ಸಿದ್ದರಾಮಯ್ಯ, ಡಿಕೆಶಿ ಕೈಗೆ ರಕ್ತ ಅಂಟಿದೆ, ಧಮ್‌ ಇದ್ರೆ ಅವರ ರಾಜೀನಾಮೆ ಪಡೆಯಿರಿ: ಕಾಂಗ್ರೆಸ್ ಹೈಕಮಾಂಡ್ ಗೆ ಶೋಭಾ ಸವಾಲು

ಜೂನ್ 4 ರಂದು ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆಗಾರರಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Updated on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ "ಕೈಗೆ ರಕ್ತ ಅಂಟಿದೆ" ಎಂದು ಶನಿವಾರ ಟೀಕಿಸಿದ್ದಾರೆ.

ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವೆ, ಜೂನ್ 4 ರಂದು ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆಗಾರರಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶೋಭಾ ಕರಂದ್ಲಾಜೆ, ಸತ್ಯ ಹೊರಬರಲು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಶೋಭಾ ಕರಂದ್ಲಾಜೆ
Bengaluru stampede: CM ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್ ವಿರುದ್ಧ ಪೊಲೀಸರಿಗೆ ಬಿಜೆಪಿ ದೂರು

ಘಟನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೌನವನ್ನು ಪ್ರಶ್ನಿಸಿದ ಶೋಭಾ ಕರಂದ್ಲಾಜೆ, "ಧಮ್‌ ಇದ್ದರೆ" ಸಿಎಂ ಮತ್ತು ಉಪಮುಖ್ಯಮಂತ್ರಿ ರಾಜೀನಾಮೆ ಪಡೆಯಲಿ ಎಂದು ಸವಾಲು ಹಾಕಿದರು.

ಕಾಲ್ತುಳಿತದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೈಯಲ್ಲಿ ರಕ್ತ ಅಂಟಿದೆ. ತಮ್ಮ ಕೈಯಲ್ಲಿರುವ ರಕ್ತವನ್ನು ಪೊಲೀಸರ ಮೂತಿಗೆ ಒರೆಸ್ತಿದ್ದಾರೆ. ಒಬ್ಬ ಪ್ರಾಮಾಣಿಕ ಕಮಿಷನರ್​ ಅನ್ನು ಸಸ್ಪೆಂಡ್ ಮಾಡಿದ್ದಾರೆ. ಬೆಂಗಳೂರಿನ ಇತಿಹಾಸದಲ್ಲೇ ಇದೊಂದು ಕಪ್ಪು ಚುಕ್ಕೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.

ಕಾಂಗ್ರೆಸ್​ ಸರ್ಕಾರದವರು ಆರ್​ಸಿಬಿ ಸೆಲೆಬ್ರೇಷನ್ ಅನ್ನು ಹೆಣದ ಮೇಲೆ ಮಾಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಾ ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದರು.

"ಕರ್ನಾಟಕ ಕಾಂಗ್ರೆಸ್ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಹೊರತುಪಡಿಸಿ ಬೇರೆ ನಾಯಕರಿಂದ ದಿವಾಳಿಯಾಗಿದೆಯೇ? ಈ ಇಬ್ಬರೂ ತನಿಖೆ ಎದುರಿಸಲಿ. ಇತರರನ್ನು ಸಿಎಂ ಮತ್ತು ಉಪಮುಖ್ಯಮಂತ್ರಿಗಳನ್ನಾಗಿ ಮಾಡಲಿ. ಎಲ್ಲದಕ್ಕೂ ರಾಜ್ಯಕ್ಕೆ ಬರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಈಗ ಎಲ್ಲಿ ಅಡಗಿಕೊಂಡಿದ್ದಾರೆ?" ಎಂದು ಪ್ರಶ್ನಿಸಿದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪಕ್ಷದ ದೆಹಲಿ ಹೈಕಮಾಂಡ್‌ಗೆ ಎಟಿಎಂ ಆಗಿರುವುದರಿಂದ ಅವರು ಈ ವಿಷಯದ ಬಗ್ಗೆ ಮೌನವಾಗಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com