5 ವರ್ಷ ನಾನೇ ಸಿಎಂ- ಸಿದ್ದರಾಮಯ್ಯ ಹೇಳಿಕೆ: ಕರ್ನಾಟಕ ರಾಜಕೀಯದ ದಿಕ್ಕು ಬದಲಾಗುತ್ತದೆಯೇ?

ನಾಯಕತ್ವ ಬದಲಾವಣೆಯ ಕುರಿತು ಚರ್ಚಿಸಲು ಏನೂ ಇಲ್ಲ ಎಂದು ಹೈಕಮಾಂಡ್‌ಗೆ ಸಹ ಸ್ಪಷ್ಟ ಸಂದೇಶ ರವಾನಿಸಿದಂತೆ ಇಲ್ಲಿ ಕಾಣುತ್ತದೆ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಕರ್ನಾಟಕ ರಾಜಕೀಯ ಚಿತ್ರಣ ಇತ್ತೀಚಿನ ವರ್ಷಗಳಲ್ಲಿ ಬದಲಾಗುತ್ತಿದೆ. ಈ ಬದಲಾವಣೆ ತಕ್ಷಣಕ್ಕೆ ಮೇಲ್ನೋಟಕ್ಕೆ ಗೊತ್ತಾಗದಿರಬಹುದು. ಮೊನ್ನೆಯಷ್ಟೇ ದೆಹಲಿಗೆ ಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡುತ್ತಾ, ಐದು ವರ್ಷಗಳ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಪುನರುಚ್ಛರಿಸಿದ್ದರು.

ಅಂತಹ ಪ್ರತಿಪಾದನೆಯ ವಿಧಾನ, ಸಮಯ ಹಾಗೂ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ತಾನೇ ಮುನ್ನಡೆಸುತ್ತೇನೆ ಎಂದು ಹೇಳಿರುವುದು - ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ರಾಜಕೀಯ ಸಮೀಕರಣಗಳನ್ನು ಗಮನಾರ್ಹವಾಗಿ ಬದಲಾಯಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಹೇಳಿಕೆಯನ್ನು ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ತೀವ್ರವಾಗಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ಕುರಿತಾದ ಊಹಾಪೋಹಗಳನ್ನು ಕೊನೆಗೊಳಿಸಲು ಸಿದ್ದರಾಮಯ್ಯ ಪ್ರಯತ್ನಿಸಿರಬಹುದು, ನಾಯಕತ್ವ ಬದಲಾವಣೆ ವಿವಾದ ಭುಗಿಲೆದ್ದರೆ ಅದು ಆಡಳಿತದ ಸಂಪೂರ್ಣ ನಿಯಂತ್ರಣದಲ್ಲಿರುವ ನಾಯಕನಾಗಿ ಅವರ ಇಮೇಜ್‌ಗೆ ಹಾನಿ ಮಾಡುವ ಮತ್ತು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರುವ ಬೆದರಿಕೆ ಹಾಕುತ್ತದೆ, ಅದಕ್ಕೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಖಡಕ್ ಸಂದೇಶ ನೀಡಲು ಸಿದ್ದರಾಮಯ್ಯನವರು ಈ ಹೇಳಿಕೆ ನೀಡಿರಬಹುದು. ಆದರೆ, ಅದೇ ಸಮಯದಲ್ಲಿ, ನಾಯಕತ್ವ ಬದಲಾವಣೆಯ ಕುರಿತು ಚರ್ಚಿಸಲು ಏನೂ ಇಲ್ಲ ಎಂದು ಹೈಕಮಾಂಡ್‌ಗೆ ಸಹ ಸ್ಪಷ್ಟ ಸಂದೇಶ ರವಾನಿಸಿದಂತೆ ಇಲ್ಲಿ ಕಾಣುತ್ತದೆ.

