ಅಧಿಕಾರ ಹಂಚಿಕೆ ಇಲ್ಲವೆಂದು ಸಿಎಂ ಸ್ಪಷ್ಟನೆ: ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಿ- ಸಚಿವ ಸತೀಶ್ ಜಾರಕಿಹೊಳಿ

ಅಧಿಕಾರ ಹಂಚಿಕೆ ಇಲ್ಲ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಬಲವಾದ ಸಂದೇಶ ರವಾನಿಸಿದ್ದಾರೆ. ಹೀಗಾಗಿ, ಇಂದಿನಿಂದ, ಅಂತಹ ಯಾವುದೇ ಬದಲಾವಣೆಯ ಬಗ್ಗೆ ಎಲ್ಲಾ ಚರ್ಚೆಗಳು ಕೊನೆಗೊಳ್ಳಬೇಕು.
Minister Satish Jarkiholi
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಅಧಿಕಾರ ಹಂಚಿಕೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ರಾಜ್ಯದ ಕಾಂಗ್ರೆಸ್‍ನಲ್ಲಿ ನಾಯಕತ್ವ, ಸಿಎಂ ಬದಲಾವಣೆ ವಿಚಾರಕ್ಕೆ ಇತಿಶ್ರೀ ಹಾಡಬೇಕೆಂದು ಸಚಿವ ಸತೀಶ್ ಜಾರಕಿಹೊಳಿಯವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಇಲ್ಲ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಬಲವಾದ ಸಂದೇಶ ರವಾನಿಸಿದ್ದಾರೆ. ಹೀಗಾಗಿ, ಇಂದಿನಿಂದ, ಅಂತಹ ಯಾವುದೇ ಬದಲಾವಣೆಯ ಬಗ್ಗೆ ಎಲ್ಲಾ ಚರ್ಚೆಗಳು ಕೊನೆಗೊಳ್ಳಬೇಕು ಎಂದು ಹೇಳಿದರು.

ಗುರುವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಯಾವುದೇ ಕಾಂಗ್ರೆಸ್ ಶಾಸಕರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ, ಪಕ್ಷದ ಯಾವುದೇ ಶಾಸಕರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಒತ್ತಾಯಿಸಿಲ್ಲ ಎಂದು ಇದೇ ವೇಳೆ ಹೇಳಿದ ಅವರು, 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರವೂ ಸಿಎಂ ಆಯ್ಕೆ ಪ್ರಕ್ರಿಯೆಯ ಸಮಯದಲ್ಲಿಯೂ ಮತದಾನ ನಡೆದಿತ್ತು. ಹೆಚ್ಚಿನ ಮತಗಳನ್ನು ಪಡೆದ ನಂತರ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಸ್ವಾಭಾವಿಕವಾಗಿ, ಸಿದ್ದರಾಮಯ್ಯ ಅವರಿಗೆ ಬಹುಪಾಲು ಶಾಸಕರ ಬೆಂಬಲವಿದೆ. ಅದಕ್ಕಾಗಿಯೇ ಅವರ ಇಂದಿನ ಹೇಳಿಕೆ ಸ್ಪಷ್ಟ ಮತ್ತು ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದರು.

ಕೆಲವು ಶಾಸಕರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದರೆ, ಅದು ಅಭಿವೃದ್ಧಿ ಅನುದಾನಗಳ ಬಗ್ಗೆ ಆಗಿರಬಹುದು... ಕೇವಲ ಶೇ.10ರಷ್ಟು ಮಂದಿ ನಾಯಕತ್ವದ ಬದಲಾವಣೆ ಬಗ್ಗೆ ಮಾತಾಡಿರಬಹುದು. ಆದರೆ, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸವುವುದು ಅಗತ್ಯವಾಗಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇರುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ಪುನರುಚ್ಚರಿಸಿದರು.

ಸಿದ್ದರಾಮಯ್ಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಚರ್ಚೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಅವರ ಅನುಭವ ಪಡೆಯಲು ಓಬಿಸಿ ಸಲಹಾ ಮಂಡಳಿಗೆ ಸದಸ್ಯರನ್ನಾಗಿ ಮಾಡಿದ್ದಾರೆ. ಸಿದ್ದರಾಮಯ್ಯಗೆ ರಾಷ್ಟ್ರೀಯ ಮಟ್ಟದ ಸಾಮರ್ಥ್ಯ ಇದೆ. ಆದರೆ, ಅದನ್ನು ಬಳಸಿಕೊಳ್ಳಲು ಅವಕಾಶ, ಸನ್ನಿವೇಶ ಬಂದಾಗ ಹೋಗಬಹುದು, ಈಗ ಅಂತಹ ಸಂದರ್ಭ ಬಂದಿಲ್ಲ ಎಂದಷ್ಟೇ ಹೇಳಿದರು.

Minister Satish Jarkiholi
ಐದು ವರ್ಷವೂ ನಾನೇ ಸಿಎಂ: ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿದ್ದರಾಮಯ್ಯ ಪುನರುಚ್ಚಾರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com