ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಅಣ್ಣಾಮಲೈ ನೇಮಕ ಸಾಧ್ಯತೆ

ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಕ್ಕೆ ಅನುಕೂಲವಾಗುವಂತೆ ಅವರು (ಅಣ್ಣಾಮಲೈ) ಈ ವರ್ಷದ ಏಪ್ರಿಲ್‌ನಲ್ಲಿ ತಮಿಳುನಾಡು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಾಗ, ಅವರಿಗೆ ಪಕ್ಷದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಹುದ್ದೆಯ ಎಂದು ಭರವಸೆ ನೀಡಲಾಯಿತು.
Annamalai
ಅಣ್ಣಾಮಲೈ
Updated on

ಬೆಂಗಳೂರು: ತಮಿಳುನಾಡು ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಶೀಘ್ರದಲ್ಲೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡುವ ಸಾಧ್ಯತೆಯಿದೆ.

ಮುಂದಿನ ತಿಂಗಳು ಪಕ್ಷದ ಅಧ್ಯಕ್ಷರ ಆಯ್ಕೆಯ ನಂತರ ಈ ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ಟಿಎನ್‌ಐಇಗೆ ತಿಳಿಸಿವೆ. ಆದರೆ ಈ ಸಂಬಂಧ ಪ್ರತಿಕ್ರಿಯಿಸಿಲು ಮಾಜಿ ಪೊಲೀಸ್ ಅಧಿಕಾರಿ ಅಣ್ಣಾ ಮಲೈ ನಿರಾಕರಿಸಿದರು.

ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಕ್ಕೆ ಅನುಕೂಲವಾಗುವಂತೆ ಅವರು (ಅಣ್ಣಾಮಲೈ) ಈ ವರ್ಷದ ಏಪ್ರಿಲ್‌ನಲ್ಲಿ ತಮಿಳುನಾಡು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಾಗ, ಅವರಿಗೆ ಪಕ್ಷದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಹುದ್ದೆಯ ಎಂದು ಭರವಸೆ ನೀಡಲಾಯಿತು. ಅವರ ನಂತರ ಶಾಸಕ ನೈನಾರ್ ನಾಗೇಂದ್ರನ್ ಅವರು ತಮಿಳುನಾಡಿನ ಬಿಜೆಪಿ ಮುಖ್ಯಸ್ಥರಾದರು.

2024 ರ ಸಂಸತ್ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿದ್ದರೂ, ಡಿಎಂಕೆ ಅಥವಾ ಎಐಎಡಿಎಂಕೆ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳದೆ ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಮತ ಹಂಚಿಕೆಯನ್ನು 3% ರಿಂದ 11% ಕ್ಕೆ ಹೆಚ್ಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಅಮಿತ್ ಶಾ ಹಲವಾರು ಸಂದರ್ಭಗಳಲ್ಲಿ, ಅಣ್ಣಾಮಲೈ ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿಯೂ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದರು.

Annamalai
ರಾಜೀನಾಮೆ ನೀಡಿಲ್ಲ, ಪಕ್ಷ ಕೊಟ್ಟ ಹೊಣೆ ನಿಭಾಯಿಸುವೆ: ಅಣ್ಣಾಮಲೈ ಸ್ಪಷ್ಟನೆ

ಅಣ್ಣಾಮಲೈ ರಾಜ್ಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಅವರನ್ನು ಪಕ್ಷದ ರಾಷ್ಟ್ರೀಯ ಮಂಡಳಿಯ ಸದಸ್ಯರನ್ನಾಗಿ ನೇಮಿಸಲಾಯಿತು. ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ನಾರಾಯಣನ್ ತಿರುಪತಿ ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ನಂತರ ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಮತ್ತು ಪಕ್ಷವು "ಅಣ್ಣಾಮಲೈ ಅದಕ್ಕೆ ಅರ್ಹರು ಎಂದು ನಂಬುತ್ತದೆ" ಎಂದು ಹೇಳಿದಾಗ ಇದರ ಬಗ್ಗೆ ಸೂಚನೆ ನೀಡಿದರು.

2026 ರ ವಿಧಾನಸಭಾ ಚುನಾವಣೆಯ ನಂತರ ಎಐಎಡಿಎಂಕೆ ಸಂಪೂರ್ಣ ಬಹುಮತಗಳಿಸುತ್ತದೆ ಮತ್ತು ಸರ್ಕಾರ ರಚಿಸುತ್ತದೆ ಎಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದರು. ಅವರ ವಿರುದ್ಧ ಇತ್ತೀಚೆಗೆ ನಡೆದ ವಾಗ್ದಾಳಿ ನಡೆಸಿದ್ದು ಬಿಟ್ಟರೆ ಅಣ್ಣಾಮಲೈ ವಿರೋಧ ಪಕ್ಷಗಳ ವಿರುದ್ಧ ತಮ್ಮ ಪ್ರಬಲ ಅಸ್ತ್ರ ಪ್ರಯೋಗಿಸಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

"ಅಣ್ಣಾಮಲೈ ಸಾಕಷ್ಟು ಮೌನವಾಗಿದ್ದಾರೆ ಮತ್ತು ಆಗಸ್ಟ್‌ನಿಂದ ಮಾತನಾಡುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಅವರು ತಮ್ಮನ್ನು ಬಿಜೆಪಿ ಕಾರ್ಯಕರ್ತರಂತೆ ಬಿಂಬಿಸಿಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ತಮ್ಮ ಭದ್ರಕೋಟೆಯಾದ ಪಶ್ಚಿಮ ತಮಿಳುನಾಡಿನಲ್ಲಿ ಸಭೆಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಸಣ್ಣ ಸಭೆಯನ್ನು ಸಹ ಅವರು ತಪ್ಪಿಸಿಕೊಳ್ಳುವುದಿಲ್ಲಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com