ಶಾಸಕರೊಂದಿಗೆ 2ನೇ ಸುತ್ತಿನ ಸಭೆ: ಅಭಿಪ್ರಾಯ ಸಂಗ್ರಹ, ಸುರ್ಜೇವಾಲಾ ರಾಜ್ಯ ಪ್ರವಾಸದ ಹಿಂದಿನ ಗುಟ್ಟೇನು?

ರಾಜ್ಯ ಪ್ರವಾಸದಲ್ಲಿರುವ ಸುರ್ಜೇವಾಲಾ ಅವರು, ಒಂದರ ಹಿಂದೆ ಒಂದರಂತೆ ಸಭೆ ನಡೆಸುತ್ತಿದ್ದು, ಈ ಸಭೆಯ ಮೂಲಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ತರುವ ಬಗ್ಗೆ ಸುಳಿವು ನೀಡುತ್ತಿದ್ದಾರೆ.
Randeep Singh Surjewala
ರಣದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಶಾಸಕರೊಂದಿಗೆ 2ನೇ ಸುತ್ತಿನ ಸಭೆ ನಡೆಸಿದ್ದು, ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಸುರ್ಜೇವಾಲಾ ಅವರು, ಒಂದರ ಹಿಂದೆ ಒಂದರಂತೆ ಸಭೆ ನಡೆಸುತ್ತಿದ್ದು, ಈ ಸಭೆಯ ಮೂಲಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ತರುವ ಬಗ್ಗೆ ಸುಳಿವು ನೀಡುತ್ತಿದ್ದಾರೆ ಎನ್ನಲಾಗಿದೆ.

ನವೆಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರ್ರಚನೆ ನಡೆಯುವ ನಿರೀಕ್ಷೆಯಲ್ಲಿ ಶಾಸಕರಿದ್ದಾರೆ. ಆಧರೆ, ಸುರ್ಜೆವಾಲಾ ಅವರು ಪಕ್ಷದ ಸಂಘಟನಾ ಶಕ್ತಿ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆಯ ಬಗ್ಗೆ ಅವರ ಪ್ರತಿಕ್ರಿಯೆಗಳನ್ನು ಕೋರಿದ್ದಾರೆಂದು ಮೂಲಗಳು ತಿಳಿಸಿವೆ.

2028 ರ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಅವರ ಸಲಹೆಗಳನ್ನು ಕೋರಿದ್ದಾರೆಂದು ಮೂಲಗಳು ತಿಳಿಸಿವೆ.

ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಬಿಜೆಪಿಯಲ್ಲಿದ್ದಾಗ ಪ್ರಾಮುಖ್ಯತೆ ನೀಡಲಾಗಿದ್ದರಿಂದ ಸರ್ಕಾರದಲ್ಲಿ ಜವಾಬ್ದಾರಿಯನ್ನು ನೀಡುವಂತೆ ಬಯಸಿದ್ದರು ಎನ್ನಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಸವದಿಯವರು, ಸಿಎಂ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸುರ್ಜೆವಾಲಾ ಅವರಿಗೆ ಹೇಳಿದ್ದಾಗಿ ತಿಳಿಸಿದರು.

Randeep Singh Surjewala
ದಿನಬಳಕೆ ವಸ್ತುಗಳಿಗೂ Z+ ಭದ್ರತೆ ಒದಗಿಸಬೇಕಾದ ಪರಿಸ್ಥಿತಿ ಬರಬಹುದು: ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಸುರ್ಜೇವಾಲಾ ಕಿಡಿ

