ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿ.ಕೆ ಶಿವಕುಮಾರ್

"ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು".
DCM DK Shivakumar
ಡಿಸಿಎಂ ಡಿಕೆ ಶಿವಕುಮಾರ್online desk
Updated on

ಬೆಂಗಳೂರು: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

"ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು " ಎಂದು ಡಿಕೆ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೈಸೂರಿನಲ್ಲಿ ಶನಿವಾರ ನಡೆದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸದೆ ಇರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಇದು ಇಬ್ಬರ ನಡುವೆ ಬಿರುಕು ಇದೆ ಎಂಬುದನ್ನು ಮತ್ತೊಮ್ಮೆ ಪುಷ್ಟೀಕರಿಸಿದೆ ಎನ್ನಲಾಗುತ್ತಿದೆ.

DCM DK Shivakumar
ಬಿಜೆಪಿಯವರು ಶಾಶ್ವತವಾಗಿ ಭ್ರಮೆಯಲ್ಲಿರುತ್ತಾರೆ; ಭಿನ್ನಾಭಿಪ್ರಾಯದ ನಡುವೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ

ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ, ಸಂಪುಟ ಪುನಾರಚನೆ ಹಾಗೂ ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನ ವಿಚಾರವಾಗಿ ಗೊಂದಲ ತೀವ್ರಗೊಂಡಿದೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜುಲೈ 25 ರಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com