ಸಂಪುಟ ಪುನಾರಚನೆ ಸದ್ಯಕ್ಕಿಲ್ಲ; ಹೈಕಮಾಂಡ್ ಮನವೊಲಿಸುವಲ್ಲಿ CM-DCM ಯಶಸ್ವಿ; ಆಕಾಂಕ್ಷಿಗಳಿಗೆ ನಿರಾಸೆ!

ಸಂಪುಟ ಪುನಾರಚನೆ ವಿಚಾರಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುವ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳು ಇದೀಗ ನಿರಾಶೆಗೊಂಡಿದ್ದಾರೆಂದು ತಿಳಿದುಬಂದಿದೆ.
ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
Updated on

ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆಗೆ ಸೂಚನೆ ನೀಡುವ ಚಿಂತನೆಯಲ್ಲಿದ್ದ ಹೈಕಮಾಂಡ್ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮರ್ ಅವರು ಯಶಸ್ವಿಯಾಗಿದ್ದು, ವರ್ಷಾಂತ್ಯದ ವೇಳೆಗೆ ಪ್ರಕ್ರಿಯೆ ನಡೆಸಲು ಒಪ್ಪಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಮಂಗಳವಾರ ನವದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ಅಧಿಕಾರಿಗಳೊಂದಿಗಿನ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಆದರೂ, ಈ ವಿಷಯ ಚರ್ಚೆಗೆ ಬಂದಿದ್ದು, ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಮನವೊಲಿಸುವಲ್ಲಿ ಸಿಎಂ ಹಾಗೂ ಡಿಸಿಎಂ ಯಶಸ್ವಿಯಾಗಿದ್ದಾರೆಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ಈಗಾಗಲೇ ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸು ಕುಸಿದಿದ್ದು, ಈ ಮಧ್ಯೆ ಯಾವುದೇ ಬದಲಾವಣೆ ಮಾಡಿದರೂ, ಅದು ದೋಷವನ್ನು ಒಪ್ಪಿಕೊಂಡಿದ್ದೇವೆಂಬ ಸಂದೇಶ ರವಾನಿಸಲಿದೆ, ಹೀಗಾಗಿ, ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಮನವೊಲಿಸಿದ್ದಾರೆಂದು ತಿಳಿದುಬಂದಿದೆ. ಆದರೆ, ನವೆಂಬರ್ ನಲ್ಲಿ ಪ್ರಕ್ರಿಯೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಕಾಲ್ತುಳಿತ ಘಟನೆ ಬಳಿಕ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಈ ಸಂಬಂಧ ಹೈಕಮಾಂಡ್ ನಾಯಕರು ಅಸಮಾಧಾನಗೊಂಡು ಸಮಸ್ಯೆ ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ನಾಯಕತ್ವಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಕಾಂಗ್ರೆಸ್ ಮತ್ತು ಸರ್ಕಾರವು ಜಾತಿ ಜನಗಣತಿಯನ್ನು ಮತ್ತೆ ಕೈಗೆತ್ತಿಕೊಳ್ಳುವ ನಿರ್ಧಾರ ಕೈಗೊಂಡಿದ್ದು, ಈ ಮೂಲಕ ಕಾಲ್ತುಳಿತ ಘಟನೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಸಂಪುಟ ಪುನಾರಚನೆ ವಿಚಾರಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುವ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳು ಇದೀಗ ನಿರಾಶೆಗೊಂಡಿದ್ದಾರೆಂದು ತಿಳಿದುಬಂದಿದೆ.

ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆ: ಹೈಕಮಾಂಡ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ; Video

ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆಯೇ ಪಕ್ಷದ ಹಲವು ಹಿರಿಯ ನಾಯಕರು ಸೇರಿದಂತೆ ಸಚಿವರು ಕೇಂದ್ರ ನಾಯಕತ್ವನ್ನು ಮೆಚ್ಚಿಸಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು.

ತಮ್ಮ ತಮ್ಮ ಸಚಿವಾಲಯಗಳ ಸಾಧನೆಗಳನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ತೆಗೆದುಕೊಂಡು ದೆಹಲಿಗೆ ಭೇಟಿ ನೀಡಿದ್ದರು. ಹೊಸಪೇಟೆಯಲ್ಲಿ ಕಾಂಗ್ರೆಸ್ ಸಮಾವೇಶದ ಬಳಿಕ ಅನೇಕ ನಾಯಕರು ಸಚಿವರಾಗುವ ಬಯಕೆಯನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.

ಈ ನಡುವಲ್ಲೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಿದಾಗ ಸಂಪುಟ ಪುನಾರಚನೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಆಶಿಸಿದ್ದರು. ಆದರೆ, ಈ ಆಸೆ, ನಿರಾಸೆಗೊಳ್ಳುವಂತಾಗಿದೆ.

ಪ್ರಸ್ತುತದ ಪರಿಸ್ಥಿತಿಯಲ್ಲಿ ಸಂಪುಟದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿದರೂ ಅದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಇದು ಕಾಲ್ತುಳಿತ ಘಟನೆಯಲ್ಲಿ ಸರ್ಕಾರ ತಪ್ಪನ್ನು ಒಪ್ಪಿಕೊಂಡಂತಾಗುತ್ತದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಕೆಲ ಸಚಿವರ ಖಾತೆಗಳಲ್ಲಿ ಬದಲಾವಣೆಗಳಾಗಬಹುದು. ಆದರೆ, ಈಗಲೇ ಅಳ್ಲ. ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನರಾಚನೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ವಿಧಾನ ಪರಿಷತ್‌ ನಾಮನಿರ್ದೇಶನ: ಕಾಂಗ್ರೆಸ್ ನಲ್ಲಿ ಅಸಮಾಧಾನ; ಪಟ್ಟಿ ಇನ್ನೂ ತಲುಪಿಲ್ಲ ರಾಜಭವನ!

ಈ ನಡುವೆ ಹೈಕಮಾಂಡ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಇಂದಿನ ಸಭೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿಚಾರ ಚರ್ಚೆ ಆಗಿದೆ. ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಬಗ್ಗೆ ವಿವರಿಸಿದ್ದೇವೆ. ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಮಾತುಕತೆ ಮಾಡಿದ್ದೇವೆ. ಇತ್ತೀಚಿನ ರಾಜಕೀಯ ವಿದ್ಯಮಾನಗಳ ಚರ್ಚೆಯೂ ಆಗಿದೆ. ಇದೇ ತಿಂಗಳ 13ರಂದು 16ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ತೆರಳಲಿದ್ದೇನೆಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಾತನಾಡಿ, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಾವುದೇ ಚರ್ಚೆಯನ್ನೂ ಮಾಡಿಲ್ಲ. ವಿಧಾನಪರಿಷತ್‌ ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ವಿಚಾರವಾಗಿ ಹೈಕಮಾಂಡ್‌ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com