಸರ್ಕಾರ ಅದ್ಯಾವ ಪರಿ ದಿವಾಳಿಯಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಕಿಡಿಕಾರಿದೆ.

ಉರ್ದು ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವ ಲಾಟರಿ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ತಮ್ಮ ಟ್ವೀಟ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರೂ.38 ಸಾವಿರ ಕೋಟಿ ಅನುದಾನ ನೀಡಿದ್ದೇವೆ ಎಂದಿದ್ದರು. ವಾರ್ಷಿಕವಾಗಿ ರೂ.38 ಸಾವಿರ ಕೋಟಿ ಅನುದಾನ ನೀಡಿದ ಬಳಿಕವೂ, ಮಕ್ಕಳಿಗೆ ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್‌ ನೀಡಲು ದಾನಿಗಳನ್ನು ಹುಡುಕುತ್ತದೆ ಎಂದ ಮೇಲೆ ರೂ.38 ಸಾವಿರ ಕೋಟಿ ಅನುದಾನ ನೀಡಿದ್ದು ಸುಳ್ಳಾಗಬೇಕಲ್ಲವೇ..?? ಶಾಲಾ ಮಕ್ಕಳಿಗೆ ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್‌ ನೀಡಲು ಮೇ 13, 2025 ರಂದು ಅನುದಾನ ಬಿಡುಗಡೆಯಾಗಿದೆ ಎಂದು ಒಂದೆಡೆ ಸರ್ಕಾರ ಹೇಳುತ್ತದೆ.

ಹಾಗಾದರೆ ಮಕ್ಕಳ ಶೂ ಹಾಗೂ ಸಾಕ್ಸ್‌ ಖರೀದಿಗೆ ಬಿಡುಗಡೆಯಾಗಿದ್ದ ರೂ.111.88 ಕೋಟಿ ಅನುದಾನ ಯಾವ ರಾಜ್ಯದ ಕಾಂಗ್ರೆಸ್‌ ಚುನಾವಣಾ ಫಂಡ್‌ ಗೆ ಬಳಕೆಯಾಯಿತು ಎಂಬುದನ್ನು ಖುದ್ದು ಸಿದ್ದರಾಮಯ್ಯ ಅವರೆ ಹೇಳಬೇಕು. ಏಕೆಂದರೆ, ರೂ.111.88 ಕೋಟಿ ಅನುದಾನ ಬಿಡುಗಡೆಯಾದ ಬಳಿಕವೂ ಶೂ ನೀಡಲು ದಾನಿಗಳನ್ನು ಹುಡುಕುತ್ತದೆ ಎಂದ ಮೇಲೆ ಬಿಡುಗಡೆಯಾದ ಅನುದಾನ ಯಾರ ಜೇಬು ಸೇರಿರಬಹುದು.

BJP tweet
ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ; ತಮಾಷೆಗೆ ಹೇಳಿದೆ ಅಷ್ಟೇ; ನಾನು ಸಚಿವನಾದ್ರೆ ಪುರುಷರಿಗೂ ಉಚಿತ ಬಸ್ ಪ್ರಯಾಣ!

ಸರ್ಕಾರದ ಬೊಕ್ಕಸದಲ್ಲಿ ಬಿಡಿಗಾಸು ಅನುದಾನ ಉಳಿದಿಲ್ಲ, ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂಬುದನ್ನು ಲಾಟರಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಂಡತನ ಬಿಟ್ಟು ಒಪ್ಪಿಕೊಳ್ಳಬೇಕು. ಶೂ ನೀಡಲು ದಾನಿಗಳನ್ನು ಹುಡುಕುವುದನ್ನು ಬಿಟ್ಟು, ಶೂ ನೀಡಲು ಬಿಡುಗಡೆಯಾದ ಅನುದಾನ ಯಾರ “ಕೈ” ಸೇರಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, 'ಅನ್ನರಾಮಯ್ಯ' ಎಂದು ಹೊಗಳಿಸಿ ಕೊಳ್ಳುವ ಸಿದ್ದರಾಮಯ್ಯ ಅವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ? ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು ಅನ್ನಭಾಗ್ಯ ಯೋಜನೆಯ ಸಾರಥಿಗಳಾಗಿ ಕೆಲಸ ಮಾಡುತ್ತಿದ್ದ ಲಾರಿ ಮಾಲೀಕರಿಗೆ ತಿಂಗಳುಗಟ್ಟಲೆ ಬಾಡಿಗೆ ಪಾವತಿಸದೇ (4500 ಲಾರಿಗಳು)ಅವರ ಬದುಕಿನ ಭಾಗ್ಯಕ್ಕೆ ಬರೆ ಎಳೆದಿದ್ದೀರಿ. ಇದರ ಪರಿಣಾಮ ಇಂದಿನಿಂದ ಅನ್ನ ಭಾಗ್ಯವನ್ನು ಅವಲಂಬಿಸಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ‘ಖಾಲಿ ತಟ್ಟೆಯಲ್ಲಿ ಕೈ ತೊಳೆಯುವ ಭಾಗ್ಯ ‘ಕರುಣಿಸುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.

