ಕ್ಲಾರಿಟಿ ಕೊಡದ ಹೈಕಮಾಂಡ್: CM ಬದಲಾವಣೆಗೆ ಒಲವು ತೋರದ ರಾಹುಲ್; ಡಿಕೆಶಿಗೆ ಪ್ರಿಯಾಂಕಾ ಅಭಯ? ಶಾಸಕರ ಬೆಂಬಲವಿರುವವರೆಗೆ ಸಿದ್ದರಾಮಯ್ಯ ಸೇಫ್!

ಅಧಿಕಾರದ ಸುಗಮ ಪರಿವರ್ತನೆಗಾಗಿ ಕಾಯಲು ಡಿಕೆ ಸಹೋದರರು ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡ ಕೆಲವು ಶಾಸಕರು ತಮ್ಮ ನಿಷ್ಠೆ ಬದಲಾಯಿಸಿ ಡಿಕೆ ಕ್ಯಾಂಪ್ ಗೆ ಹಾರುವ ಸಾಧ್ಯತೆಯಿದೆ.
DK Shivakumar- CM Siddaramaiah
ಡಿಕೆ ಶಿವಕುಮಾರ್- ಸಿಎಂ ಸಿದ್ದರಾಮಯ್ಯonline desk
Updated on

ಬೆಂಗಳೂರು: ಸರ್ಕಾರದಲ್ಲಿ ಸಿಎಂ ಬದಲಾವಣೆಯ ಕುರಿತಾದ ಚರ್ಚೆಯ ತೀವ್ರತೆ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ.

ಸಿದ್ಗರಾಮಯ್ಯ ಮುಖ್ಯಮಂತ್ರಿಯಾಗಿ ನವೆಂಬರ್ ನಲ್ಲಿ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಲಿದ್ದಾರೆ. ಅಲ್ಲಿಯವರೆಗೂ ಸಿಎಂ ಬದಲಾವಣೆ ವಿಷಯ ತಣ್ಣಗಿರುವ ಸಾಧ್ಯತೆಯಿದೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವೂ ಕೂಡ ಪ್ರಮುಖ ಪಾತ್ರವನ್ನು ವಹಿಸಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಹಾರದಲ್ಲಿ ಭಾರಿ ಪ್ರಚಾರ ನಡೆಸುತ್ತಿದ್ದಾರೆ ಮತ್ತು ಚುನಾವಣಾ ಫಲಿತಾಂಶವು ಕರ್ನಾಟಕ ರಾಜಕೀಯದ ಮೇಲೆ ಪರಿಣಾಮ ಬೀರಬಹುದು ಎಂದು ಮೂಲಗಳು ತಿಳಿಸಿವೆ. ಪಕ್ಷದ ಹಿಂದುಳಿದ ವರ್ಗದ ಮುಖವಾಗಿರುವ ಸಿದ್ದರಾಮಯ್ಯ ಅವರನ್ನು ತೆಗೆದುಹಾಕಲು ರಾಹುಲ್ ಒಲವು ತೋರುತ್ತಿಲ್ಲ ಎಂದು ಹೇಳಲಾಗುತ್ತಿದೆ. ನಾಯಕತ್ವ ಬದಲಾವಣೆಗೆ ಸೋನಿಯಾ ಗಾಂಧಿ ಮನವೊಲಿಸಲು ಶಿವಕುಮಾರ್ ಅವರು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಶಿರಡಿ ಸಾಯಿಬಾಬಾಗೆ ಪ್ರಾರ್ಥನೆ ಸಲ್ಲಿಸಿದ ನಂತರ ಶಿವಕುಮಾರ್ ದೆಹಲಿಗೆ ತೆರಳಿದಾಗ, ತೀವ್ರ ಗದ್ದಲ ಉಂಟಾಗಿತ್ತು, ಅದಾದ ನಂತರ. ಅವರು X ನಲ್ಲಿ ಸ್ಪಷ್ಟೀಕರಣ ನೀಡಿ ಪೋಸ್ಟ್ ಮಾಡಿದ್ದಾರೆ. ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ. ಆದರೆ ಕೆಲವು ಟಿವಿ ಚಾನೆಲ್ ಮತ್ತಿತರ ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಗೆ ತೆರಳಿದ್ದೇನೆ ಎಂದು ವರದಿ ಆಗಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ವಿಚಾರ. ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸಲ್ಲದು ಎಂದು ಬರೆದುಕೊಂಡಿದ್ದಾರೆ.