Siddaramaiah
ಐದು ವರ್ಷವೂ ನಾನೇ ಸಿಎಂ: ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿದ್ದರಾಮಯ್ಯ ಪುನರುಚ್ಚಾರ

ಈ ವರ್ಷದ ನವೆಂಬರ್‌ನಲ್ಲಿ ಸರ್ಕಾರವು ಎರಡೂವರೆ ವರ್ಷಗಳನ್ನು ಅಂದರೆ 5 ವರ್ಷ ಅಧಿಕಾರಾವಧಿಯ ಅರ್ಧಭಾಗವನ್ನು ತಲುಪುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಕೇಂದ್ರ ನಾಯಕರನ್ನು ನಾಯಕತ್ವ ಬದಲಾವಣೆ ಕುರಿತು ಚರ್ಚಿಸದಂತೆ ಅವರ ಮಾತುಗಳು ಮತ್ತು ನಡವಳಿಕೆ ಮೂಲಕ ಸಂದೇಶ ನೀಡಿರಬಹುದು. ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಮಾತನಾಡದಿದ್ದರೂ, ಸಿಎಂ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.

ಡಿಸಿಎಂ ಬೆಂಬಲಿಗರು ಹಲವು ಸಂದರ್ಭಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕೇಂದ್ರ ನಾಯಕತ್ವವು ಒಪ್ಪಂದ ಆಗಿರುವ ಬಗ್ಗೆ ಇದುವರೆಗೆ ಒಪ್ಪಿಕೊಂಡೂ ಇಲ್ಲ, ನಿರಾಕರಿಸಿಯೂ ಇಲ್ಲ. ಆ ಕಾರ್ಯತಂತ್ರದ ಮೌನವು ಊಹಾಪೋಹಗಳಿಗೆ ಪುಷ್ಟಿ ನೀಡಿ ಕಾಂಗ್ರೆಸ್ ನಾಯಕರು, ಶಾಸಕರು ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತನಾಡಿ, ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ, ಅದು ಮುಂದಿನ ಕ್ರಮ ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದೆ ಎಂದು ಹೇಳಿದ್ದು ಪಕ್ಷದೊಳಗೆ ಏನು ಬೇಕಾದರೂ ಮುಂದಿನ ದಿನಗಳಲ್ಲಿ ಆಗಬಹುದು ಎಂದು ಹೇಳಲಾಗುತ್ತಿದೆ.

Siddaramaiah
ಬಹುಮತವಿದ್ದರೂ ನಾಯಕತ್ವದ್ದೇ ಗೊಂದಲ (ನೇರ ನೋಟ)

ಆದರೆ, ಅವರಿಗೆ ನಿಜವಾಗಿಯೂ ಯಾವುದೇ ಕ್ರಮ ತೆಗೆದುಕೊಳ್ಳುವ ಅಧಿಕಾರವಿದೆಯೆ, ಕಾಂಗ್ರೆಸ್ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿರುವಂತೆ ತೋರುತ್ತಿದೆ. ಈ ವಿಷಯದಲ್ಲಿ ತಮ್ಮ ಪಕ್ಷದ ಮಿತಿಗಳನ್ನು ತಿಳಿಯದೆ ಸಿದ್ದರಾಮಯ್ಯ ಆ ಹೇಳಿಕೆಗಳನ್ನು ನೀಡುತ್ತಿರಲಿಲ್ಲ.

