ನಿಮ್ಮ ವಿರುದ್ಧದ ದೂರುಗಳಿಗೇನು ಉತ್ತರ ಕೊಡ್ತೀರೀ? ಗುಂಡೂರಾವ್, ಜಾರಕಿಹೊಳಿ ಸೇರಿ ಹಲವು ಸಚಿವರಿಗೆ ಸುರ್ಜೇವಾಲಾ ಪ್ರಶ್ನೆ!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಹಲವು ರಾಜ್ಯ ಸಚಿವರೊಂದಿಗೆ ಮುಖಾಮುಖಿ ಸಭೆಗಳನ್ನು ನಡೆಸಿದರು.
Randeep Singh Surjewala
ರಣದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಹಲವು ರಾಜ್ಯ ಸಚಿವರೊಂದಿಗೆ ಮುಖಾಮುಖಿ ಸಭೆಗಳನ್ನು ನಡೆಸಿದರು. ಈ ವೇಳೆ ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು, ಅವರ ಕಾರ್ಯಕ್ಷಮತೆಯನ್ನು ನಿರ್ಣಯಿಸಲು ಮತ್ತು ಪಕ್ಷದ ಶಾಸಕರು ತಮ್ಮ ವಿರುದ್ಧ ನೀಡಿರುವ ದೂರುಗಳನ್ನು ಪರಿಹರಿಸಲು ಯತ್ನಿಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ತಮ್ಮ ಇಲಾಖೆಯಡಿಯಲ್ಲಿ ಮಾಡಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ. ಉದಾಹರಣೆಗೆ ಪ್ರತಿ ಕ್ಷೇತ್ರದಲ್ಲಿ ಸಾರ್ವಜನಿಕ ಕಾರ್ಯಗಳಿಗೆ ಖರ್ಚಾಗಿರುವ ಹಣದ ಮಾಹಿತಿ. ಸುಮಾರು 12 ಶಾಸಕರು ತಮ್ಮ ಕ್ಷೇತ್ರದಲ್ಲಿ ಮಾಡಬೇಕಾದ ಕೆಲಸಗಳ ಪಟ್ಟಿಯನ್ನು ನೀಡಿದ್ದಾರೆ. ಈ ಪೈಕಿ ಎರಡು ಅಥವಾ ಮೂರು ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಸಭೆ ಕರೆದು ಅದನ್ನು ಪೂರ್ಣಗೊಳಿಸುತ್ತೇನೆ ಎಂದು ಸುರ್ಜೇವಾಲಾಗೆ ತಿಳಿಸಿರುವುದಾಗಿ ಜಾರಕಿಹೊಳಿ ಹೇಳಿದರು.

ಸಭೆಯ ನಂತರ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸುರ್ಜೇವಾಲಾ ತಮ್ಮೊಂದಿಗೆ ಕೆಲವು ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ. ಅವರಿಗೆ ತಿಳಿದ ವಿಷಯಗಳ ಬಗ್ಗೆ ನಾವು ಚರ್ಚಿಸಿದ್ದೇವೆ ಅಷ್ಟೇ. ಮಾತನಾಡಲು ಅಷ್ಟೊಂದು ಮಹತ್ವದ್ದೇನೂ ಇಲ್ಲ. ಅವರ ಅವಲೋಕನಗಳ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ರಾವ್ ಹೇಳಿದರು.

ಕರ್ನಾಟಕ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿ ಶಾಸಕರ ಬೇಡಿಕೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. ನಮ್ಮ ಪ್ರಧಾನ ಕಾರ್ಯದರ್ಶಿ ನನ್ನನ್ನು ಕರೆಸಿದ್ದರು. ಸಭೆಯಲ್ಲಿ ಅವರು ಶಾಸಕರ ಬೇಡಿಕೆಗಳನ್ನು ನನ್ನ ಮುಂದೆ ತಂದರು. ಹೆಚ್ಚಿನ ಶಾಸಕರು ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ನೀಡಿದ್ದಾರೆ ಎಂದು ನನಗೆ ತಿಳಿಸಿದರು ಎಂದು ಸಚಿವರು ಮಾಧ್ಯಮಗಳಿಗೆ ತಿಳಿಸಿದರು.

Randeep Singh Surjewala
ರಾಜ್ಯದಲ್ಲಿ ಸುರ್ಜೇವಾಲಾ ಸರಣಿ ಸಭೆ: ಶಾಸಕರ ಬಳಿಕ ಸಚಿವರೊಂದಿಗೆ ಒನ್-ಟು-ಒನ್ ಮೀಟಿಂಗ್; ನವೆಂಬರ್‌ನಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ..?

ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದಾಗಿ ಬಲವಾದ ಹೇಳಿಕೆ ನೀಡಿದ್ದರೂ, ಈ ವರ್ಷದ ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳ ನಡುವೆ ಪಕ್ಷದೊಳಗಿನ ಆಂತರಿಕ ಗೊಂದಲ ಮುಂದುವರೆದಿದೆ. ಈ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಹುದ್ದೆಯನ್ನು ಅಲಂಕರಿಸಲು ದಾರಿ ಮಾಡಿಕೊಟ್ಟಿದೆ.

ಕೆಲವು ದಿನಗಳ ಹಿಂದೆ ಸುರ್ಜೆವಾಲಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ, ಅನೇಕ ಶಾಸಕರು ಕೆಲವು ಸಚಿವರು ತಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಅತೃಪ್ತಿ ವ್ಯಕ್ತಪಡಿಸಿದ್ದರು. ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂಬುದು ಅವರ ಅಸಮಾಧಾನವಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸುರ್ಜೆವಾಲಾ ಅವರು ಸಚಿವರೊಂದಿಗೆ ಸಭೆ ನಡೆಸಿ ಕಾರ್ಯಕ್ಷಮತೆಯನ್ನು ನಿರ್ಣಯಿಸಲು ಮತ್ತು ಪಕ್ಷದ ಹೈಕಮಾಂಡ್‌ಗೆ ಅದನ್ನು ತಿಳಿಸಲು ಸಭೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com