DK Shivakumar- CM Siddaramaiah
ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದನ್ನು ಒಪ್ಪಲ್ಲ: ಡಿ.ಕೆ ಶಿವಕುಮಾರ್

ಆದರೆ ED ಯೊಂದಿಗಿನ ತಮ್ಮ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳಿಗೆ ಸಹಿ ಹಾಕಲು ದೆಹಲಿಗೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಕುಮಾರ್ ಅವರು ಗಾಂಧಿ ಕುಟುಂಬಕ್ಕೆ ಹತ್ತಿರವಿರುವ ತಮ್ಮ ಬಗ್ಗೆ ಸಹಾನುಭೂತಿ ಹೊಂದಿರುವವರನ್ನು ಭೇಟಿಯಾಗುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಅವರು ಹೇಳಿದರು.

ಶಿವಕುಮಾರ್ ಅವರ ಕಿರಿಯ ಸಹೋದರ ಮತ್ತು ಬಮುಲ್ ಅಧ್ಯಕ್ಷ ಡಿಕೆ ಸುರೇಶ್ ಅವರು ಡಿಸಿಎಂ ಮುಖ್ಯಮಂತ್ರಿಯಾಗಲು ಯಾವುದೇ ಆತುರವಿಲ್ಲ ಎಂದು ಹೇಳಿದ್ದಾರೆ. ಶಿವಕುಮಾರ್ ಅವರನ್ನು ಬೆಂಬಲಿಸುವ ಶಾಸಕರ ಬಲವನ್ನು ತೋರಿಸಲು ಇನ್ನೂ ಸಮಯ ಬಂದಿಲ್ಲ ಎಂದು ಅವರು ಹೇಳಿದರು.

ಅಧಿಕಾರದ ಸುಗಮ ಪರಿವರ್ತನೆಗಾಗಿ ಕಾಯಲು ಡಿಕೆ ಸಹೋದರರು ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡ ಕೆಲವು ಶಾಸಕರು ತಮ್ಮ ನಿಷ್ಠೆ ಬದಲಾಯಿಸಿ ಡಿಕೆ ಕ್ಯಾಂಪ್ ಗೆ ಹಾರುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಮತ್ತು ಅವರ ತಂಡದವರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ, ವಿಶೇಷವಾಗಿ ಅಧಿಕಾರಿಗಳ ಪೋಸ್ಟಿಂಗ್ ವಿಷಯದಲ್ಲಿ ನಡೆಸುತ್ತಿರುವ ಹಸ್ತಕ್ಷೇಪದಿಂದ ಕೆಲವು ಶಾಸಕರು ಈಗಾಗಲೇ ಅತೃಪ್ತರಾಗಿದ್ದಾರೆ. ಹೀಗಾಗಿ ಅತೃಪ್ತ ಶಾಸಕರ ಸಂಖ್ಯೆ ಹೆಚ್ಚಾಗಬಹುದು. ಡಿಕೆ ಸಹೋದರರು ಅವರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿದೆ" ಎಂದು ಶಾಸಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಇತ್ತೀಚಿನ ಒಂದು ಕುತೂಹಲಕಾರಿ ಸಂಗತಿಯೆಂದರೆ, ಜಲಸಂಪನ್ಮೂಲ ಇಲಾಖೆಯ ಎಂಜಿನಿಯರ್ ಅವರನ್ನು ಅವರ ಒಪ್ಪಿಗೆಯಿಲ್ಲದೆ ವರ್ಗಾಯಿಸಲಾಗಿದೆ ಎಂದು ಶಿವಕುಮಾರ್ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದರು.

ಕಾಂಗ್ರೆಸ್‌ನೊಳಗಿನ ನಾಯಕತ್ವ ಬದಲಾವಣೆಯ ಕುರಿತಾದ ಬೆಳವಣಿಗೆಗಳು ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಪುನರ್ರಚನೆಯನ್ನು ಸ್ಥಗಿತಗೊಳಿಸಿವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಅವರು ವೀಕ್ಷಕರಿಗೆ ಪ್ರಕ್ರಿಯೆಯೊಂದಿಗೆ ಮುಂದುವರಿಯದಂತೆ ಸುತ್ತೋಲೆ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com