ರಾಹುಲ್ ಗಾಂಧಿ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗಿಯಾಗಿ, ಮಾತನಾಡಿದ ಅವರು, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದ್ರು.
ತೋರಿಕೆಗೆ ಮಾತ್ರ ದೇಶ ಭಕ್ತಿಯ ಹೆಸರಿನಲ್ಲಿ ಬಿಜೆಪಿ ಯುವಕರನ್ನು ವಂಚಿಸುವ ಕೆಲಸ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶ ಎಲ್ಲಾ ಯುವಕರಿಗೆ ಮಾರ್ಗದರ್ಶಿ ಆಗಬೇಕು ಎಂದು ಹೇಳಿದರು. ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಹರಿಹಾಯ್ದ ಅವರು, ವಾಟ್ಸಾಪ್ ಯೂನಿವರ್ಸಿಟಿ, ಫೇಸ್‌ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶ ರವಾನೆ ಆಗ್ತಿದೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಅವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು, ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆಂದು ಶ್ಲಾಘಿಸಿದ್ರು. ತಾವು ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿ ಮೊಮ್ಮಗ ಆಗಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಅಂತ ಸಚಿನೆ ಶ್ಲಾಘಿಸಿದ್ರು.
ನೆಹರೂ ಅವರು 9 ವರ್ಷ ಜೈಲಿನಲ್ಲಿ ಇದ್ರು. ಆದ್ರೆ ವಾಟ್ಸಾಪ್ ಯೂನಿವರ್ಸಿಟಿ ಹಾಗೂ ಫೇಸ್‌ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶ ರವಾನೆ ಆಗ್ತಿದೆ, ಗಾಂಧಿ ಕುಟುಂಬದ ಬಗ್ಗೆ ತಪ್ಪು ಭಾವನೆ ಮೂಡಿಸಲಾಗಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.
ಚುನಾವಣೆ ಮಾತ್ರ ನಮ್ಮ ರಾಜಕೀಯ ಗುರಿಯಾಗಿರಬಾರದು. ಒಂದು ಗುರಿಯನ್ನು ಇಟ್ಟುಕೊಂಡು ರಾಜಕೀಯಕ್ಕೆ ಬರಬೇಕು. ನಿಮ್ಮ ಊರಿನಲ್ಲಿ ನಿಮ್ಮ ಹಿಡಿತವಿದ್ದರೆ ನಾಯಕರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ಎಂದು ಹೇಳಿದರು, 50 ವರ್ಷದಿಂದಲೂ ಆರ್‌ಎಸ್‌ಎಸ್ ಕಚೇರಿ ಮುಂದೆ ಭಾರತದ ಧ್ವಜ ಇರಲಿಲ್ಲ. ನಮ್ಮ ದೇಶದ ಮೊದಲ ಬಜೆಟ್ ಮಂಡಿಸಿದ್ದು ಜವಾಹರ್ ಲಾಲ್ ನೆಹರು. ದೇಶದ ಅಭಿವೃದ್ಧಿಗೋಸ್ಕರ ನೆಹರು ಅವರು ಅವರ ಬಂಗಲೆಯನ್ನು ಬಿಟ್ಟು ಕೊಟ್ಟಿದ್ದಾರೆ ಎಂದು ಹಾಡಿ ಹೊಗಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