ಬೆಂಗಳೂರು ಸುರಂಗ ರಸ್ತೆ ಯೋಜನೆ: ಬಹಿರಂಗ ಚರ್ಚೆಗೆ ಬನ್ನಿ; ಡಿ.ಕೆ ಶಿವಕುಮಾರ್'ಗೆ ತೇಜಸ್ವಿ ಸೂರ್ಯ ಸವಾಲು

ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು.
DCM DK Shivakumar and MP Tejaswi surya
ಮೆಟ್ರೋ ರೈಲಿನಲ್ಲಿ ಸಂಚರಿಸಿದ ಡಿಸಿಎಂ ಡಿಕೆ ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ
Updated on

ಬೆಂಗಳೂರು: ಬೆಂಗಳೂರು ಸುರಂಗ ರಸ್ತೆ ಯೋಜನೆ ಸಂಬಂಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ.

ಬೆಂಗಳೂರು ಸುರಂಗ ರಸ್ತೆ ಯೋಜನೆ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ತೇಜಸ್ವಿ ಸೂರ್ಯ ಅವರು, ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ ಅವರು, ಯೋಜನೆ ಸಂಬಂಧ ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವರು, ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು (ಕಾಂಗ್ರೆಸ್ ಸರ್ಕಾರ) ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

DCM DK Shivakumar and MP Tejaswi surya
ಬೆಂಗಳೂರು ಸುರಂಗ ರಸ್ತೆ ಯೋಜನೆ 'ಅವೈಜ್ಞಾನಿಕ'; ಬ್ರಹ್ಮಾಂಡ ಭ್ರಷ್ಟಾಚಾರ: ತೇಜಸ್ವಿ ಸೂರ್ಯ ಆರೋಪ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com