
ಬೆಂಗಳೂರು: ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಫುಲ್ ಸ್ಟಾಪ್ ಹಾಕಿದ್ದರು. ಈ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಹ ಹೇಳಿದ್ದರು. ಆ ಬಳಿಕೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದರು. ಆದರೆ ಇದೀಗ ಚಿತ್ರಣ ಬದಲಾಗಿದೆ. ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ನೀಡಿದ್ದು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಪುಣೆಯಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಿನ್ನೆಯಷ್ಟೆ ಡಿಕೆ ಶಿವಕುಮಾರ್ ದೆಹಲಿಯಿಂದ ವಾಪಸ್ಸಾಗಿದ್ದರು. ನಾಳೆ ದೆಹಲಿ ಪ್ರವಾಸದ ವೇಳೆ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.
Advertisement