ಕರ್ನಾಟಕದಲ್ಲೂ ಚುನಾವಣಾ ಅಕ್ರಮ: ಬಿಜೆಪಿ ಗೆಲುವಿನ ಸತ್ಯ ಈಗ ಬಯಲಾಗುತ್ತಿದೆ!

ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಚುನಾವಣಾ ಅಕ್ರಮ ನಡೆದಿದೆ ಎಂಬ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಂಬಲಿಸಿದ್ದಾರೆ.

ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

CM Siddaramaiah
'100 ಪರ್ಸೆಂಟ್ ಪ್ರೂಫ್ ಇದೆ'; ಕರ್ನಾಟಕದಲ್ಲಿ ಚುನಾವಣಾ ಅಕ್ರಮಕ್ಕೆ ಆಯೋಗ ಅವಕಾಶ ನೀಡಿದೆ: ರಾಹುಲ್ ಗಾಂಧಿ

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು ಎಂದು ಸಿಎಂ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘ಮತಗಳ್ಳತನ’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com