ನಾಸೀರ್ ಸಾಬ್ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಕ್ಲೀನ್ ಚಿಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲೇಕೆ FIR ಇಲ್ಲ?

ಖುದ್ದು ರಾಜ್ಯ ಸರ್ಕಾರವೇ " ದ್ವೇಷ ಭಾಷೆ" ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತಗೊಳಿಸುತ್ತಿದೆ.
Laxmi hebbalkar
ಲಕ್ಷ್ಮೀ ಹೆಬ್ಬಾಳ್ಕರ್
Updated on

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್​ಎಸ್​ಎಸ್​ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಹಿಂದೂಗಳ ಧ್ವನಿ ಅಡಗಿಸಲು ಹೊರಟಿದೆ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೆ, ಸರ್ಕಾರಕ್ಕೆ ಸರಣಿ ಪ್ರಶ್ನೆ ಮಾಡಿರುವ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳ ಮೇಲೆ FIR ಹಾಕಿದ್ದೀರಾ? ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ಪುಡಾರಿಗಳನ್ನು ಹಿಂದೆ ಇಟ್ಟುಕೊಂಡಿರುವ ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಅವರ ಮೇಲೆ FIR ಹಾಕಿದ್ದೀರಾ?

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಫೋರೆನ್ಸಿಕ್ ವರದಿಯಲ್ಲಿ ಸಾಬೀತಾದರೂ ಘೋಷಣೆ ಕೂಗೇ ಇಲ್ಲ ಎಂದು ದೇಶದ್ರೋಹಿಗಳನ್ನು ಹಿಂದೆ ಹಾಕಿಕೊಂಡು ಬಂದು ಸತ್ಯ ವರದಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ FIR ಹಾಕಿದ್ದೀರಾ? ಅದು ಪಾಕಿಸ್ತಾನ ಜಿಂದಾಬಾದ್ ಅಲ್ಲ, ನಾಸೀರ್ ಸಾಬ್ ಜಿಂದಾಬಾದ್ ಎಂದು ದೇಶದ್ರೋಹಿಗಳಿಗೆ ಕ್ಲೀನ್ ಚಿಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ FIR ಹಾಕಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

Laxmi hebbalkar
ಸುಹಾಸ್ ಶ್ರದ್ದಾಂಜಲಿಯಲ್ಲಿ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR

ಕೈಲಾಗದವನು ಮೈಪರಚಿಕೊಂಡ ಎಂಬಂತೆ ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲವಾಗಿ, ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜಿ ಆಗಿರುವ ಕಾಂಗ್ರೆಸ್ ಸರ್ಕಾರ ಈಗ ಹಿಂದೂ ಮುಖಂಡರ ಮೇಲೆ ಸುಳ್ಳು ಕೇಸು ದಾಖಲಿಸಿ ತನ್ನ ವೋಟ್ ಬ್ಯಾಂಕ್ ಓಲೈಕೆ ಮಾಡಲು ಹೊರಟಿದೆ. ಹಿಂದೂ ಸಮಾಜದ ಮುಖಂಡರ ಧ್ವನಿ ಅಡಗಿಸಲು ಪ್ರಯತ್ನ ಪಟ್ಟರೆ ಪರಿಣಾಮ ನೆಟ್ಟಗಿರುವುದಿಲ್ಲ. ಹುಷಾರ್ ಎಂದೂ ಎಚ್ಚರಿಸಿದ್ದಾರೆ.

ಬಿಜೆಪಿ ನಾಯಕ ಸುನೀಲ್ ಕುಮಾರ್ ಅವರು ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ "ಪೊಲೀಸ್ ರಾಜ್" ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ.

ಖುದ್ದು ರಾಜ್ಯ ಸರ್ಕಾರವೇ " ದ್ವೇಷ ಭಾಷೆ"ಯ ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತಗೊಳಿಸುತ್ತಿದೆ. ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು ? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು‌ ಕ್ರಮವೇ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com