ಶಿವಕುಮಾರ್ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ; ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ: ಡಿ.ಕೆ ಸುರೇಶ್

ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು.
Dk Suresh and dk shivakumar
ಡಿ.ಕೆ ಸುರೇಶ್ ಮತ್ತು ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ ಸುರೇಶ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ನಿರ್ದೇಶನವಿದ್ದರೂ ಸಿಎಂ ಮೂರು ಬಾರಿ ನಾನೇ 5 ವರ್ಷ ಸಿಎಂ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದರು.

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು.

Dk Suresh and dk shivakumar
Watch | ಐದೂ ವರ್ಷ ನಾನೇ ಮುಖ್ಯಮಂತ್ರಿ- ಸಿಎಂ; ಆ ವಿಚಾರ ನಾನೇನು ಮಾತಾಡುವುದಿಲ್ಲ- ಡಿಸಿಎಂ

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, “ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು” ಎಂದರು. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್ ಅವರು ನಂಬುವ ಗುರುಗಳೇ ಈ ಅವಧಿಯಲ್ಲಿ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ಕೇಳಿದಾಗ, ನನಗೆ ಈ ವಿಚಾರ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ ಎಂದರು.

ಎರಡು ಬಾರಿ ಇಡಿ ವಿಚಾರಣೆ ಎದುರಿಸಿದ್ದೀರಿ ಅವರ ಉದ್ದೇಶವೇನು ಎಂದು ತಿಳಿಯಿತೇ ಎಂದು ಕೇಳಿದಾಗ, ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

Dk Suresh and dk shivakumar
Watch | "75 ವರ್ಷಕ್ಕೆ ನಿವೃತ್ತಿ ಹೊಂದಬೇಕು": ಮೋಹನ್ ಭಾಗವತ್ ಹೇಳಿಕೆ ಚರ್ಚೆಗೆ ಗ್ರಾಸ

ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕೇಳಿದಾಗ, “ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com