ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ: MLC, ನಿಗಮ-ಮಂಡಳಿ ನೇಮಕ ಪೂರ್ಣಕ್ಕೆ CM-DCM ಕರಸತ್ತು..!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಈಗಾಗಲೇ ಹಲವು ಬಾರಿ ನವದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ.
Siddaramaaiah And Dk Shivakumar
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಆಗಸ್ಟ್ 11ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನಕ್ಕೂ ಮುನ್ನವೇ ಎಂಎಲ್‌ಸಿ ನಿಗಮ-ಮಂಡಳಿ ನೇಮಕಾತಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಈಗಾಗಲೇ ಹಲವು ಬಾರಿ ನವದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ನೇಮಕಾತಿಗಳನ್ನು ಮಾಡುತ್ತಾರೆಂಬ ವಿಶ್ವಾಸದಲ್ಲಿ ಆಕಾಂಕ್ಷಿಗಳಿದ್ದಾರೆ.

ಕಳೆದ ಆರು ವಾರಗಳಲ್ಲಿ, ಸಿದ್ದರಾಮಯ್ಯ ಅವರು ಎರಡು ಬಾರಿ ನವದೆಹಲಿಗೆ ಭೇಟಿ ನೀಡಿದ್ದು, ಜುಲೈ 25 ರಂದು ರಾಷ್ಟ್ರ ರಾಜಧಾನಿಗೆ ಮತ್ತೆ ಭೇಟಿ ನೀಡಲಿದ್ದಾರೆ. ಆದರೆ, ಶಿವಕುಮಾರ್ ಅವರಿಗೆ ಇದು ಐದನೇ ಭೇಟಿಯಾಗಲಿದೆ.

ಕುತೂಹಲಕಾರಿಯಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಇದೇ ಅವಧಿಯಲ್ಲಿ ನಾಲ್ಕು ಬಾರಿ ಬೆಂಗಳೂರಿಗೆ ಭೇಟಿ ನೀಡಿದ್ದರು.

ದೆಹಲಿ ಭೇಟಿಯ ಸಮಯದಲ್ಲಿ, ಸಿಎಂ ಮತ್ತು ಡಿಸಿಎಂ ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದರು, ಇದೇ ವೇಳೆ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಿದ್ದರು.

ನಿಗಮ-ಮಂಡಳಿ ಹಾಗೂ ನಾಲ್ಕು ಎಂಎಲ್‌ಸಿ ಸ್ಥಾನಗಳ ಮೇಲೆ ಪ್ರಭಾವ ಬೀರಲು ಇಬ್ಬರೂ ನಾಯಕರು ಪ್ರಯತ್ನಿಸುತ್ತಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Siddaramaaiah And Dk Shivakumar
ನಗರ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ?; ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ 'ಕೆರೆ ಅಧ್ಯಯನ ಸಮಿತಿ': ಡಿ.ಕೆ ಶಿವಕುಮಾರ್

ಈಗಾಗಲೇ ಇಬ್ಬರೂ ನಾಯಕರು ದೆಹಲಿ ಮತ್ತು ಬೆಂಗಳೂರಿನಲ್ಲಿ ಹೈಕಮಾಂಡ್ ಜೊತೆಗೆ ಒಂದೆರಡು ಸಭೆಗಳನ್ನು ನಡೆಸಿ ಮಾತುಕತೆ ನಡೆಸಿದ್ದು, ನಿಗಮ-ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕಾತಿ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ಹುದ್ದೆಗಳನ್ನು ಚುನಾಯಿತ ಪ್ರತಿನಿಧಿಗಳಿಗಲ್ಲದೆ, ಕಾರ್ಯಕರ್ತರಿಗೆ ಸಿಗುವಂತೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉತ್ಸುಕರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಸಿಗುವಂತೆ ಮಾಡಲು ಕಸರತ್ತು ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಆಗಸ್ಟ್ 11 ರಿಂದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ನಾಮನಿರ್ದೇಶನಗಳನ್ನು ಅಂತಿಮಗೊಳಿಸಲಾಗುವುದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ದೆಹಲಿಗೆ ಭೇಟಿ ನೀಡುವ ವೇಳೆ ನಿಗಮ-ಮಂಡಳಿಗಳ ನೇಮಕಾತಿಗಳ ಹೆಸರುಗಳನ್ನು ಅಂತಿಮಗೊಳಿಸುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಾಲ್ಕು ಎಂಎಲ್‌ಸಿ ಸ್ಥಾನಗಳನ್ನು ಖಾಲಿ ಬಿಡುವುದು ಒಳ್ಳೆಯ ಸಂಕೇತವಲ್ಲ, ಬಹುಮತಕ್ಕೆ ಇವರ ನೇಮಕಾತಿ ಮುಖ್ಯವಾಗುತ್ತದೆ. "ನಮಗೆ ಸಂಪೂರ್ಣ ಬಹುಮತವಿರುವ ವಿಧಾನಸಭೆಯಲ್ಲಿ ಕೆಲವು ಮಸೂದೆಗಳು ಅಂಗೀಕಾರವಾಗುವುದನ್ನು ನಾವು ನೋಡಿದ್ದೇವೆ, ಆದರೆ, ಸಂಖ್ಯಾಬಲದ ಕೊರತೆಯಿಂದಾಗಿ ಪರಿಷತ್ತಿನಲ್ಲಿ ಮಸೂದೆಗಳು ಅಂಗೀಕಾರವಾಗುತ್ತಿಲ್ಲ. ಈಗ ಹೆಸರುಗಳನ್ನು ಅಂತಿಮಗೊಳಿಸದಿದ್ದರೆ, ಡಿಸೆಂಬರ್ ವರೆಗೆ ಕಾಯಬೇಕಾಗುತ್ತದೆ ಎಂದು ಹೆಸರನ್ನು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com