ಸಿದ್ದರಾಮಯ್ಯನವರಿಗೆ ಇರುವ ಪ್ಲಸ್ ಪಾಯಿಂಟ್ ಗಳು

ಪಕ್ಷದ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿರೋಧಿಸಲು ಸಾಧ್ಯವಿಲ್ಲ, ಏಕೆಂದರೆ ಅವರು ಬಹುಪಾಲು ಶಾಸಕರ ಬೆಂಬಲವನ್ನು ಹೊಂದಿದ್ದಾರೆ. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಪ್ರತಿಪಾದಕರಾಗಿ ನಿರಂತರವಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಎಷ್ಟರಮಟ್ಟಿಗೆ ಎಂದರೆ, ಇತರ ರಾಜ್ಯಗಳಲ್ಲಿ ಒಬಿಸಿ ಬೆಂಬಲ ನೆಲೆಯನ್ನು ಸಜ್ಜುಗೊಳಿಸಲು ಪಕ್ಷವು ಅವರನ್ನು ಬಳಸಿಕೊಳ್ಳುತ್ತಿದೆ. ಬಹುಶಃ, ಅವರು ಈಗ ಕಾಂಗ್ರೆಸ್‌ನಲ್ಲಿರುವ ಕೆಲವೇ ಕೆಲವು ಜನಸಾಮಾನ್ಯ ನಾಯಕರಲ್ಲಿ ಒಬ್ಬರಾಗಿ ಉಳಿದಿದ್ದಾರೆ. ನಿರೀಕ್ಷಿತವಾಗಿ, ಅದು ಅಧಿಕಾರದಲ್ಲುಳಿಯಲು ಅವರಿಗೆ ಅನುಕೂಲವಾಗುತ್ತದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಡಿ ಕೆ ಶಿವಕುಮಾರ್ ಅವರಿಗೆ ಖಂಡಿತಾ ಸಲ್ಲುತ್ತದೆ. ಅವರು ಸಿಎಂ ಆಗುವ ಮಹತ್ವಾಕಾಂಕ್ಷೆಯನ್ನು ಬೆಳೆಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪಕ್ಷವನ್ನು ಅಧಿಕಾರಕ್ಕೆ ತರಲು ಒಟ್ಟಾಗಿ ಕೆಲಸ ಮಾಡಿದರು. ಹೀಗಾಗಿ ಇಬ್ಬರೂ ಸಿಎಂ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಒಂದು ವರ್ಗ ಹೇಳುತ್ತಿದೆ.

ಡಿ ಕೆ ಶಿವಕುಮಾರ್ ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ದೆಹಲಿಯಲ್ಲಿ ಪಕ್ಷದ ನಾಯಕರನ್ನು ಅವಲಂಬಿಸಿದ್ದಾರೆ. ಒಕ್ಕಲಿಗ ನಾಯಕರಾದ ಶಿವಕುಮಾರ್, ಪಕ್ಷ ಮತ್ತು ಗಾಂಧಿ ಕುಟುಂಬದ ಬಗೆಗಿನ ನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ.

Siddaramaiah
ಸಿದ್ದರಾಮಯ್ಯಗೆ ಹಿಂದಿ ಬರಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ; ಸುರ್ಜೇವಾಲ ಶಾಸಕರ ಅಭಿಪ್ರಾಯ ಕೇಳಿದ್ದು ತರವಲ್ಲ: ರಾಜಣ್ಣ

ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದಿನ ರಾಜಕೀಯ ಬೆಳವಣಿಗೆಗಳನ್ನು ಹೇಗೆ ನಿರ್ವಹಿಸುತ್ತಾರೆ ಮತ್ತು ಸಿಎಂ ಹೇಳಿಕೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡುವುದು ಆಸಕ್ತಿದಾಯಕವಾಗಿರುತ್ತದೆ. ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಯಲ್ಲಿ ಆ ಹೇಳಿಕೆಗಳನ್ನು ನೀಡಿದಾಗ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿದ್ದರು ಸಿದ್ದರಾಮಯ್ಯನವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದರು, ಆದರೆ ಸಾಧ್ಯವಾಗಲಿಲ್ಲ.

ಪಕ್ಷ ಮತ್ತು ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ನಾಯಕರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ನಿರೀಕ್ಷಿಸುತ್ತಾರೆ. ಹೈಕಮಾಂಡ್ ಮೌನವು ರಾಜ್ಯ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆಗೆ ಕಾರಣವಾಗಬಹುದು.

ಇತ್ತೀಚಿನ ಬೆಳವಣಿಗೆಗಳು ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳುವುದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜವಾಬ್ದಾರಿಯಾಗಿದೆ. ಆಡಳಿತಕ್ಕಿಂತ ರಾಜಕೀಯಕ್ಕೆ ಆದ್ಯತೆ ನೀಡಬಾರದು.

Siddaramaiah
ಕಾಂಗ್ರೆಸ್ ಹೈಕಮಾಂಡ್ ಬುಲಾವ್: ನಾಳೆ ಮತ್ತೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್; ಕುತೂಹಲ ನಡೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com