
ಬೆಂಗಳೂರು: ನಿಮ್ಮ ರಾಜಕೀಯ ದ್ವೇಷಕ್ಕೆ ಜಾರಿ ನಿರ್ದೇಶನಾಲಯವನ್ನು ಸಾಧನವಾಗಿ ಬಳಕೆ ಮಾಡುವುದನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧದ ಇಡಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ತೀರ್ಪು ಮಹತ್ವದ್ದಾಗಿದೆ. ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಹಲವು ಬಾರಿ ಕೇಂದ್ರ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಹೇಳಿದರು.
ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಇಡಿಯನ್ನು ಸಾಧನವಾಗಿ ಬಳಕೆ ಮಾಡುತ್ತಿದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕವಾದರೂ ಸೇಡಿನ ರಾಜಕೀಯವನ್ನು ನಿಲ್ಲಿಸಬೇಕು ಎಂದು ತಿಳಿಸಿದರು.
Advertisement