ಸಚಿವರೊಂದಿಗೆ ನನಗೆ ಯಾವುದೇ ಸಮಸ್ಯೆ ಇಲ್ಲ. ನಾನು ಫೋನ್ ಮಾಡಿದರೂ ಸಾಕು ಸಚಿವರು ಸ್ಪಂದಿಸುತ್ತಾರೆ. ನನಗೇನು ಅವರ ಬಗ್ಗೆ ದೂರಿಲ್ಲ ಎಂದು ತಿಳಿಸಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎಂಬುದರ ಬಗ್ಗೆ ಸುರ್ಜೇವಾಲಾ ಹೇಳಿದ್ದಾರೆ. ಅದರ ಪ್ರಕಾರ ಪಕ್ಷ ಸಂಘಟನೆಯಾಗಬೇಕು. ಸ್ಥಳೀಯ ಚುನಾವಣೆ ಎಲ್ಲವೂ ಗೆಲ್ಲಬೇಕು. ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಬೇಕು. ಅದಕ್ಕೆ ಏನೆಲ್ಲಾ ಕಾರ್ಯತಂತ್ರ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು ಎಂದು ಹೇಳಿದರು.

ಕ್ಷೇತ್ರದ ಅನುದಾನ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಅನುದಾನ ಸಮಸ್ಯೆ ಬಗ್ಗೆ ಅಭಿಪ್ರಾಯ ಕೇಳಿದರು. ಸಣ್ಣಪುಟ್ಟ ಲೋಪದೋಷದ ಬಗ್ಗೆ ಸಲಹೆ ನೀಡಿದ್ದೇವೆ. ಇದರಿಂದ ಪಕ್ಷಕ್ಕೂ ಒಳ್ಳೆದು ಆಗುತ್ತದೆ. ಯಾರು ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಕಾರ್ಯಗಳ ಸ್ಥಿತಿಯನ್ನು ತಿಳಿದುಕೊಳ್ಳಲು ಸುರ್ಜೆವಾಲಾ ಪ್ರಯತ್ನಿಸಿದ್ದಾರೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರೂ ಆಗಿರುವ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಮಾಹಿತಿ ನೀಡಿದರು.

Randeep Singh Surjewala
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಶಾಸಕರು, ಸಂಸದರೊಂದಿಗೆ ಚರ್ಚಿಸಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ; Video

ನಾನು 2018 ರಿಂದ ಸಂಪುಟ ದರ್ಜೆಯ ಆಕಾಂಕ್ಷಿಯಾಗಿದ್ದೇನೆ. ಆದರೆ, ಸುರ್ಜೆವಾಲಾ ಅವರೊಂದಿಗೆ ನಾನು ಅದರ ಬಗ್ಗೆ ಚರ್ಚಿಸಿಲ್ಲ ಎಂದರು.

ಸುರ್ಜೆವಾಲಾ ಅವರ ಈ ಕಾರ್ಯವು ಶಾಸಕರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಂದು ವೇದಿಕೆಯನ್ನು ಒದಗಿಸಿತು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಹೇಳಿದರು.

ಅನುದಾನ ಬಿಡುಗಡೆ ವಿಚಾರವಷ್ಟೇ ಅಲ್ಲದೆ, ಹಲವು ಸಮಸ್ಯೆಗಳಿವೆ. ಸಂಪುಟದ ಸ್ಥಾನವನ್ನು ನಿರ್ಧರಿಸುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.

ಕಳೆದ ವಾರ ಸುರ್ಜೇವಾಲಾ ಅವರು ಸುಮಾರು 42 ಶಾಸಕರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದರು. ಈ ಬಾರಿ 60 ಶಾಸಕರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಏಕೆಂದರೆ ಅವರು ನನಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದರು" ಎಂದು ಅವರು ಹೇಳಿದರು. ಮಹರ್ಷಿ ವಾಲ್ಮೀಕಿ ಎಸ್‌ಟಿ ಕಾರ್ಪೊರೇಷನ್‌ನಲ್ಲಿ ನಡೆದ ಹಗರಣದ ನಂತರ ಸಂಪುಟದಿಂದ ತೆಗೆದುಹಾಕಲ್ಪಟ್ಟ ಮಾಜಿ ಸಚಿವ ಬಿ. ನಾಗೇಂದ್ರ, ತಮ್ಮ ಸಂಪುಟವನ್ನು ಮತ್ತೆ ಸೇರಿಸಿಕೊಳ್ಳುವಂತೆ ಮನವಿ ಮಾಡಿರಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com