ಸಮಯ ವ್ಯರ್ಥ ಮಾಡದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಿ: JDS ಕಾರ್ಯಕರ್ತರಿಗೆ ಡಿಕೆಶಿ ಕರೆ

ಕರ್ನಾಟಕದಲ್ಲಿ ಇದು ಕಾಂಗ್ರೆಸ್ ವರ್ಷವಾದ್ದರಿಂದ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ತಮ್ಮ ಸಮಯವನ್ನು ವ್ಯರ್ಥ ಮಾಡಬಾರದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಬೇಕು. ಕರ್ನಾಟಕದಲ್ಲಿ ಭವಿಷ್ಯದಲ್ಲಿ ಕಾಂಗ್ರೆಸ್ ಧ್ವಜ ಎತ್ತರಕ್ಕೆ ಹಾರಲಿದೆ.
DK Shivakumar
ಡಿಕೆ ಶಿವಕುಮಾರ್ online desk
Updated on

ಮಂಡ್ಯ: ಕರ್ನಾಟಕದಲ್ಲಿ ನಮ್ಮ ಪಕ್ಷ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯಲಿದ್ದು, ಇನ್ನು ಸಮಯ ವ್ಯರ್ಥ ಮಾಡದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮದ್ದೂರಿನಲ್ಲಿ 1,146 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಯೋಜಿಸಿದ್ದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಇದು ಕಾಂಗ್ರೆಸ್ ವರ್ಷವಾದ್ದರಿಂದ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ತಮ್ಮ ಸಮಯವನ್ನು ವ್ಯರ್ಥ ಮಾಡಬಾರದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಬೇಕು. ಕರ್ನಾಟಕದಲ್ಲಿ ಭವಿಷ್ಯದಲ್ಲಿ ಕಾಂಗ್ರೆಸ್ ಧ್ವಜ ಎತ್ತರಕ್ಕೆ ಹಾರಲಿದೆ. ಪಕ್ಷಗಳನ್ನು ಮೀರಿ ಜನರು ಕಾಂಗ್ರೆಸ್ ಪರವಾಗಿ ನಿಲ್ಲುವ ಸಮಯ ಎದುರಾಗಿದೆ. ಪ್ರಧಾನಿ ಮೋದಿಯವರ ಅಚ್ಚೇ ದಿನ್ ಏನಾಯಿತು? ಅವರು ಭರವಸೆ ನೀಡಿದ 15 ಲಕ್ಷ ರೂ.ಗಳ ಕಥೆ ಏನಾಯಿತು? ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿಯನ್ನು ಕೇಳಿ. ರೈತರು ಮತ್ತು ಸಮಾಜದ ಕಲ್ಯಾಣಕ್ಕಾಗಿ ಇರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.

ಮುದ್ದೂರ ಕಾಂಗ್ರೆಸ್‌ಗೆ ಬಲ ನೀಡಿತು. ಎಸ್‌ಎಂ ಕೃಷ್ಣ ಅವರಂತಹ ನಾಯಕರನ್ನು ನೀಡಿತು, ಎಸ್‌ಎಂ ಕೃಷ್ಣ ಅವರು, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಾಗಿ ತಮ್ಮ ಗ್ರಾಮವಾದ ಸೋಮನಹಳ್ಳಿಗೆ ಕೈಗಾರಿಕಾ ಪ್ರದೇಶವನ್ನು ತಂದರು ಎಂದು ತಿಳಿಸಿದರು.

DK Shivakumar
ಮೈತ್ರಿಯಿಂದಾಗಿ ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್'ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ.ಶಿವಕುಮಾರ್

ಇದೇ ವೇಳೆ ಮಂಡ್ಯದ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಕ್ಕೆ ಕ್ಷೇತ್ರದ ಜನರಿಗೆ ಧನ್ಯವಾದಗಳನ್ನು ಆರ್ಪಿಸಿದರು.

ಜನರ ಬಗ್ಗೆ ಕಾಳಜಿ ವಹಿಸುವ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಕಾಂಗ್ರೆಸ್‌ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದರು.

ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ ಜನರಿಗೆ ಪ್ರತಿಫಲ ನೀಡಲು ನಾವು ಮದ್ದೂರಿನಲ್ಲಿದ್ದೇವೆ. ಮದ್ದೂರಿನಲ್ಲಿ ನೀರಾವರಿ ಕಚೇರಿ ಸ್ಥಾಪನೆಯಾಗಲಿದ್ದು, 550 ಕೋಟಿ ರೂ. ವೆಚ್ಚದಲ್ಲಿ ಕಾಲುವೆಗಳನ್ನು ಆಧುನೀಕರಿಸಲಾಗುವುದು. ನಮ್ಮ ಸರ್ಕಾರ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಹೊಸ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿದ್ದೇವೆ. ದೇಶದ ಯಾವುದೇ ರಾಜ್ಯವು ಜನರನ್ನು ಸಬಲೀಕರಣಗೊಳಿಸಲು 1 ಲಕ್ಷ ಕೋಟಿ ರೂ. ಖರ್ಚು ಮಾಡುವ ಐದು ಗ್ಯಾರಂಟಿಗಳನ್ನು ನೀಡಿಲ್ಲ. ಜೆಡಿಎಸ್ ಈ ರೀತಿ ಮಾಡಿದೆಯೇ? ಎಂದು ಪ್ರಶ್ನಿಸಿದರು.

ಇದೇ ವೇಳೆ ಕಾಂಗ್ರೆಸ್ ಭವನಕ್ಕೆ 2 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಕ್ಕಾಗಿ ಮದ್ದೂರು ಶಾಸಕ ಕೆ.ಎಂ. ಉದಯ್ ಅವರನ್ನು ಶ್ಲಾಘಿಸಿದ ಶಿವಕುಮಾರ್ ಅವರು, 6 ಜನರು ಕಚೇರಿಗೆ ಭೂಮಿಯನ್ನು ದಾನ ಮಾಡಿದ್ದಾರೆ ಎಂದು ಹೇಳಿದರು.

ಎಸ್.ಎಂ. ಕೃಷ್ಣ ಅವರ ಸೋದರಳಿಯ ಗುರುಚರಣ್ ಅವರನ್ನು ಕಣಕ್ಕಿಳಿಸುವ ಬಗ್ಗೆ ನಾನು ಯೋಚಿಸಿದ್ದರೂ, ಸಮೀಕ್ಷಾ ವರದಿಯು ಉದಯ್ ಪರವಾಗಿತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com