ನಿಮ್ಮ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯದ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಬಾಡಿಗೆ ಕೊಡುವ ಸ್ಥಿತಿಯಲ್ಲೂ ಇಲ್ಲದ ಕೆಟ್ಟ ಪರಿಸ್ಥಿತಿಗೆ ತಲುಪಿದೆ ಎಂದರೆ ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದರ ಸೂಚನೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತಿದೆ. ಅನ್ನಭಾಗ್ಯದ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವೊಂದೇ ಸಾಗಣೆ ವೆಚ್ಚ ಭರಿಸಬೇಕಿಲ್ಲ, ಪ್ರಧಾನಿ ಮೋದಿಅವರ ನೇತೃತ್ವದ ಕೇಂದ್ರ ಸರ್ಕಾರ ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ನೀಡುತ್ತಿರುವ ಉಚಿತ 5 ಕೆ.ಜಿ ಅಕ್ಕಿಯ ಜೊತೆಗೆ ಆಹಾರ ಧಾನ್ಯ ಸಾಗಣೆಯ ವೆಚ್ಚವನ್ನೂ ಭರಿಸುತ್ತಿದೆ ಆದರೂ ಲಾರಿ ಮಾಲೀಕರಿಗೆ ಬಾಡಿಗೆ ಕೊಡದೆ ಏಕಿಷ್ಟು ಸತಾಯಿಸುತ್ತಿದ್ದೀರಿ.

ನಿಮ್ಮ ಸರ್ಕಾರದ ಭ್ರಷ್ಟ ವ್ಯವಹಾರಗಳಿಗೆ ಆದಾಯ ಮೂಲಗಳನ್ನು ಕಂಡುಹಿಡಿದುಕೊಳ್ಳಲು ಬೆಲೆ ಏರಿಕೆ, ಅವೈಜ್ಞಾನಿಕ ತೆರಿಗೆಗಳನ್ನು ಜನರ ಮೇಲೆ ಹೇರುತ್ತಲೇ ಇದ್ದೀರಿ, ನಿಮ್ಮ ಕಮಿಷನ್ ದಂಧೆಗೆ ಕನಿಷ್ಠ ಅಲ್ಪವಿರಾಮನ್ನಾದರೂ ನೀಡಿ ಜನರನ್ನು ಹಸಿವೆಂಬ ಬಾಧೆ ಬಾದಿಸದಂತೆ ಈ ಕೂಡಲೇ ಲಾರಿ ಮಾಲೀಕರ ಬಾಕಿ ಹಣವನ್ನು ಪಾವತಿಸಿ ಹಸಿದವರ ಆಕ್ರೋಶ ಹಾಗೂ ಲಾರಿಯನ್ನು ನಂಬಿ ಜೀವನ ಮಾಡುತ್ತಿರುವ ಲಾರಿ ಮಾಲೀಕರು ಹಾಗೂ ಚಾಲಕರ ಕುಟುಂಬಗಳ ಶಾಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಿ ಎಂದು ಹೇಳಿದ್ದಾರೆ.

BJP tweet
ನಿಮಗೆ ಉತ್ತಮ ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್ ಮಾಡ್ತೀವಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ!

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪೋಸ್ಟ್ ಮಾಡಿ, ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿ ಮಾಲೀಕರಿಗೆ ಕಳೆದ 6 ತಿಂಗಳಿಂದ ಬಿಲ್ ಪಾವತಿಸದ ಕಾರಣಕ್ಕಾಗಿ ಲಾರಿ ಮಾಲೀಕರು ಇಂದಿನಿಂದ ಮುಷ್ಕರ ಆರಂಭಿಸಿದ್ದು ರಾಜ್ಯದಲ್ಲಿ ಆಹಾರ ಧಾನ್ಯ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಸಿದ್ದರಾಮಯ್ಯ ಅವರೇ, ಲಾರಿ ಮಾಲೀಕರಿಗೆ 6 ತಿಂಗಳಿಂದ 250 ಕೋಟಿ ರೂಪಾಯಿ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿದ್ದೀರಲ್ಲ, ಪಾಪ ಲಾರಿ ಮಾಲೀಕರು ಚಾಲಕರಿಗೆ ಸಂಬಳ ಹೇಗೆ ಕೊಡಬೇಕು? ಲಾರಿಗಳಿಗೆ ಡೀಸೆಲ್ ಹೇಗೆ ಹಾಕಿಸಬೇಕು? ಲಾರಿ ಮುಷ್ಕರದಿಂದ ಆಹಾರ ಧಾನ್ಯ ಪೂರೈಕೆಯಲ್ಲಿ ವ್ಯತ್ಯಾಸವಾಗಿ ಬಡವರಿಗೆ ಪಡಿತರ ಪೂರೈಕೆ ವಿಳಂಬವಾದರೆ ಅದಕ್ಕೆ ಯಾರು ಹೊಣೆ?

ವಿಪಕ್ಷಗಳು ಸರ್ಕಾರ ದಿವಾಳಿ ಆಗಿದೆ ಎಂದು ಟೀಕೆ ಮಾಡಿದರೆ, ಅದು ಸುಳ್ಳು, ಸರ್ಕಾರದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ತಿಪ್ಪೆ ಸಾರಿಸುವ ಕೆಲಸ ಮಾಡುತ್ತೀರಿ. ಇಲ್ಲಿ ನೋಡಿದರೆ ಲಾರಿ ಮಾಲೀಕರಿಗೆ ಆರು ತಿಂಗಳಿಂದ 250 ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದ್ದೀರಿ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com