ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿ: ಕಾಂಗ್ರೆಸ್'ಗೆ ವಿಜಯೇಂದ್ರ ಸವಾಲು

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಕುಟುಂಬ ನೋಡಿಕೊಂಡು ಬಂದಿದೆ. ಇಂತಹ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಲು ಸಾಧ್ಯವೇ?
Vijayendra, CM Siddaramaiah Casual images
ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಕುಟುಂಬ ನೋಡಿಕೊಂಡು ಬಂದಿದೆ. ಇಂತಹ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಲು ಸಾಧ್ಯವೇ? ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದಾಗಿ ಎಐಸಿಸಿಯ ಒಬಿಸಿ ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎಂದು ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಒಬಿಸಿ ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ ಮೀಸಲಾತಿಯ ಪರ ಬಿಜೆಪಿ ಇರಲಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ.

ಸಿದ್ದರಾಮಯ್ಯನವರು ತಮ್ಮನ್ನು ತಾವು ಅಹಿಂದ ಚಾಂಪಿಯನ್ ಎಂದು ಕರೆದುಕೊಳ್ಳುತ್ತಾರೆ, ಇತ್ತೀಚೆಗೆ ಕಾಂತರಾಜು ವರದಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಬೊಗಳೆ ಹೊಡೆಯತ್ತಿದ್ದವರು ದೆಹಲಿಯಿಂದ ದೂರವಾಣಿ ಕರೆ ಬಂದ ನಂತರ, ರಾಹುಲ್ ಗಾಂಧಿಯವರು ಆದೇಶ ಮಾಡಿದ್ದಾರೆಂದು 165 ಕೋಟಿ ಖರ್ಚು ಮಾಡಿ ಸಿದ್ಧಪಡಿಸಿದ್ದ ಕಾಂತರಾಜು ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದೀರಲ್ಲವೇ? ಆಗ ನಿಮ್ಮ ಹಿಂದುಳಿದವರ ಕಾಳಜಿ ಎಲ್ಲಿ ಹೋಗಿತ್ತು?

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಗಾಂಧಿ ಕುಟುಂಬ ನೋಡಿಕೊಂಡು ಬಂದಿದೆ. ಇಂಥ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಸಾಧ್ಯವೇ ಎಂದು ದೇಶದ ಹಾಗೂ ರಾಜ್ಯದ ಜನರು ಕೇಳುತ್ತಿದ್ದಾರೆ. ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣ ಎಐಸಿಸಿಯ ಒಬಿಸಿ ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದು ಟೀಕಿಸಿದರು.

Vijayendra, CM Siddaramaiah Casual images
ತೆಲಂಗಾಣ ಮಾದರಿ ಜಾತಿ ಜನಗಣತಿ ನಡೆಸಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ OBC ಮಂಡಳಿ ಒತ್ತಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com